ಸಂವಿಧಾನವನ್ನು ಸುಟ್ಟು ಹಾಕುತ್ತೇವೆ ಎನ್ನುವ ಕೋಮುವಾದಿಗಳನ್ನು ಧಿಕ್ಕರಿಸಿ: ಸಿ. ಸಿದ್ದಪ್ಪ

Team Udayavani, Nov 26, 2021, 8:04 PM IST

1-ff

ಚನ್ನಗಿರಿ: ಬಡವರು ದೀನ ದಲಿತರು, ದೇಶದ ಪ್ರತಿಯೊಬ್ಬ ಪ್ರಜೆಗೂ ಶಕ್ತಿಪೂರ್ವಕವಾಗಿರುವ ಸಂವಿಧಾನವನ್ನು ಬದಲಾಯಿಸುತ್ತೆವೇ, ಸುಟ್ಟು ಹಾಕುತ್ತೇವೆ? ಎನ್ನುವ ಕೋಮುವಾದಿ ಪಕ್ಷದ ರಾಜಕಾರಣಿಗಳನ್ನು ಧಿಕ್ಕರಿಸಿ ದೇಶದಲ್ಲಿ ಕೋಮುವಾದಕ್ಕೆ ಆಸ್ಪದ ನೀಡದಂತೆ ಜನತೆ ಎಚ್ಚರವಹಿಸಬೇಕು ಎಂದು ತಾಲೂಕು ಅಹಿಂದ ಸಂಘಟನೆಯ ಮುಖಂಡ ಸಿ. ಸಿದ್ದಪ್ಪ ಕರೆ ನೀಡಿದರು.

ಪಟ್ಟಣದ ದಲಿತ ಸಂಘರ್ಷ ಸಮಿತಿ ಕಚೇರಿಯ ಸಭಾಂಗಣದಲ್ಲಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ. ಸಂವಿಧಾನ 73ನೇ ಸಮರ್ಪಣಾ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಆಶಯಗಳನ್ನು ವಾಸ್ತವಗೊಳಿಸುವ ಜವಾಬ್ದಾರಿ ಪಂಚಾಯತ್‌ನಿಂದ ಹಿಡಿದು ಸಂಸತ್ತಿನ ವರೆಗಿನ ರಾಜಕೀಯ ಸಂರಚನೆಯಲ್ಲಿನ ಎಲ್ಲ ಹಂತಗಳ ಚುನಾಯಿತ ಪ್ರತಿನಿಧಿಗಳದ್ದಾಗಿದೆ. ಅದರೆ ಇತ್ತೀಚೆಗೆ ಕೆಲ ರಾಜಕಾರಣಿಗಳು ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದು ಅದನ್ನು ಲಘುವಾಗಿ ತೆಗೆದು ಕೊಳ್ಳುದೇ ಅಂತಹ ರಾಜಕಾರಣಿಗಳಿಗೆ ತಕ್ಕ ಉತ್ತರವನ್ನು ನೀಡ ಬೇಕು ಸಂವಿಧಾನದ ಶಕ್ತಿ ಏನೆಂದು ತೋರಿಸಬೇಕು ಎಂದರು. ಆ ನಿಟ್ಟಿನಲ್ಲಿ ಶ್ರೀಸಾಮಾನ್ಯರಲ್ಲಿ  ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಿ ಸಂವಿಧಾನದ ಆಶಯಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಇವುಗಳನ್ನು ಕಾರ್ಯಗತಗೊಳಿಸಬೇಕು. ಸಾರ್ವಜನಿಕ ಮಟ್ಟದಲ್ಲಿ ಪ್ರತಿಯೊಬ್ಬ ಸಾರ್ವಜನಿಕ ಪ್ರತಿನಿಧಿಯ ಸಂವಿಧಾನಿಕ ಅಶಯಗಳೊಂದಿಗೆ ಮುನ್ನಡೆದರೆ ಪ್ರಗತಿಶೀಲಾ ದೇಶ ನಮ್ಮದಾಗಲಿದೆ ಎಂದರು.

ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಚಿತ್ರಲಿಂಗಪ್ಪ ಮಾತನಾಡಿ. ನಾವು ಸಂವಿಧಾನದ ನಿಜವಾದ ಮೌಲ್ಯವನ್ನು, ಆಂತರ್ಯವನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಸಂವಿಧಾನದ ಆಶಯಗಳನ್ನು ನಿಜ ಸ್ಫೂರ್ತಿಯೊಂದಿಗೆ ಜಾರಿಗೆ ತರಬೇಕು. ನಾವೆಲ್ಲರೂ ಸಮಾನತೆ, ಸ್ವಾತಂತ್ರ್ಯ  ಮತ್ತು ಭ್ರಾತೃತ್ವದ ಬಗ್ಗೆ ಮಾತನಾಡುತ್ತೇವೆ. ನಾವು ಅದನ್ನು ಮತ್ತೆ ಮತ್ತೆ ಪುನರುತ್ಛರಿಸಿದರೆ ಸಾಲದು. ಅದನ್ನು ನಮ್ಮ  ದಿನನಿತ್ಯದ ಬದುಕಲ್ಲಿ, ನಮ್ಮ ಆಡಳಿತದಲ್ಲಿ ಜಾರಿಗೆ ತರಬೇಕು ಮತ್ತು ಸಾಕಾರಗೊಳಿಸಬೇಕು ಎಂದರು.

ತಾಲೂಕು ಅಹಿಂದ ಸಂಘಟನೆ ಅಧ್ಯಕ್ಷ ಎ.ಸಿ ಚಂದ್ರು, ಬುಳ್ಳುಸಾಗರದ ನಾಗರಾಜ್, ರಮೇಶ್, ರುದ್ರೇಶ್ ಹಾಗೂ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwe-wqe

Davangere: ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ವಿಧಿವಶ

1-sadasdas

Siddaramaiah ಮೋಸದ ಗಿರಾಕಿ,ಕೈ ಸರ್ಕಾರ ನೀರಿನ ಮೇಲಿನ ಗುಳ್ಳೆ: ಆರ್.ಅಶೋಕ್

Davanagere; ಪಾನಿಪೂರಿ‌ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

Davanagere; ಪಾನಿಪೂರಿ‌ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

1-wewewq

Davanagere; ತಾವರೆ ಹೂವು ಮುಡಿದು ಸಂಸತ್‌ ಪ್ರವೇಶಿಸುತ್ತೇನೆ: ಗಾಯತ್ರಿ ಸಿದ್ದೇಶ್ವರ

There is nothing wrong if the BJP uses the Ram Mandir issue: Pejawara seer

Davanagere; ರಾಮಮಂದಿರ ವಿಚಾರ ಬಿಜೆಪಿಯವರು ಬಳಸಿಕೊಂಡರೆ ತಪ್ಪಿಲ್ಲ: ಪೇಜಾವರ ಶ್ರೀ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.