ಆರೋಗ್ಯ ಸಚಿವರು ರಾಜೀನಾಮೆ ನೀಡಲಿ: ರೇಣುಕಾಚಾರ್ಯ


Team Udayavani, May 5, 2021, 9:11 PM IST

Let the Health Minister resign

ಹೊನ್ನಾಳಿ: ರಾಜ್ಯದಲ್ಲಿ ಕೋವಿಡ್ ನಿಂದಾಗಿ ಸಾವು ಹೆಚ್ಚಾಗುತ್ತಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ತಕ್ಷಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಎಂ ರಾಜಕಿಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.

ಗುರುವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ  ಅವರು ಮಾತನಾಡಿದರು. ನನಗೆ ಎರಡು ಖಾತೆ ಬೇಕು ಎಂದು ಡಾ.ಸುಧಾಕರ್ ಹಠ ಮಾಡಿ ಎರಡು ಖಾತೆಗಳನ್ನು ಪಡೆದರು. ಇದೇನಾ ಎರಡು ಖಾತೆಗಳನ್ನು ನಿಭಾಯಿಸುವ ವೈಖರಿ ಎಂದು ಅವರು ಕಿಡಿ ಕಾರಿದರು.

ಕೆಲ ಸಚಿವರ ದುರ್ವತನೆ, ನಡವಳಿಕೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದ್ದು ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಚರ್ಚೆ ಕೂಡ ನಡೆಸಿದ್ದೇನೆ. ಮುಖ್ಯಮಂತ್ರಿಗಳ ವೇಗಕ್ಕೆ ಸರಿಯಾಗಿ ಸಚಿವ ಸಂಪುಟದ ಸಚಿವರು ಕೆಲಸ ಮಾಡುತ್ತಿಲ್ಲ. ಸಚಿವರು ಅವರಿಗೆ ಸಾಥ್ ನೀಡುವ ಮೂಲಕ ಕೊರೊನಾ ತಡೆಗೆ ಮುಂದಾಗಬೇಕಿದೆ ಎಂದರು.

ಕೊರೊನಾ ಅಲೆ ಅಬ್ಬರಿಸುತ್ತಿರುವ ಸಂದರ್ಭದಲ್ಲಿ ವಿಪಕ್ಷಗಳು ಸುಖಾ ಸುಮ್ಮನೆ ಟೀಕೆಗಿಳಿದು ಬೊಬ್ಬೆ ಹೊಡೆಯುತ್ತಿವೆ ಟೀಕಿಸುವ ಬದಲು ಆರೋಗ್ಯಕರ ಹಾಗೂ ವೈಜ್ಞಾನಿಕ ಸಲಹೆಗಳನ್ನು ನೀಡಲಿ ಎಂದು  ಹೇಳಿದರು.

ಇದನ್ನೂ ಓದಿ:ಚೆನ್ನೈ : ಸರ್ಕಾರಿ ಆಸ್ಪತ್ರೆಯಲ್ಲಿ 13 ರೋಗಿಗಳ ಸಾವು : ಆಕ್ಸಿಜನ್ ಕೊರತೆ ಆರೋಪ

ಕೋವಿಡ್ ಸಂಬಂಧ ಚಾಮರಾಜನಗರದಲ್ಲಿ ನಡೆದ ಸಾವಿನ ಪ್ರಕರಣ ಹಾಗೂ ಬೆಂಗಳೂರು ನಗರದಲ್ಲಿ ಬೆಡ್ ಮಾರಾಟ ದಂಧೆಗಳು ತಲೆ ತಗ್ಗಿಸುವ ಪ್ರಕರಣಗಳು. ಇಂತಹ ಕೆಲಸ ಮಾಡಿದ ವ್ಯಕ್ತಿಗಳು ನಿಜವಾಗಿಯೂ ಪಾಪಿಗಳು. ಅವರಿಗೆ ಭಗವಂತನೇ ಶಿಕ್ಷಿಸಲಿ ಎಂದರು.

ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರಿಗೆ ದೂರವಾಣಿ ಮೂಲಕ ಸಾವು ಬದುಕಿನ ಹೋರಾಟದಲ್ಲಿರುವ ಜನರಿಗೆ ಸ್ಪಂದಿಸುವ ಕಾರ್ಯಮಾಡಿ ಎಂದು ಕರೆ ಮಾಡಿದರೆ ಕರೆಗಳನ್ನು ಸ್ವೀಕರಿಸಲಿಲ್ಲ. ನಂತರ ಸಂದೇಶಗಳನ್ನು ಹಾಕಿ ವಾಟ್ಸಾಪ್ ಮೂಲಕ ಕಳಿಸಿದ್ದೆ. ಇದ್ಯಾವುದಕ್ಕು ಉತ್ತರ ನೀಡಲಿಲ್ಲ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಅವರ ಗಮನಕ್ಕೆ ತರುವೆ ಎಂದರು.

ಮುಖ್ಯಮಂತ್ರಿಗಳು ಎರಡು ಬಾರಿ ಕೋವಿಡ್ ಸೋಂಕಿಗೆ ಒಳಪಟ್ಟರು. ಇದೀಗ ಗುಣಮುಖರಾಗಿ ಜನತೆಯ ಆರೋಗ್ಯದ ದೃಷ್ಟಿಯಿಂದ ಅವರೇ ಫೀಲ್ಡಿಗಿಳಿದು ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಖಾಸಗೀ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಭಾರತಾಂಬೆಯ ಮಕ್ಕಳನ್ನು ರಕ್ಷಣೆ ಮಾಡಲು ಕೋವಿಡ್ ವಿರುದ್ದ ಸಾಕಷ್ಟು ನಿಯಮಗಳನ್ನು ಜಾರಿ ಮಾಡಿದ್ದು ಪ್ರತಿಯೊಬ್ಬರು ಅದನ್ನು ಪಾಲನೆ ಮಾಡಬೇಕಾಗಿದೆ ಎಂದರು. ಅದೇ ರೀತಿ ಮುಖ್ಯಮಂತ್ರಿಗಳೂ ಕೂಡ ರಾಜ್ಯದಲ್ಲಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನ ಜಾರಿ ಮಾಡಿದ್ದು ಪ್ರತಿಯೊಬ್ಬರೂ ಇದನ್ನು ಕಡ್ಡಾಯವಾಲಿ ಪಾಲಿಸಬೇಕು ಎಂದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.