Udayavni Special

ಅವಿಶ್ವಾಸ ನಿರ್ಣಯಕ್ಕೆ ಸದಸ್ಯರು ಗೈರು

Team Udayavani, Feb 8, 2019, 6:06 AM IST

dvg-6.jpg

ಹೊನ್ನಾಳಿ: ತಾಲೂಕಿನ ಹಿರೇಗೋಣಿಗೆರೆ ಗ್ರಾಪಂ ಒಟ್ಟು 17 ಸದಸ್ಯ ಬಲ ಹೊಂದಿದ್ದು, ಈ ಪೈಕಿ ಪಂಚಾಯಿತಿಯ 12 ಸದಸ್ಯರು ಅಧ್ಯಕ್ಷ ಸಿ. ಮಹೇಶ್‌ ವಿರುದ್ಧ ಅವಿಶ್ವಾಸ ನಿರ್ಣಯ ಸಭೆಗೆ ಉಪವಿಭಾಗಾಧಿಕಾರಿಗೆ ಅರ್ಜಿ ಸಲ್ಲಿಸಿ ಸಭೆಗೆ ಹಾಜರಾಗದ ಕಾರಣ ಸಿ.ಮಹೇಶ್‌ ಅವರೇ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಉಪವಿಭಾಗಾಧಿಕಾರಿ ಕುಮಾರಸ್ವಾಮಿ ತಿಳಿಸಿದರು.

ಅವರು ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿ, ಅಧ್ಯಕ್ಷ ಸಿ. ಮಹೇಶ್‌ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿ 12 ಜನ ಸದಸ್ಯರು ಸಭೆ ಕರೆಯುವಂತೆ ತಮಗೆ ಜ. 18ರಂದು ಖುದ್ದಾಗಿ ಭೇಟಿಮಾಡಿ ಅರ್ಜಿ ಸಲ್ಲಿಸಿದ್ದರು. ಅದರಂತೆ ಫೆ. 7 ರಂದು ಬೆಳಗ್ಗೆ 11 ಗಂಟೆಗೆ ಸಭೆ ಕರೆಯಲಾಗಿತ್ತು.
 
ಆದರೆ ಅವಿಶ್ವಾಸ ಮಂಡನೆ ಸಭೆಗೆ ನಿಗದಿತ ವೇಳೆ ಮುಗಿದು ಒಂದು ಗಂಟೆಯಾದರೂ ಯಾವೊಬ್ಬ ಸದಸ್ಯರೂ ಕೂಡ ಹಾಜರಾಗದ ಕಾರಣ ಸಭೆಯನ್ನು ವಿಸರ್ಜಿಸಲಾಯಿತು. ಹಾಗೂ ಕಾಯ್ದೆ ಪ್ರಕಾರ ಮತ್ತೂಮ್ಮೆ ಅವಿಶ್ವಾಸ ಮಂಡಿಸಲು ಅವಕಾಶವಿಲ್ಲದ ಕಾರಣ ಪ್ರಸ್ತುತ ಅಧ್ಯಕ್ಷರಾಗಿರುವ ಸಿ.ಮಹೇಶ್‌ ಅವರೇ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಗುರುವಾರ ಬೆಳಗ್ಗೆ ಕರೆಯಲಾಗಿದ್ದ ಅವಿಶ್ವಾಸ ಮಂಡನೆ ಸಭೆಯಲ್ಲಿ ತಹಶೀಲ್ದಾರ್‌ ತುಷಾರ್‌ ಬಿ. ಹೂಸೂರು, ಪಿಡಿಒ ಅರುಣ್‌ ಕುಮಾರ್‌, ಕಾರ್ಯದರ್ಶಿ ರಾಜೇಂದ್ರಪ್ಪ ಮಾತ್ರ ಹಾಜರಿದ್ದರು.

ಬೇಲಿಮಲ್ಲೂರು ಮರಳು ಕ್ಯಾರೆಗೆ ಎ.ಸಿ. ಭೇಟಿ: ಗುರುವಾರ ದಾವಣಗೆರೆ ಉಪವಿಭಾಗಾಧಿಕಾರಿ ಕುಮಾರಸ್ವಾಮಿ ಹಾಗೂ ತಹಶೀಲ್ದಾರ್‌ ತುಷಾರ್‌ ಬಿ. ಹೂಸೂರು ಹಿರೇಗೋಣಿಗೆರೆ ಗ್ರಾಪಂ ಅವಿಶ್ವಾಸ ಮಂಡನೆ ಸಭೆ ವಿಸರ್ಜನೆ ನಂತರ ಮಾರ್ಗದಲ್ಲಿ ಬರುವ ಬೇಲಿಮಲ್ಲೂರು ಮರಳು ಕ್ಯಾರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹಿಂದೆ ಬೇಲಿಮಲ್ಲೂರು ಹಾಗೂ ಕೆಲವೆಡೆ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ವಶಪಡಿಸಿಕೊಂಡು ಪಟ್ಟಣದ ಎ.ಪಿ.ಎಂ.ಸಿ. ಆವರಣದಲ್ಲಿ ದಾಸ್ತಾನು ಮಾಡಿದ್ದು, ಈ ಮರಳಿನ ವಿತರಣೆ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಿ, ಸರ್ಕಾರಿ ಕಾಮಗಾರಿಗಳಿಗೆ ಸರ್ಕಾರದ ಎಸ್‌.ಆರ್‌. ದರದಲ್ಲಿ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ ಸೂಕ್ತ

ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ ಸೂಕ್ತ

davanagere news

ಕೆಳಸೇತುವೆ ನಿರ್ಮಿಸಲು ಆಗ್ರಹಿಸಿ 22ರಂದು ಹೆದ್ದಾರಿ ತಡೆ

ದಾವಣಗೆರೆ: ದಲಿತರ ಬಡಾವಣೆಯಲ್ಲಿ ನೀರಿಗಾಗಿ ಹಾಹಾಕಾರ

ದಾವಣಗೆರೆ: ದಲಿತರ ಬಡಾವಣೆಯಲ್ಲಿ ನೀರಿಗಾಗಿ ಹಾಹಾಕಾರ

davanagere news

ಆರೋಗ್ಯ ಜಾಗೃತಿ ಅಭಿಯಾನಕ್ಕೆ ಚಾಲನೆ

davanagere news

ದಣಿವರಿಯದ ಕೊರೊನಾ ಸೇನಾನಿ ಶಾಸಕ ರೇಣುಕಾಚಾರ್ಯ!

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

hunasooru news

ಲಸಿಕಾಕರಣಕ್ಕೆ ಟಮಟೆ ಬಾರಿಸಿ, ಮೈಕ್ ಮೂಲಕ  ಜಾಗೃತಿ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.