ಮಕ್ಕಳಲ್ಲಿನ ಆಸಕ್ತಿ ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಲಿ

Team Udayavani, Dec 1, 2018, 3:30 PM IST

dvg-2.jpg

ದಾವಣಗೆರೆ: ಮಕ್ಕಳಲ್ಲಿ ಅಡಗಿರುವ ಸೃಜನಶೀಲ ಶಕ್ತಿಯನ್ನು ಪೋಷಿಸುವ ಕೆಲಸ ಆಗಬೇಕಿದೆ ಎಂದು ಮಾಜಿ ಸಚಿವೆ ಡಾ| ನಾಗಮ್ಮ ಕೇಶವಮೂರ್ತಿ ಹೇಳಿದ್ದಾರೆ. ಶುಕ್ರವಾರ, ಪಿ.ಜೆ. ಬಡಾವಣೆ ವನಿತಾ ಸಮಾಜದ ಶ್ರೀ ಸತ್ಯಸಾಯಿ ರಂಗಮಂದಿರದಲ್ಲಿ ಜಿಲ್ಲಾ ಶಿಶು ಕಲ್ಯಾಣ ಮಂಡಳಿ ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮಕ್ಕಳ ಮೇಳ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಮಗುವಿನಲ್ಲೂ ತನ್ನದೇ ಅದ ಪ್ರತಿಭೆ, ಆಸಕ್ತಿ ಇರುತ್ತದೆ. ಅಂತಹ ಆಸಕ್ತಿ ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು, ಶಿಕ್ಷಕರು ಮಾಡಬೇಕು ಎಂದರು. 

ಇಂದಿನ ಮಕ್ಕಳ ಮೇಳದಲ್ಲಿ ವಿವಿಧ ಶಾಲೆಗಳಿಂದ ಮಕ್ಕಳು ಭಾಗವಹಿಸಿದ್ದಾರೆ. ಬಹುತೇಕ ಇವರು ಬಡತನ ಕುಟುಂಬದ
ಮಕ್ಕಳಾಗಿದ್ದು, ಆ  ಮಕ್ಕಳು ತಮ್ಮಲ್ಲಿರುವ ಸೃಜನಶೀಲ ಕಲೆಯಿಂದ ಕಸದಿಂದ ರಸ ಎಂಬ ಘೋಷವಾಕ್ಯದಡಿ ಅತ್ಯದ್ಭುತ ಕಲಾಕೃತಿಗಳು, ವಸ್ತುಗಳನ್ನು ತಯಾರಿಸಿರುವುದು ಅವರ ಪ್ರತಿಭೆಗೆ ಸಾಕ್ಷಿ ಎಂದು ಸಂತಸ ವ್ಯಕ್ತಪಡಿಸಿದರು.
 
ಪಾಲಿಕೆ ಸದಸ್ಯೆ ಅಶ್ವಿ‌ನಿ ಪ್ರಶಾಂತ್‌ ಮಾತನಾಡಿ, ಶಿಕ್ಷಕ ವಿದ್ಯಾರ್ಥಿ ಬಗ್ಗೆ ನಿರ್ಲಕ್ಷಿಸಿದರೆ ದೇಶದ ಸಂಪತ್ತಾದ ಇಡೀ ಯುವಪೀಳಿಗೆ ಹಾಳಾಗುತ್ತದೆ. ಹಾಗಾಗಿ ದೇಶದ ಆಸ್ತಿಯಾಗಿರುವ ಮಕ್ಕಳ ಬಗ್ಗೆ ಪೋಷಕರು, ಶಿಕ್ಷಕರು ತಾತ್ಸಾರ ತೋರದೇ ಅವರ ಆಸಕ್ತಿ ಗುರ್ತಿಸಿ ಪೋಷಿಸಬೇಕು. ಬಾಲ್ಯದಲ್ಲೇ ಮಾನವೀಯ ಮೌಲ್ಯಗಳನ್ನು ಬಿತ್ತುವ ಕೆಲಸ ಮಾಡಬೇಕು ಎಂದರು. 

ಮಕ್ಕಳು ಮೈದಾನದಲ್ಲಿ ಆಟ ಬಿಟ್ಟು ಮೊಬೈಲ್‌ನಲ್ಲಿ ಗೇಮ್‌ ಆಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ತಮ್ಮ ದೈಹಿಕ ಸಾಮರ್ಥ್ಯ ಕಳೆದುಕೊಳ್ಳುತ್ತಿದ್ದಾರೆ. ಪೋಷಕರು ಮೊದಲು ಟಿವಿ, ಮೊಬೈಲ್‌ಗ‌ಳಿಂದ ಮಕ್ಕಳನ್ನು ದೂರವಿರಿಸಬೇಕು. ಮಕ್ಕಳಿಗಾಗಿ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿಯನ್ನಾಗಿಸಿ ಎಂದು ಹೇಳಿದರು.

ಪಾಲಿಕೆ ಮತ್ತೋರ್ವ ಸದಸ್ಯ ಶಿವನಳ್ಳಿ ರಮೇಶ್‌ ಮಾತನಾಡಿ, ನಾಗಮ್ಮನವರು ವನಿತಾ ಸಮಾಜ ಸೇರಿದಂತೆ ವಿವಿಧ ಅಂಗಸಂಸ್ಥೆಗಳನ್ನು ಸ್ಥಾಪಿಸಿ ಸಾಕಷ್ಟು ಅನಾಥ ಮಕ್ಕಳ, ವೃದ್ಧರ ಪಾಲಿಗೆ ಆಶಾಕಿರಣ ಆಗಿದ್ದಾರೆ. ಅವರು ದಾವಣಗೆರೆಯಲ್ಲಿ ಮಾಡಿರುವ ಸಮಾಜ ಸೇವೆ ಅನನ್ಯ ಎಂದು ಬಣ್ಣಿಸಿದರು.
 
ಇದೇ ವೇಳೆ ಪ್ರೇಮಾಲಯದ ಸದಸ್ಯೆ ಅನಿತಾ ವಿರೂಪಾಕ್ಷಪ್ಪಗೆ ಶಿಶು ಸೇವಾ ಪ್ರಶಸ್ತಿ ಹಾಗೂ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಎಚ್‌.ಬಿ. ಸಹನಗೆ ವರ್ಷದ ಉತ್ತಮ ಪ್ರೌಢಶಾಲೆ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಮಾಡಲಾಯಿತು. ನಳಿನಿ ಅಚ್ಯುತ್‌, ಶೀಲಾ ನಲ್ಲೂರು ಉಪಸ್ಥಿತರಿದ್ದರು. ಪ್ರೇಮಾಲಯದ ಮಕ್ಕಳು ಪ್ರಾರ್ಥಿಸಿದರು. ಪ್ರೇಮಾ ನಾಗರಾಜ್‌ ಸ್ವಾಗತಿಸಿದರು. ಮಮತಾ ವೆಂಕಟೇಶ್‌ ವಂದಿಸಿದರು.

ಸಿ.ಕೇಶವಮೂರ್ತಿ ವಾಕ್‌ ಶ್ರವಣ ಕೇಂದ್ರದ ಸಾಹಸ್‌ ಹಾಗೂ ಸಿ. ಕೇಶವಮೂರ್ತಿ ವೃತ್ತಿ ತರಬೇತಿ ಕೇಂದ್ರದ ವಿಮೋಚನಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. 

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.