ಪ್ರತಿ ಮನೆಗೆ ನಲ್ಲಿ ನೀರು ವ್ಯವಸ್ಥೆ

ಅರಕೆರೆ ಕೆರೆಗೆ ನೀರು ತುಂಬಿಸುವ ಕಾರ್ಯ ಶೀಘ್ರ: ಶಾಸಕ ರೇಣುಕಾಚಾರ್ಯ

Team Udayavani, Nov 15, 2020, 5:20 PM IST

ಪ್ರತಿ ಮನೆಗೆ ನಲ್ಲಿ ನೀರು ವ್ಯವಸ್ಥೆ

ಹೊನ್ನಾಳಿ: ಮುಂದಿನ ದಿನಗಳಲ್ಲಿ ಮನೆ ಮನೆಗಳಿಗೆನಲ್ಲಿ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲೂಕಿನ ಅರಕೆರೆ ಗ್ರಾಮದಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. 2008ರಲ್ಲಿ ನಾನು ಮೊದಲ ಬಾರಿ ಶಾಸಕನಾದ ಸಂದರ್ಭದಲ್ಲಿ ಅರಕೆರೆಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಮಾಡಿದ್ದೆ. ಈಗ ಸರ್ಕಾರದ ಯೋಜನೆಯಂತೆ ಮನೆಗಳಿಗೆ ನೀರು ತಲುಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಕೆರೆ ಭಾಗದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು. ಇದಕ್ಕಾಗಿ 49 ಕೋಟಿ ರೂ. ಅನುದಾನ ಬಿಡುಗಡೆಗೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ನ್ಯಾಮತಿ ಮತ್ತು ಹೊನ್ನಾಳಿ ತಾಲೂಕುಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ರಾಜ್ಯದಲ್ಲಿಯೇ ಅಭಿವೃದ್ಧಿ ಹೊಂದಿದ ತಾಲೂಕುಗಳನ್ನಾಗಿ ಮಾಡುವ ಮಹದಾಸೆ ನನ್ನದು ಎಂದರು.

ನರೇಂದ್ರ ಮೋದಿಯವರು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಭಾರತದ ಚಿತ್ರಣವೇ ಬದಲಾಗಿದೆ. ಒಂದು ಕಾಲದಲ್ಲಿ ಭಾರತದ ಬಗ್ಗೆ ವಿಶ್ವದಲ್ಲೆಡೆ ತಾತ್ಸಾರ ಮನೋಭಾವ ಇತ್ತು. ಇಂದು ನರೇಂದ್ರ ಮೋದಿಯವರ ಸ್ವತ್ಛ ಆಡಳಿತ ಹಾಗೂ ಇತರ ಅಂಶಗಳಿಂದವಿಶ್ವದಲ್ಲಿಯೇ ಭಾರತ ಮೊದಲ ಸ್ಥಾನದಲ್ಲಿನಿಲ್ಲುವಂತಾಗಿದೆ ಇದು ಹೆಮ್ಮೆಯ ವಿಷಯವಾಗಿದೆ ಎಂದು ಬಣ್ಣಿಸಿದರು.

ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಜನ ಮೆಚ್ಚುವ ಆಡಳಿತ ನೀಡುತ್ತಿದ್ದಾರೆ. ಇಳಿ ವಯಸ್ಸಿನಲ್ಲಿರಾಜ್ಯಕ್ಕೆ ಉತ್ತಮ ಆಡಳಿತ ನೀಡುತ್ತಿರುವುದು ಹಾಗೂ ಹಲವಾರು ಯೋಜನೆಗಳನ್ನು ಸಾಮಾನ್ಯ ಜನರಿಗಾಗಿ ರೂಪಿಸುತ್ತಿದ್ದಾರೆ ಎಂದು ತಿಳಿಸಿದರು.

ಜಿಪಂ ಅಧ್ಯಕ್ಷೆ ದೀಪಾ ಜಗದೀಶ್‌ ಮಾತನಾಡಿ, ಅಭಿವೃದ್ಧಿ ಹರಿಕಾರರಾಗಿರುವ ಸಿಎಂ ರಾಜಕೀಯಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಸದಾ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸುತ್ತಾರೆ. ಅವಳಿ ತಾಲೂಕುಗಳಿಗೆ ಅವಶ್ಯವಾಗಿರುವ ಕಾಮಗಾರಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇಂತಹ ಶಾಸಕರು ನಿರಂತರವಾಗಿ ಗೆಲುವು ಸಾ ಧಿಸಬೇಕು ಎಂದು ಆಶಿಸಿದರು.

ಗ್ರಾಮದ ಯುವ ಮುಖಂಡ ಅರಕೆರೆ ನಾಗರಾಜ್‌ ಮಾತನಾಡಿ, ರೇಣುಕಾಚಾರ್ಯರವರು ಶಾಸಕರಾದ ನಂತರ ನಮ್ಮ ಗ್ರಾಮ ಅಭಿವೃದ್ಧಿ ಸಾಧಿಸಿದೆ. ಗ್ರಾಮದ ತೋಟ, ಹೊಲ, ಗದ್ದೆಗಳಿಗೆ ಹೋಗಿ ಬರಲು ಸಿಮೆಂಟ್‌ ರಸ್ತೆಗಳಾಗಿವೆ. ಗ್ರಾಮಕ್ಕೆ 30 ಕೋಟಿ ರೂ. ಅನುದಾನದ ಕಾಮಗಾರಿಗಳು ಈಗಾಗಲೇ ನಡೆದಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ಹರಿದು ಬರಲಿದೆ ಎಂದರು.

ಜಿಪಂ ಸದಸ್ಯರಾದ ಎಂ.ಆರ್‌. ಮಹೇಶ್‌, ಸುರೇಂದ್ರ ನಾಯ್ಕ, ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ಎಪಿಎಂಸಿ ನಿರ್ದೇಶಕ ಜಿ.ವಿ. ರಾಜು, ತಾಪಂ ಇಒ ಎಸ್‌.ಎಲ್‌. ಗಂಗಾಧರಮೂರ್ತಿ ಇದ್ದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.