ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ


Team Udayavani, Jan 21, 2022, 8:27 PM IST

eಟತಯುಯರಹ

ದಾವಣಗೆರೆ: ಜಿಲ್ಲೆಯಲ್ಲಿ ಆರಂಭಿಸಲು ಉದ್ದೇಶಿಸಿರುವ ವಿಮಾನನಿಲ್ದಾಣದ ಸಂಬಂಧ ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳು ಗುರುವಾರ ಜಿಲ್ಲೆಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಕೇಂದ್ರ ವಿಮಾನಯಾನ ಸಚಿವಾಲಯದಿಂದ ಜಿಲ್ಲಾಡಳಿತಕ್ಕೆ ಬರೆದಿರುವ ಪತ್ರದಲ್ಲಿ ಕೇಳಲಾಗಿರುವ ಸ್ಪಷ್ಟನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರವಿ ಜಿಲ್ಲೆಗೆ ಭೇಟಿ ನೀಡಿ ಎರಡೂ¾ರು ಕಡೆಗಳಲ್ಲಿ ಸ್ಥಳ ಪರಿಶೀಲಿಸಿದರು. ಬಳಿಕ ಜಿಲ್ಲಾಡಳಿತ ಭವನದಲ್ಲಿ ಸಂಸದರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದಅವರು, ಈಗಾಗಲೇ ಗುರುತಿಸಿರುವ ಸ್ಥಳಗಳು ಏರ್‌ಫೋರ್ಟ್‌ಗೆ ಸೂಕ್ತವಾಗಿದ್ದು, ಕನಿಷ್ಠ 2.5 ಕಿಮೀ ಸ್ಥಳ ಬೇಕಾಗಲಿದೆ. ಇದಕ್ಕೆ ಸಂಬಂಧಿಸಿ ಕೆಲ ಅಂಕಿ ಅಂಶಗಳ ಅಗತ್ಯವಿದೆ. ಏರ್‌ ಬಸ್‌ ನಿಲ್ದಾಣ ಮಾಡುವುದಾದರೆ 500 ಎಕರೆ ಜಾಗ ಬೇಕಾಗಬಹುದು ಹಾಗೂ ಇದರಲ್ಲಿ ಎಷ್ಟು ಸರ್ಕಾರಿ ಜಾಗ ಇದೆಯೆಂದು ಪರಿಶೀಲಿಸಬೇಕು.

ಮುಖ್ಯವಾಗಿ ಈ ಭಾಗದಲ್ಲಿ ರೈತರ ಉತ್ಪಾದನೆಗಳು ಹೆಚ್ಚಿರುವುದರಿಂದ ಕಾರ್ಗೊ ನಿಲ್ದಾಣ ಮಾಡುವುದಾದರೆ ಹೆಚ್ಚು ಅನುಕೂಲವಾಗಲಿದೆ. ಕಾರ್ಗೊ ನಿಲ್ದಾಣಕ್ಕೆ 600ಎಕರೆ ಜಾಗ ಬೇಕಾಗುವುದು ಹಾಗಾಗಿ ಏರ್‌ ಬಸ್‌ ಬಗ್ಗೆ ಚಿಂತಿಸಬೇಕಾಗುತ್ತದೆ ಎಂದರು. ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ್‌ ಮಾತನಾಡಿ, ಕೇಂದ್ರ ವಿಮಾನಯಾನ ಪ್ರಾಧಿಕಾರದವರು ಜಿಲ್ಲೆಯಲ್ಲಿ ಏರ್‌ಫೋರ್ಟ್‌ ಮಾಡುವ ಸ್ಥಳದಿಂದ ಸುತ್ತಲಿನ ಏರ್‌ಫೋರ್ಟ್‌ಗಳ ಬಗೆಗೆ ಮಾಹಿತಿ ಕೋರಿದ ಹಿನ್ನೆಲೆಯಲ್ಲಿ ಮ್ಯಾಪ್‌ ಹಾಕಿ ನೋಡಿದಾಗ ಶಿವಮೊಗ್ಗ, ಬಳ್ಳಾರಿ, ಹುಬ್ಬಳ್ಳಿ ನಿಲ್ದಾಣಗಳು ಕಂಡು ಬರುತ್ತವೆ. ಈ ಹಿಂದೆ ನೀಡಿರುವ ವರದಿಯಂತೆ ಈ ಸ್ಥಳ ಎಟಿಆರ್‌ 72 ಮಾದರಿ ಏರ್‌ಪೋರ್ಟ್‌ ನಿರ್ಮಿಸಲು ಸೂಕ್ತವಾಗಿದ್ದು 340 ಎಕರೆ ಭೂಮಿ ಗುರುತಿಸಲಾಗಿದೆ.

ಒಂದು ವೇಳೆ ಏರ್‌ಬಸ್‌ ನಿರ್ಮಿಸುವುದಾದರೆ ಕನಿಷ್ಠ 500 ಎಕರೆ ಜಾಗ ಬೇಕಾಗುತ್ತದೆ. ಅಗತ್ಯ ಭೂಮಿ ಒದಗಿಸಿದರೆ ನೀಲನಕ್ಷೆ ತಯಾರಿಸಲಾಗುವುದು, ಈ ಭಾಗದಲ್ಲಿ ಕೆಲ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ ಉದಾಹರಣೆಗೆ ಮಣ್ಣಿನ ರಚನೆ ವಾತವರಣ ಮುಂತಾದವುಗಳನ್ನು ಅಭ್ಯಸಿಸಿ ವರದಿ ನೀಡಲಾಗುವುದು. ಅಷ್ಟರೊಳಗೆ ಯಾವ ಮಾದರಿ ನಿಲ್ದಾಣ ಬೇಕು ಎಂಬುದು ನಿರ್ಧಾರವಾಗಬೇಕು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಡಾ| ಜಿ.ಎಂ ಸಿದ್ದೇಶ್ವರ, ಈಗಾಗಲೇ ವರದಿ ನೀಡಿರುವಂತೆ ಎಟಿಆರ್‌ 72 ಏರ್‌ಫೋರ್ಟ್‌ ಬಗ್ಗೆ ಸಿದ್ಧತೆ ಮಾಡಿಕೊಳ್ಳಿ.

ಮುಂದೆ ಏರ್‌ ಬಸ್‌ ನಿಲ್ದಾಣಕ್ಕೆ ಅನುಕೂಲವಾಗುವಂತೆ ಭೂಮಿ ಗುರುತಿಸೋಣ ಎಂದರು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ತಾಂತ್ರಿಕ ಪರಿಣಿತರಾದ ಪೂರ್ವಿಮಠ, ಪೈಲಟ್‌ ಶಮನ್‌, ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್‌, ಯಶವಂತರಾವ್‌ ಜಾಧವ್‌, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್‌, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ತಹಶೀಲ್ದಾರ್‌ ಗಿರೀಶ್‌ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

 

ಟಾಪ್ ನ್ಯೂಸ್

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

thumbnail 2

ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9politics

ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ: ಶಾಸಕ ರಾಮಚಂದ್ರ

davanagere municipality by election

ದಾವಣಗೆರೆ ಪಾಲಿಕೆ ಉಪಚುನಾವಣೆ: ಕೈ ತೆಕ್ಕೆಯಲ್ಲಿದ್ದ ಎರಡೂ ಕ್ಷೇತ್ರಗಳನ್ನು ಗೆದ್ದ ಬಿಜೆಪಿ

ವಾರದಲ್ಲಿ ಬೆಳೆ ವಿಮೆ ಹಣ ಬಿಡುಗಡೆ: ಸಚಿವ ಬಿ.ಸಿ.ಪಾಟೀಲ್‌ವಾರದಲ್ಲಿ ಬೆಳೆ ವಿಮೆ ಹಣ ಬಿಡುಗಡೆ: ಸಚಿವ ಬಿ.ಸಿ.ಪಾಟೀಲ್‌

ವಾರದಲ್ಲಿ ಬೆಳೆ ವಿಮೆ ಹಣ ಬಿಡುಗಡೆ: ಸಚಿವ ಬಿ.ಸಿ.ಪಾಟೀಲ್‌

porake

ಸುರಿಯುವ ಮಳೆಯಲ್ಲೇ ಪೌರಕಾರ್ಮಿಕರ ಪೊರಕೆ ಪ್ರತಿಭಟನೆ

hairanu

ವರುಣಾರ್ಭಟಕ್ಕೆ ಹೈರಾಣಾದ ಜನ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

narega

ಕಡಬ: 2ನೇ ಬಾರಿ ಜಿಲ್ಲೆಯಲ್ಲೇ ಗುರಿ ಮೀರಿದ ಸಾಧನೆ

2

‘ರಾಜ್ಯ ನಾಯಕರು ಬಿಜೆಪಿ ಅಭ್ಯರ್ಥಿ ಅಂತಲೇ ಕರೆತಂದಿದ್ದಾರೆ’

1

ಪ್ಲಾಸ್ಟಿಕ್‌ ತ್ಯಾಜ್ಯ ಮರುಬಳಕೆಗೆ ಪಾಲಿಕೆ ಹೆಜ್ಜೆ

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.