
ಕೊಂಚ ಅಸ್ವಸ್ಥಗೊಂಡ ನಾಡೋಜ ಬರಗೂರು ರಾಮಚಂದ್ರಪ್ಪ
Team Udayavani, Jan 29, 2023, 6:55 PM IST

ದಾವಣಗೆರೆ: ಹರಿಹರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ನಾಡೋಜ ಬರಗೂರು ರಾಮಚಂದ್ರಪ್ಪ ಕೊಂಚ ಅಸ್ವಸ್ಥಗೊಂಡ ಘಟನೆ ನಡೆಯಿತು.
ಗುರುಭವನಲ್ಲಿ ನಡೆದ ಕಾರ್ಯಕ್ರಮ ಮುಗಿಸಿ ಪ್ರವಾಸಿ ಮಂದಿರಕ್ಕೆ ತೆರಳಿದಾಗ ಆರೋಗ್ಯದಲ್ಲಿ ಏರುಪೇರು ಉಂಟಾಯಿತು ತಲೆಸುತ್ತುನಿಂದ ಕೊಂಚ ಅಸ್ವಸ್ಥಗೊಂಡ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಕ್ತದೊತ್ತಡ ಇತರೆ ತಪಾಸಣೆ ನಡೆಸಿದ ನಂತರ ಆಸ್ಪತ್ರೆಯಲ್ಲಿ ಕೆಲ ಕಾಲ ವಿಶ್ರಾಂತಿ ಪಡೆದರು.
ಆರೋಗ್ಯದಲ್ಲಿ ಚೇತರಿಕೆ ಕಂಡ ಬಂದ ನಂತರ ದಾವಣಗೆರೆಗೆ ಆಗಮಿಸಿದ ಅವರು ಡಾ. ಎ.ಬಿ. ರಾಮಚಂದ್ರಪ್ಪ ಅವರ ಮನೆಯಲ್ಲಿ ಊಟ ಮುಗಿಸಿಕೊಂಡು ಬೆಂಗಳೂರಿಗೆ ತೆರಳಿದರು.
ಟಾಪ್ ನ್ಯೂಸ್
