ರೈತರ ಸಾಲ ಸಂಪೂರ್ಣ ಮನ್ನಾ ಆಗಲಿ

Team Udayavani, Aug 22, 2017, 3:30 PM IST

22-DV-4.jpg

ದಾವಣಗೆರೆ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ, ಸ್ವಾಮಿನಾಥನ್‌ ವರದಿ ಜಾರಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಸೋಮವಾರ ರೈತರು, ಕೃಷಿ ಕಾರ್ಮಿಕರು ಮತ್ತು ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಕಳೆದ 5-6 ವರ್ಷದಿಂದ ಸತತ ಬರದ ಸುಳಿಯಲ್ಲಿ ಸಿಲುಕಿರುವ ರೈತರು ಸಾಲ ಪಾವತಿಸುವುದರಲಿ ಜೀವನ ನಿರ್ವಹಣೆ ಮಾಡಲಾರದಂತಹ ಸ್ಥಿತಿಯಲ್ಲಿದ್ದಾರೆ. ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಸಹಕಾರ ಸಂಘಗಳಲ್ಲಿನ 50 ಸಾವಿರ ರೂ. ಸಾಲ ಮನ್ನಾ ಮಾಡಿದೆ. ಆದರೆ, ಅದಕ್ಕೂ ಹಲವಾರು ಷರತ್ತು ವಿಧಿಸಿದೆ. ಸಾಲ ಮನ್ನಾ ಸಮಪರ್ಕವಾಗಿಲ್ಲ. ಷರತ್ತು ತೆಗೆದು, ಸಾಲ ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು
ಒತ್ತಾಯಿಸಿದರು.

ಕಾರ್ಪೋರೇಟ್‌ ವಲಯ, ಬಂಡವಾಳಗಾರರ 1 ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಬಗ್ಗೆ ಮುಂದಾಗುತ್ತಿಲ್ಲ. ರೈತರ ಬಗ್ಗೆ ಮೊಸಳೆ ಕಣೀರು ಸುರಿಸುವ ಕೇಂದ್ರ ಸರ್ಕಾರಕ್ಕೆ ನಿಜವಾಗಿಯೂ ಕಾಳಜಿ ಇದ್ದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಕೊಡಬೇಕು ಎಂಬ ಹಲವಾರು ವರ್ಷದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ರಚಿಸಿದ್ದ ಸ್ವಾಮಿನಾಥನ್‌ ಆಯೋಗ ವರದಿ ಸಲ್ಲಿಸಿ, ಅನೇಕ ವರ್ಷವೇ ಕಳೆದಿವೆ. ಸ್ವಾಮಿನಾಥನ್‌ ವರದಿ ಜಾರಿ ಮಾಡದೇ ರೈತರನ್ನು ಆತಂಕಕೀಡುಮಾಡಿದೆ. ಈ ಕೂಡಲೇ ಸ್ವಾಮಿನಾಥನ್‌ ವರದಿ ಜಾರಿಗೊಳಿಸುವ ಮೂಲಕ ರೈತರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ತುಂಗಭದ್ರಾ ನದಿ, ತುಂಗಾ ಕಾಲುವೆಯಿಂದ ಜಿಲ್ಲೆಯ ಎಲ್ಲಾ ಕೆರೆ ತುಂಬಿಸುವುದು, ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಗರ್ಭಗುಡಿ ಬ್ಯಾರೇಜ್‌ ಕಾಮಗಾರಿಗೆ ಚಾಲನೆ, ಬೆಳೆ ವಿಮೆ ಕಟ್ಟಿಸಿಕೊಳ್ಳುವ ಅವಧಿ ವಿಸ್ತರಣೆ, ಗೋಶಾಲೆಗಳಿಗೆ ಸಮರ್ಪಕ ಮೇವು, ಖಾತರಿ ಯೋಜನೆಯಡಿ ಕೃಷಿಕೂಲಿಕಾರ್ಮಿಕರಿಗೆ 200 ದಿನ ಕೆಲಸ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.

ಒಕ್ಕೂಟದ ಮುಖಂಡರಾದ ಪಾಲವನಹಳ್ಳಿ ಪ್ರಸನ್ನಕುಮಾರ್‌, ಅರುಣ್‌ಕುಮಾರ್‌ ಕುರುಡಿ, ಬಲ್ಲೂರು ರವಿಕುಮಾರ್‌, ವಾಸನದ ಓಂಕಾರಪ್ಪ, ಚಿಕ್ಕನಹಳ್ಳಿ ಮಲ್ಲೇಶಪ್ಪ, ಹೊಸಳ್ಳಿ ಮಲ್ಲೇಶ್‌, ಇ. ಶ್ರೀನಿವಾಸ್‌, ಆವರಗೆರೆ ವಾಸು, ಎನ್‌. ಶಶಿಧರ್‌, ಮಧು ತೊಗಲೇರಿ, ಮೌಲಾನಾಯ್ಕ, ಬುಳ್ಳಾಪುರದ ಹನುಮಂತಪ್ಪ, ಹಾಲೇಶ್‌ನಾಯ್ಕ, ಗುಡಿಹಳ್ಳಿ ಹಾಲೇಶ್‌, ಪಿ. ಷಣ್ಮುಖಸ್ವಾಮಿ ಇತರರು ಇದ್ದರು. 

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.