ವಯಸ್ಸಾಯಿತೆಂದು ಕೊರಗದೆ ಲವಲವಿಕೆಯಿಂದಿರಿ


Team Udayavani, Oct 3, 2018, 5:27 PM IST

3-october-23.gif

ಹಾವೇರಿ: ಎಲ್ಲರಿಗೂ ಬಾಲ್ಯ, ಯೌವ್ವನ ಹಾಗೂ ವೃದ್ಧಾಪ್ಯ ಸಹಜವಾದ ಪ್ರಕ್ರಿಯೆ ಆದರೆ ವಯಸ್ಸಾಯಿತು ಎಂದು ಕೊರಗುತ್ತ ಸತ್ತವರಂತೆ ಬದುಕಬಾರದು. ಭೂಮಿ ಮೇಲೆ ಇರುವಷ್ಟು ದಿನ ಲವಲವಿಕೆ ಚಟುವಟಿಕೆಯಿಂದ ಜೀವನ ನಡೆಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಸ್‌.ಎಚ್‌. ರೇಣುಕಾದೇವಿ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಆಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ನಿವೃತ್ತ ನೌಕರರ ಸಂಘದ ಆಶ್ರಯದಲ್ಲಿ ಹೊಸಮಠದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಭೂಮಿ ಯಾರನ್ನೂ ಲೆಕ್ಕಕ್ಕೆ ಇಟ್ಟಿಲ್ಲ ಹಾಗೂ ಭೂಮಿಗೆ ಯಾರೂ ಅನಿವಾರ್ಯರಲ್ಲ. ಇದನ್ನು ಮೊದಲು ತಿಳಿಯಬೇಕು. ಇಳಿ ವಯಸ್ಸಿನಲ್ಲಿ ಸಾಮಾಜಿಕ ಕಾರ್ಯಗಳಲ್ಲಿ, ಪರೋಪಕಾರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಆರ್ಥಿಕವಾಗಿ ಸದೃಢವಾಗಿದ್ದವರು ದುರ್ಬಲರಿಗೆ ಸಹಾಯ ಮಾಡಬೇಕು. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಇತರರಿಗೆ ಮಾದರಿಯಾಗಿಬೇಕು ಎಂದು ಹೇಳಿದರು. ವಯಸ್ಸು ದೇಹಕ್ಕೆ ಹೊರತು ಮನಸ್ಸಿಗಲ್ಲ, 60ಕ್ಕೆ ಅರಳುಮರಳು ಅಲ್ಲ ‘ಮರಳಿ ಅರಳು’ ಎಂದು ತಿಳಿದು ಹಿರಿಯರು ಸದಾಕಾಲ ಲವಲವಿಕೆ, ಉತ್ಸಾಹದಿಂದ ಜೀವನ ನಡೆಸಬೇಕು. ಮನೆಯಲ್ಲಿ ನನಗೆ ಗೌರವ ಕೊಡುತ್ತಿಲ್ಲ, ನನ್ನ ಮಾತು ಯಾರೂ ಕೇಳುತ್ತಿಲ್ಲ ಎಂಬ ಮನೋಭಾವದಿಂದ ಮೊದಲು ಹೊರಬನ್ನಿ. ನಿಮ್ಮನ್ನು ಯಾರು ಗೌರವಿಸುತ್ತಾರೋ ಅವರೊಂದಿಗೆ ಬೆರೆಯಿರಿ. ನಿಮ್ಮ ಸ್ನೇಹಿತರು, ಅಕ್ಕಪಕ್ಕದವರನ್ನು ಪ್ರೀತಿಸಿ, ಬೇರೆಯವರನ್ನು ನಗಿಸಿ, ನೀವು ಸದಾ ನಗುತ್ತಿರಿ ಎಂದರು.

ಹಿರಿಯ ಸಿವಿಲ್‌ ನ್ಯಾಯಾ ಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೈ.ಎಲ್‌. ಲಾಡಖಾನ್‌ ಮಾತನಾಡಿ, ಹಿರಿಯ ನಾಗರಿಕರ ಕಾಯ್ದೆಯು 2007ರಲ್ಲಿ ಜಾರಿಗೆ ಬಂದಿದ್ದು, ಮಕ್ಕಳಿಂದ ತಿರಸ್ಕಾರಕ್ಕೊಳಗಾದ ಹಾಗೂ ಸೌಲಭ್ಯಗಳಿಂದ ವಂಚಿತರಾದ ಹಿರಿಯ ನಾಗರಿಕರು ಕಾನೂನು ಮೂಲಕ ನ್ಯಾಯ ಪಡೆದುಕೊಳ್ಳಬೇಕು. ಹುಟ್ಟಿನ ಪೂರ್ವದಿಂದ ಮರಣದ ವರೆಗೆ ಕಾನೂನು ಅವಶ್ಯಕ. ದೇಶದಲ್ಲಿನ ಕಾನೂನು ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ನಾಗರಿಕ ಸಮಾಜದಲ್ಲಿನ ನಮ್ಮ ಹಕ್ಕು ಹಾಗೂ ಕರ್ತವ್ಯವನ್ನು ಅರಿಯಬೇಕು ಎಂದರು. ಸನ್ಮಾನ: ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಿಂದ ಸಿದ್ದುಮತಿ ನೆಲವಿಗಿ ಹಾಗೂ ಜಿ.ಎಂ. ಮಠದ, ಶಿಕ್ಷಣ ಕ್ಷೇತ್ರದಿಂದ ಬಸಮ್ಮ ಹಳಕೊಪ್ಪ, ಸಾಮಾಜಿಕ ಕ್ಷೇತ್ರದಿಂದ ಚನ್ನಬಸಪ್ಪ ವೀರಪ್ಪ ಶೆಟ್ಟರ ಹಾಗೂ ಕಣಸಿದ್ಧಗೇರಿಯ ಹಾಲಪ್ಪ ಬಳಗಾವಿ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲ ಸಿ.ಜಿ. ನೆಗಳೂರ, ಹಿರಿಯ ನಾಗರಿಕರ ಕಾಯ್ದೆ ಕುರಿತು ಹಾಗೂ ನಗರ ಪೊಲೀಸ್‌ ಠಾಣೆಯ ಎಸ್‌.ಬಿ.ಸಾಗರ ಪೊಲೀಸ್‌ ದೂರು ಪ್ರಾಧಿಕಾರ ರಚನೆಯ ಬಗ್ಗೆ ಉಪನ್ಯಾಸ ನೀಡಿದರು. ಅಪರ ಜಿಲ್ಲಾ ಧಿಕಾರಿ ವಿನೋದ ಹೆಗ್ಗಳಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಕಾರ್ಯದರ್ಶಿ ದೇವರಾಜ ನಾಯ್ಡು ಹಾಗೂ ನಿವೃತ್ತ ಕೃಷಿ ಅಧಿಕಾರಿ ಎಸ್‌.ಬಿ.ಅಣ್ಣಿಗೇರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.