ದಾವಣಗೆರೆಯಲ್ಲಿ ಮತ್ತಷ್ಟು ಪ್ರಕರಣಗಳು ಹೆಚ್ಚಾಗಲಿವೆ: ಉಸ್ತುವಾರಿ ಸಚಿವ ಬಿ.ಎ. ಬಸವರಾಜ್
Team Udayavani, May 5, 2020, 12:04 PM IST
ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಮತ್ತಷ್ಟು ಪ್ರಕರಣಗಳು ಹೆಚ್ಚಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಹೇಳಿದ್ದಾರೆ.
ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು ಈ ವಿಷಯ ಹೇಳಿದರು. ನಿನ್ನೆ ಸಂಜೆ ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ಅಧಿಕಾರಿಗಳು ಕೋವಿಡ್-19 ಸೋಂಕಿನ ಮತ್ತಷ್ಟು ಪ್ರಕರಣಗಳ ವರದಿ ಬರುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದ್ದಾರೆ ಎಂದರು.
ಕಳೆದ ಬಾರಿ ಬಂದಾಗ ಗ್ರೀನ್ ಝೋನ್ ಎಂಬುದಾಗಿ ಘೋಷಣೆಗೆ ಒತ್ತಾಯಿಸಿದ್ದರು. ಈಗ ಪಾಸಿಟಿವ್ ಕೇಸ್ ಗಳು ಹೆಚ್ಚಾಗಿರುವುದು ಸಾಕಷ್ಟು ನೋವಾಗಿದೆ. ಯಾರೂ ಕೂಡ ಮನೆಯಿಂದ ಹೊರ ಬರಬಾರದು ಎಂದು ಮನವಿ ಮಾಡಿದ್ದಾರೆ. ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯ ಮನವಿಗೆ ಸ್ಪಂದಿಸಿ ಎಂದು ಅವರು ಕೋರಿದರು.
ಈಗಾಗಲೇ ಕೇಂದ್ರ ಸರ್ಕಾರದ ಜಿಲ್ಲೆಯಲ್ಲಿ ಕೋವಿಡ್-19 ಲ್ಯಾಬ್ ಗೆ ಅನುಮತಿ ನೀಡಿದೆ. ಇನ್ನೆರಡು ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಲ್ಯಾಬ್ ಬರಲಿದೆ ಎಂದು ಉಸ್ತುವಾರಿ ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ