ಸಾಲಮನ್ನಾ ಮಾಡಿ ನೈಜ ಕಾಳಜಿ ತೋರಲಿ

Team Udayavani, Aug 10, 2017, 3:03 PM IST

10-DV-1.jpg

ದಾವಣಗೆರೆ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ, ಸ್ವಾಮಿನಾಥನ್‌ ಆಯೋಗದ ಶಿಫಾರಸು ಜಾರಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಅಖಂಡ ಕರ್ನಾಟಕ ರೈತ ಸಂಘ, ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ
ರೈತರು ಬುಧವಾರ ಪ್ರತಿಭಟನೆ ನಡೆಸಿದರು.

ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಹಾತ್ಮಗಾಂಧಿ ವೃತ್ತದಲ್ಲಿ ರಸ್ತೆ ತಡೆ, ಬಹಿರಂಗ ಸಭೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್‌ ಸದಸ್ಯ ತೇಜಸ್ವಿ ಪಟೇಲ್‌ ಮಾತನಾಡಿ, ಕರ್ನಾಟಕ ಒಳಗೊಂಡಂತೆ ದೇಶದ್ಯಾಂತ ರೈತರು ಹಲವು ಸಮಸ್ಯೆಯಿಂದ ತತ್ತರಿಸುತ್ತಿದ್ದಾರೆ. ಸತತ ಮೂರು ವರ್ಷಗಳ ಭೀಕರ ಬರ, ಬೆಳೆ ಇಲ್ಲದ ಕಾರಣಕ್ಕೆ ದಿಕ್ಕು ತೋಚದೆ ರೈತರು ಆತ್ಮಹತ್ಯೆ ಹಾದಿ ತುಳಿಯುತ್ತಿದ್ದಾರೆ. ರಾಜ್ಯ ಸರ್ಕಾರ ಸಹಕಾರ ಕ್ಷೇತ್ರದಲ್ಲಿನ ರೈತರ 50 ಸಾವಿರ ಸಾಲ ಮನ್ನಾ ಮಾಡಿದೆ. ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಮೂಲಕ ರೈತರ ಪರ ನಿಜವಾದ ಕಾಳಜಿ ತೋರಬೇಕು ಎಂದು ಒತ್ತಾಯಿಸಿದರು.

ಇಡೀ ಸಮಾಜಕ್ಕೆ ಅನ್ನ ನೀಡುವಂತಹ ರೈತರು ಅತೀವ ಸಂಕಷ್ಟದಲ್ಲಿರುವಾಗ ಅವರ ನೆರವಿಗೆ ಬರಬೇಕಿರುವುದು ಸರ್ಕಾರಗಳ ಕರ್ತವ್ಯ. ಬಂಡವಾಳಶಾಹಿಗಳ ಸಾಲವನ್ನ ಸದ್ದಿಲ್ಲದೆ ಮನ್ನಾ ಮಾಡುವ ಕೇಂದ್ರ ಸರ್ಕಾರ, ರೈತರ ಸಾಲ ಮನ್ನಾ ಸಾಧ್ಯವೇ ಇಲ್ಲ ಎನ್ನುತ್ತದೆ. ರೈತರ ಸಾಲ ಮನ್ನಾ ಮಾಡಿದ್ದಲ್ಲಿ ಅದು ಎಲ್ಲಿಗೆ ಹೋಗುವುದೇ ಇಲ್ಲ. ಇಲ್ಲಿಯೇ ಉಳಿಯುತ್ತದೆ ಎಂಬುದನ್ನು ಮನಗಂಡು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಉತ್ತಮ ಮಳೆ ಆಗುವರೆಗೆ ಜೀವನ ನಿರ್ವಹಣೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. 

ಕೇಂದ್ರ ಸರ್ಕಾರ ಒಂದು ವೇಳೆ ಸ್ವಾಮಿನಾಥನ್‌ ಆಯೋಗದ ಶಿಫಾರಸು ಜಾರಿಗೆ ತಂದಲ್ಲಿ ಯಾವುದೇ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಪ್ರಮೇಯವೇ ಬರುವುದಿಲ್ಲ. ಸ್ವಾಮಿನಾಥನ್‌ ಆಯೋಗ ಬೆಳೆಗಳಿಗೆ ಒಳ್ಳೆಯ, ವೈಜ್ಞಾನಿಕ ಬೆಲೆಯನ್ನು ದೊರಕಿಸಿಕೊಡಲಿದೆ. ರೈತ ಸಮುದಾಯಕ್ಕೆ
ಸಾಕಷ್ಟು ಅನುಕೂಲವಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಸ್ವಾಮಿನಾಥನ್‌ ಆಯೋಗದ ಶಿಫಾರಸು ಜಾರಿಗೆ ತರಬೇಕು. ಜಿಲ್ಲೆಯಲ್ಲಿನ ಎರಡು ಖಾಸಗಿ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಬಹಳ ವರ್ಷದಿಂದ ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವರಲ್ಲಿ ಅನೇಕರು ಮಾಹಿತಿ ಕೊರತೆಯಿಂದ ಫಾರಂ ನಂಬರ್‌ 50 ಹಾಗೂ 53 ಸಲ್ಲಿಸಿಲ್ಲ ಆಂತಹವರಿಗೂ ಹಕ್ಕುಪತ್ರ ನೀಡಬೇಕು. ಆಯಾಯ ಜಲಾಶಯಗಳಿಂದ ಕೆರೆಗಳಿಗೆ ನೀರು ಹರಿಸುವ ಮೂಲಕ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು. 2017-18ನೇ ಸಾಲಿನ ಕಬ್ಬಿನ ದರ ನಿಗದಿಪಡಿಸಲು ರಾಜ್ಯ ಸಲಹಾ ಸಮಿತಿ ಸಭೆ ಆಯೋಜಿಸುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರುಣ್‌ಕುಮಾರ್‌ ಕುರುಡಿ, ಹಾಲಪ್ಪ, ಅಂಜಿನಪ್ಪ ಪೂಜಾರ್‌, ಬುಳ್ಳಾಪುರದ ಹನುಮಂತಪ್ಪ, ನಾಗರಾಜಪ್ಪ ಹೊನ್ನಾಳಿ, ಸಿಐಟಿಯು ಮುಖಂಡ ಕೆ.ಎಲ್‌. ಭಟ್‌, ಇ. ಬಾಡ ಶ್ರೀನಿವಾಸ್‌ ಇತರರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.