ಕುರುಬ ಸಮಾಜ ಎಸ್ಟಿಗೆ ಸೇರಿಸಲು ಪಾದಯಾತ್ರೆ

Team Udayavani, Dec 6, 2020, 3:50 PM IST

ಕುರುಬ ಸಮಾಜ ಎಸ್ಟಿಗೆ ಸೇರಿಸಲು ಪಾದಯಾತ್ರೆ

ದಾವಣಗೆರೆ: ಹಾಲುಮತ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಕಾಗಿನೆಲೆಯಿಂದ ಬೆಂಗಳೂರುವರೆಗೆ ಹಮ್ಮಿಕೊಳ್ಳುವ ಬೃಹತ್‌ ಪಾದಯಾತ್ರೆ ಜನವರಿ 17ರಂದು ದಾವಣಗೆರೆ ನಗರ ತಲುಪಲಿದೆ ಎಂದು ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ತಿಳಿಸಿದರು.

ನಗರದ ದೇವರಾಜ ಅರಸುಬಡಾವಣೆಯಲ್ಲಿನ ಶ್ರೀ ಬೀರೇಶ್ವರಭವನದಲ್ಲಿ ನಡೆದ ಪೂರ್ವಭಾವಿಸಭೆಯಲ್ಲಿ ಶ್ರೀಗಳು ಜಾಥಾ ಕುರಿತು ವಿವರಣೆ ನೀಡಿದರು. ಪಾದಯಾತ್ರೆ ಜ. 17ರಂದು ನಗರಕ್ಕೆ ಬಂದಾಗ ಬೃಹತ್‌ ಸಮಾವೇಶ ನಡೆಸಿ ಪಾದಯಾತ್ರೆಯ ಉದ್ದೇಶದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.

ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಹಮ್ಮಿಕೊಂಡಿರುವ ಈ ಚಾರಿತ್ರಿಕ ಜನಾಂದೋಲನ ಪಾದಯಾತ್ರೆಗೆ ಜ. 15ರಂದು ಕಾಗಿನೆಲೆಯಲ್ಲಿ ಚಾಲನೆ ನೀಡಲಾಗುವುದು. ಪಾದಯಾತ್ರೆ ಜ. 17ರಂದು ದಾವಣಗೆರೆ ತಲುಪಲಿದ್ದು, ಮರುದಿನ ಬೆಂಗಳೂರಿನತ್ತ ಪ್ರಯಾಣ ಮುಂದುವರಿಸಲಿದೆ. ಪಾದಯಾತ್ರೆಯನ್ನು ರಾಷ್ಟ್ರೀಯ ಹೆದ್ದಾರಿಗುಂಟ ನಡೆಸಬೇಕೋ, ಹಳ್ಳಿ ಮಾರ್ಗದ ಮೂಲಕ ನಡೆಸಬೇಕೋ ಎಂಬುದನ್ನು ಇನ್ನೊಮ್ಮೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಪಾದಯಾತ್ರೆಯ ಅಂತಿಮ ದಿನ ಫೆ. 7ರಂದು ಬೆಂಗಳೂರಿನಲ್ಲಿ10 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಸಮಾಜ ಬಾಂಧವರನ್ನು ಒಗ್ಗೂಡಿಸುವ ಮೂಲಕ ಸರ್ಕಾರಕ್ಕೆ ಹಾಲುಮತ ಕುರುಬ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಒತ್ತಡ ಹೇರಲಾಗುವುದು. ಬೆಂಗಳೂರಿನ ಸಮಾವೇಶದಲ್ಲಿ ರಾಜ್ಯದ ಎಲ್ಲ ಭಾಗಗಳಿಂದ ಸಮಾಜ ಬಾಂಧವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಜಿಪಂ ಸದಸ್ಯ ಜಿ.ಸಿ. ನಿಂಗಪ್ಪ, ಜಿಲ್ಲಾ ಕುರುಬ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕುಂಬಳೂರು ವಿರೂಪಾಕ್ಷಪ್ಪ, ಸಮಾಜದ ಪ್ರಮುಖರಾದ ಬಿ.ಎಂ. ಸತೀಶ್‌, ಪರಶುರಾಮಪ್ಪ, ಎಸ್‌.ಎಸ್‌. ಗಿರೀಶ್‌, ಅಡಾಣಿ ಸಿದ್ದಪ್ಪ, ಅಣ್ಣೇಶ್‌ ಐರಣಿ, ಎಚ್‌.ಜಿ. ಸಂಗಪ್ಪ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.