ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಆಗಲಿ


Team Udayavani, Nov 12, 2019, 11:43 AM IST

dg-tdy-2

ದಾವಣಗೆರೆ: ಮಕ್ಕಳ ಸರ್ವತೋಮುಖ ಅಭಿವೃದ್ಧಿ,ಸೌಲಭ್ಯಕ್ಕಾಗಿ ಮಕ್ಕಳಿಗಾಗಿಯೆ ಪ್ರತ್ಯೇಕ ಸಚಿವಾಲಯ, ಸಚಿವರ ನೇಮಕಕ್ಕೆ ರಾಜ್ಯ ಸರ್ಕಾರ ಚಿಂತನೆ ಮಾಡಬೇಕು ಎಂದು ಮಕ್ಕಳ ಹಕ್ಕುಗಳ ಕ್ಲಬ್‌ ಒಕ್ಕೂಟ ಜಿಲ್ಲಾ ಅಧ್ಯಕ್ಷೆ ಎಚ್‌. ಕರಿಬಸಮ್ಮ ಒತ್ತಾಯಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದೆ. ಮಕ್ಕಳಿಗಾಗಿ ಬಿಡುಗಡೆಯಾಗುವ ಅನುದಾನ, ನೀಡಲಾಗುವ ಸೌಲಭ್ಯಗಳ ಬಗ್ಗೆ ಗೊತ್ತೇ ಆಗುವುದಿಲ್ಲ. ದೇಶದ ಮುಂದಿನ ಪ್ರಜೆಗಳಾದ ಮಕ್ಕಳಿಗಾಗಿಯೇ ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯ, ಸಚಿವರನ್ನ ನೇಮಕ ಮಾಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಗ್ರಾಮ ಪಂಚಾಯತಿಗಳ ಮೂಲಕವೇ ಕಡ್ಡಾಯವಾಗಿ ಮಕ್ಕಳ ಗ್ರಾಮ ಸಭೆ ನಡೆಸಬೇಕು. ಗ್ರಾಮ ಪಂಚಾಯತಿ ಪ್ರತಿನಿಧಿಗಳು, ಅಧಿಕಾರಿಗಳು ಮಕ್ಕಳ ಗ್ರಾಮ ಸಭೆ ನಡೆಸುವುದರಿಂದ ಮಕ್ಕಳ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದು, ಪರಿಹಾರ ದೊರೆಯಲಿದೆ. ಹಾಗಾಗಿ ಎಲ್ಲಾ ಗ್ರಾಮ ಪಂಚಾಯತಿಗಳೇ ಕಡ್ಡಾಯವಾಗಿ ಮಕ್ಕಳ ಗ್ರಾಮ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.

ಮಕ್ಕಳ ಸಮಸ್ಯೆಗೆ ಸ್ಪಂದಿಸುವಂತಹ ಗ್ರಾಮ ಪಂಚಾಯತಿಗಳ ಗುರುತಿಸಿ, ಪುರಸ್ಕರಿಸುವುದರಿಂದ ಇತರೆ ಗ್ರಾಮ ಪಂಚಾಯತ್‌ ಗಳಲ್ಲೂ ಜಾಗೃತಿ ಮೂಡಲು ಸಹಾಯವಾಗುತ್ತದೆ. ಪ್ರತಿ ವರ್ಷ ಜಿಲ್ಲೆಗೆ ಒಂದು ಪಂಚಾಯತಿಗೆ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ…ಎಂದು ಪುರಸ್ಕಾರ ನೀಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು. ಎಲ್ಲಾ ಶಾಲೆಗಳಲ್ಲಿರುವ ಮಕ್ಕಳ ಹಕ್ಕುಗಳ ಕ್ಲಬ್‌ಗಳನ್ನು ಸರ್ಕಾರವೇ ನಡೆಸುವುದರಿಂದ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯವರು ಜವಾಬ್ದಾರಿಯಿಂದ ಮಕ್ಕಳ ಹಕ್ಕುಗಳ ಕ್ಲಬ್‌ ನಿರ್ವಹಣೆ ಮಾಡುತ್ತವೆ ಎಂದು ಅಭಿಪ್ರಾಯಪಟ್ಟರು. ಒಕ್ಕೂಟದ ಉಪಾಧ್ಯಕ್ಷ ಡಿ.ಎಸ್‌. ಮನೋಜ್‌ ಮಾತನಾಡಿ, ಗ್ರಾಮ ಪಂಚಾಯತ್‌ಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ಕಡ್ಡಾಯವಾಗಿ ರಚನೆ ಆಗಬೇಕು. ಗ್ರಾಮ ಪಂಚಾಯತಿಗಳೇ ನಡೆಸಬೇಕು. ಕೆಡಿಪಿ ಸಭೆಯಲ್ಲಿ ಮಕ್ಕಳ ರಕ್ಷಣಾ ಸಮಿತಿ ಅಜೆಂಡಾ ಆಗುವ ಜೊತೆಗೆ ಚರ್ಚೆ ಆಗಬೇಕು ಎಂದು ಒತ್ತಾಯಿಸಿದರು.

ಪ್ರತಿ ವರ್ಷ ಪ್ರಧಾನಮಂತ್ರಿಗಳು ರಾಷ್ಟ್ರೀಯ ಸಮಾಲೋಚನಾ ಸಭೆ ಹಮ್ಮಿಕೊಂಡು ಮಕ್ಕಳ ಅಹವಾಲು ಕೇಳಬೇಕು. ದೇಶದ್ಯಾಂತ ಶೇ.41ರಷ್ಟಿರುವ ಮಕ್ಕಳಿಗೆ ಅವರ ಹಕ್ಕು, ಸವಲತ್ತು ಒದಗಿಸಲು ಅನುಕೂಲ ಆಗುವಂತೆ ಬಜೆಟ್‌ ನಲ್ಲಿ ಶೇ.6 ರಿಂದ 9 ರಷ್ಟು ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಡಾನ್‌ಬಾಸ್ಕೋ ಸಂಸ್ಥೆ ನಿರ್ದೇಶಕ ಫಾ| ಸಿರಿಲ್‌ ಸಗಾಯ್‌ ರಾಜ್‌ ಮಾತನಾಡಿ, ಡಾನ್‌ಬಾಸ್ಕೋ ಸಂಸ್ಥೆ ಬಾಲ ಕಾರ್ಮಿಕತೆ ನಿರ್ಮೂಲನೆ, ಬಾಲಕಾರ್ಮಿಕರನ್ನು ಮುಖ್ಯವಾಹಿನಿಗೆ ತರುವ, ಮಕ್ಕಳ ಹಕ್ಕುಗಳ ಕ್ಲಬ್‌ ರಚನೆ ವಿವಿಧ ರಚನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿಸಿದರು. ಮಕ್ಕಳ ಹಕ್ಕುಗಳ ಕ್ಲಬ್‌ ಒಕ್ಕೂಟದ ಎಂ. ಕರಿಬಸಪ್ಪ, ಟಿ. ಅಂಜಿನಪ್ಪ, ಫಾ| ಜೋಸ್‌ ಜೋಸೆಫ್‌, ಮಂಜುನಾಥ್‌, ಈರಾನಾಯ್ಕ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.