ಆಸ್ಪತ್ರೆ ಅವ್ಯವಸ್ಥೆಗೆ ಶಾಸಕರು ಕಿಡಿ

•ಸೌಲಭ್ಯಗಳಿಲ್ಲದೆ ರೋಗಿಗಳ ಪರದಾಟ•ರವೀಂದ್ರನಾಥ್‌ ಅಸ‌ಮಾಧಾನ•ಸುಧಾರಣೆಗೆ ಡಿಸಿ ಸೂಚನೆ

Team Udayavani, Jun 25, 2019, 7:30 AM IST

dg-tdy-1..

ದಾವಣಗೆರೆ: ಸೋಮವಾರ ಜಿಲ್ಲಾಧಿಕಾರಿ ಜಿ.ಎನ್‌.ಶಿವಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಎಸ್‌.ಎ.ರವೀಂದ್ರನಾಥ್‌, ಡಾ| ನೀಲಾಂಬಿಕೆ, ಇತರರು ಭಾಗವಹಿಸಿದ್ದರು.

ದಾವಣಗೆರೆ: ಜಿಲ್ಲಾ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಸ್ಪತ್ರೆ, ಪಾಲಿಕೆ, ದೂಡಾ ಹಾಗೂ ಸ್ಮಾರ್ಟ್‌ಸಿಟಿಯ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ ಹಾಗೂ ಹಾವೇರಿಯಿಂದ ನಿತ್ಯ ನೂರಾರು ಜನರು ಬರುತ್ತಿರುತ್ತಾರೆ. ಆಸ್ಪತ್ರೆಯಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದಿದ್ದರೆ ಸಾರ್ವಜನಿಕರು ಜನಪ್ರತಿನಿಧಿಗಳ ಕಾರ್ಯವೈಖರಿ ಬಗ್ಗೆ ಮಾತನಾಡುವುದಿಲ್ಲವೆ? ಎಂದು ಪ್ರಶ್ನಿಸಿದರು.

ಜಿಲ್ಲಾ ಹೆರಿಗೆ ಆಸ್ಪತ್ರೆಯ ಕಟ್ಟಡದ ಕೆಲವು ಕೊಠಡಿಗಳು ಶಿಥಿಲಗೊಂಡು ಸೋರುತ್ತಿವೆ. ಬಾಣಂತಿಯರಿಗೆ ಬಿಸಿ ನೀರಿನ ವ್ಯವಸ್ಥೆಯಿಲ್ಲ. ಬಟ್ಟೆ, ಬ್ಯಾಂಡೇಜ್‌, ಸಿರೀಂಜ್‌ ಹಾಗೂ ಔಷಧ ಸಹ ನೀಡುವುದಿಲ್ಲ ಎಂಬುದಾಗಿ ಜನರು ನಮ್ಮ ಮುಂದೆ ದೂರುತ್ತಿದ್ದಾರೆ. ಆಸ್ಪತ್ರೆಯಲ್ಲಿ ಲಿಫ್ಟ್‌ ಕೆಟ್ಟು 3 ವರ್ಷ ಕಳೆದರೂ ಅದು ದುರಸ್ತಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಆಗ, ಜಿಲ್ಲಾಧಿಕಾರಿ ಜಿ.ಎನ್‌.ಶಿವಮೂರ್ತಿ, ಆಸ್ಪತ್ರೆಯಲ್ಲಿನ ಲಿಫ್ಟ್‌ ಕೆಟ್ಟು ಮೂರು ವರ್ಷ ಕಳೆದರೂ ದುರಸ್ತಿಗೆ ಮುಂದಾಗಿಲ್ಲವೇಕೆ?. ಅನುದಾನದ ಕೊರತೆ ಇದ್ದರೆ ಜಿಲ್ಲಾಡಳಿತ ಗಮನಕ್ಕೆ ಮೊದಲು ತರಬೇಕು ಎಂದು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಚಿಗಟೇರಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕಿ ಡಾ| ನೀಲಾಂಬಿಕೆ, ಲಿಫ್ಟ್‌ ದುರಸ್ತಿ ವಿಚಾರವಾಗಿ ಮೂರು ಬಾರಿ ಟೆಂಡರ್‌ ಕರೆಯಲಾಗಿದ್ದು, ಟೆಂಡರ್‌ ಯಾರೂ ಪಡೆದಿಲ್ಲ. ಈಗ ಮತ್ತೂಮ್ಮೆ ಟೆಂಡರ್‌ ಕರೆಯಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇಲ್ಲ. 25 ಸ್ಟಾಫ್‌ ನರ್ಸ್‌ಗಳ ಕೊರತೆಯಿದೆ. ಆಸ್ಪತ್ರೆಯಲ್ಲಿ ಸೋರಿಕೆಯಾಗುತ್ತಿದ್ದ ಕೊಠಡಿಗಳನ್ನು ಈಗಾಗಲೇ ದುರಸ್ತಿಪಡಿಸಲಾಗಿದೆ. ನಮ್ಮ ಇಲಾಖೆ ಅನುದಾದಲ್ಲಿ ಆಸ್ಪತ್ರೆಗೆ ಅಗತ್ಯವಿರುವ ಸಿರೀಂಜ್‌ ಹಾಗೂ ಔಷಧ ಖರೀದಿಸಲಾಗುತ್ತಿದೆ. ಆಸ್ಪತ್ರೆಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಡಿ ಗ್ರೂಪ್‌ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುವಂತೆ ಏಜೆನ್ಸಿಗಳಿಗೆ ಪತ್ರ ಬರೆಯಲಾಗಿದೆ ಎಂದು ಸಭೆ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ಸರಿಯಾಗಿ ಕಾರ್ಯ ನಿರ್ವಹಿಸದ ಸಿಬ್ಬಂದಿಗಳನ್ನು ಮೊದಲು ಕೆಲಸದಿಂದ ತೆಗೆದುಹಾಕಿ. ಆಸ್ಪತ್ರೆ ಒಳ ಆವರಣದಲ್ಲಿರುವ ಮರಗಳ ಪರಿಶೀಲನೆಗೆ ಅರಣ್ಯ ಇಲಾಖೆಗೆ ತಕ್ಷಣ ಪತ್ರ ಬರೆದು, ಕಟ್ಟಡಕ್ಕೆ ಧಕ್ಕೆಯಾಗುವ ಮರಗಳನ್ನು ತೆಗೆದರೆ ಅಲ್ಲಿ ಯಾವ ರೀತಿ ಬದಲಾವಣೆ ಮಾಡಬಹುದೆಂಬುದರ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತನ್ನಿ. ಮುಂದಿನ 15 ದಿನಗಳಲ್ಲಿ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಸಲಹೆ ನೀಡಿದರು.

ಹಲವೆಡೆ ಕಸದ ರಾಶಿ: ನಗರದಲ್ಲಿ ಕುಡಿಯುವ ನೀರು ಪೂರೈಕೆ ಕ್ರಮ, ರಾಜ ಕಾಲುವೆ ಸ್ವಚ್ಛತೆ, 2019-20ನೇ ಸಾಲಿನಲ್ಲಿ ಪಾಲಿಕೆಯಿಂದ ತಯಾರಿಸಲಾದ ಕಾಮಗಾರಿಗಳ ಕ್ರಿಯಾಯೋಜನೆಗಳ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತ ವೀರೇಂದ್ರ ಕುಂದುಗೋಳ ಮಾಹಿತಿ ನೀಡಿದಾಗ, ಮಾತನಾಡಿದ ಶಾಸಕರು, ನಗರದಲ್ಲಿ ಕುಡಿಯುವ ನೀರಿಗಾಗಿ ಕೊರೆಸಲಾದ ಕೊಳವೆ ಬಾವಿಗಳಿಗೆ ಇನ್ನೂ ಮೋಟಾರ್‌ ಪಂಪ್‌ ಅಳವಡಿಸಿಲ್ಲ. ನಗರದ ಬಹುತೇಕ ಕಡೆಗಳಲ್ಲಿ ಬೀದಿ ದೀಪದ ಸಮಸ್ಯೆ ಹೆಚ್ಚಿದೆ. ಹಲವೆಡೆ ಕಸ ನಿರ್ವಹಣೆಗೆ ಕಂಟೇನರ್‌ಗಳಿಲ್ಲದೆ, ಕಸದ ರಾಶಿ ಬಿದ್ದಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಕೊರೆಸಲಾದ 6 ಕೊಳವೆ ಬಾವಿಗಳಿಗೆ ಶೀಘ್ರವೇ ಮೋಟಾರ್‌ ಅಳವಡಿಸಲಾಗುವುದು. ಮತ್ತೆ 6 ನೂತನ ಕೊಳೆವೆ ಬಾವಿಗಳನ್ನು ಕೊರೆಯಲು ಈಗಾಗಲೇ ಕ್ರಮ ವಹಿಸಲಾಗಿದೆ. ಕಸದ ಸಮಸ್ಯೆ ನಿರ್ವಹಣೆಗೆ ನಗರಗಳಲ್ಲಿ ಡೋರ್‌ ಟು ಡೋರ್‌ ಮೂಲಕವೇ ಕಸ ಸಂಗ್ರಹಿಸಲು ಹಾಗೂ ಕಂಟೇನರ್‌ಗಳನ್ನು ಎಲ್ಲಿಯೂ ಇಡದಂತೆ ಆದೇಶಿಸಲಾಗಿದೆ. ಎಲ್ಲಾ ಬೀದಿಗಳಲ್ಲೂ ಎಲ್ಇಡಿ ಲೈಟ್ ಅಳವಡಿಸಲು ಸೂಚಿಸಲಾಗಿದ್ದು, ಇದುವರೆಗೂ ಲೈಟ್‌ಗಳು ಸರಬರಾಜಾಗದಿರುವುದರಿಂದ ಬೀದಿ ದೀಪದ ಸಮಸ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.

ಆಗ, ಜಿಲ್ಲಾಧಿಕಾರಿ ಶಿವಮೂರ್ತಿ, ನಗರದಲ್ಲಿ ನೀರು ಪೂರೈಕೆಗೆ ಅಗತ್ಯ ಹಣವಿದ್ದು, ಅಧಿಕಾರಿಗಳು ವಿಳಂಬ ಮಾಡುತ್ತಿರುವುದೇಕೆ? ಅವಶ್ಯವಿರುವ ಕಡೆ ಮೋಟಾರ್‌ ಪಂಪ್‌ಗ್ಳ ವ್ಯವಸ್ಥೆ ಕಲ್ಪಿಸಬೇಕು. ನಗರದಲ್ಲಿ ಬೀದಿ ದೀಪ ಅವಶ್ಯಕತೆ ಕುರಿತು ಸರ್ಕಾರಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ದೂಡಾ ಆಯುಕ್ತ ಆದಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಲಕ್ಷ್ಮೀಕಾಂತ್‌ ಬೊಮ್ಮನ್ನರ್‌, ಸ್ಮಾರ್ಟ್‌ ಸಿಟಿ ಯೋಜನೆಯ ಅಭಿಯಂತರರು, ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.