
ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ
Team Udayavani, Jun 1, 2023, 5:45 PM IST

ದಾವಣಗೆರೆ: ತನ್ನಿಬ್ಬರು ಅವಳಿ ಮಕ್ಕಳಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ತಂದೆಯನ್ನು ದಾವಣಗೆರೆಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆ ಗೋಕಾಕ್ ನ ಅಮರ್ (36) ತನ್ನ ಅವಳಿ ಮಕ್ಕಳಾದ ಅದ್ವೈತ್ ಮತ್ತು ಅನ್ವಿತ್ (4.4 ವರ್ಷ) ಅವರನ್ನು ಕೊಲೆಗೈದಿರುವ ಆರೋಪಿ. ಯಾವ ಕಾರಣಕ್ಕೆ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ತನಿಖೆಯಿಂದ ಹೊರ ಬರಬೇಕಿದೆ.
ಹರಿಹರ ಸಮೀಪದ ಕಾರ್ಗಿಲ್ ಕಂಪನಿಯಲ್ಲಿ ಕೆಮಿಕಲ್ ಇಂಜಿನಿಯರ್ ಆಗಿರುವ ಅಮರ್, ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿ ವಾಸಿಸುತ್ತಿದ್ದ. ಮೇ.31 ರಂದು ಅವಳಿ ಮಕ್ಕಳಾದ ಅದ್ವೈತ್ ಮತ್ತು ಅನ್ವಿತ್ ಇಬ್ಬರನ್ನು ಕಾರಿನಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಗೇಟ್ ಗೆ ಕರೆದೊಯ್ದು ಸರ್ವೀಸ್ ರಸ್ತೆಯಲ್ಲಿ ಇಬ್ಬರೂ ಮಕ್ಕಳಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ.
ಇದನ್ನೂ ಓದಿ:ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ
ಅಮರ್ ಪತ್ನಿ ಜಯಲಕ್ಷ್ಮಿ ತನ್ನ ತವರು ಊರಾದ ವಿಜಯಪುರದಲ್ಲಿದ್ದರು. ಅಮರ್ ನ ತಾಯಿ ಸಾವಿತ್ರಮ್ಮ ಮನೆಯಲ್ಲಿದ್ದರು. ವಿದ್ಯಾನಗರ ಠಾಣೆ ಪೊಲೀಸರು ಆರೋಪಿಯನ್ನ ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಅವಳಿ ಮಕ್ಕಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು

BJP; ಎರಡ್ಮೂರು ತಿಂಗಳು ಮಾಧ್ಯಮಗಳ ಮುಂದೆ ಮಾತಾಡಲ್ಲ: ಸಂಸದ ಸಿದ್ದೇಶ್ವರ

Jagalur; ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಲು ನಮ್ಮ ನಾಯಕರೇ ಕಾರಣ: ಬಿಜೆಪಿ ಮಾಜಿ ಶಾಸಕ

Davanagere: ಬಿಎಸ್‌ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ: ರೇಣುಕಾಚಾರ್ಯ ಕಿಡಿ
MUST WATCH
ಹೊಸ ಸೇರ್ಪಡೆ

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ