ಪೊಲೀಸ್‌-ಹೋಂಗಾರ್ಡ್ಸ್‌ ಒಂದೇ ನಾಣ್ಯದ ಎರಡು ಮುಖ

Team Udayavani, Dec 11, 2017, 2:14 PM IST

11-28.jpg

ದಾವಣಗೆರೆ: ಕಾನೂನು, ಸುವ್ಯವಸ್ಥೆ, ಸಂಚಾರ ನಿಯಂತ್ರಣ ಇತರೆಡೆ ಜೊತೆಯಾಗಿ ಕೆಲಸ ಮಾಡುವ ಪೊಲೀಸ್‌ ಇಲಾಖೆ ಮತ್ತು
ಹೋಂಗಾರ್ಡ್ಸ್‌ ಒಂದೇ ನಾಣ್ಯದ ಎರಡು ಮುಖಗಳು ಎಂದು ಪೂರ್ವ ವಲಯ ಪೊಲೀಸ್‌ ಮಹಾನಿರೀಕ್ಷಕ ಡಾ| ಎಂ.ಎ. ಸಲೀಂ
ಬಣ್ಣಿಸಿದರು. 

ಭಾನುವಾರ ಜಿಲ್ಲಾ ಪೊಲೀಸ್‌ ಕವಾಯತ್‌ ಮೈದಾನದಲ್ಲಿ ಅಖೀಲ ಭಾರತ ಗೃಹರಕ್ಷಕ ದಳ ದಿನಾಚರಣೆಯಲ್ಲಿ ಮಾತನಾಡಿದ
ಅವರು, ದಾವಣಗೆರೆ ಜಿಲ್ಲೆಯಲ್ಲಿ 2002 ರಿಂದ ಗೃಹರಕ್ಷಕದಳ ಸಿಬ್ಬಂದಿ ಕಾನೂನು, ಸುವ್ಯವಸ್ಥೆ, ಸಂಚಾರ ನಿಯಂತ್ರಣ, ಚುನಾವಣೆ
ಒಳಗೊಂಡಂತೆ ಇತರೆ ಅಗತ್ಯ ಸಂದರ್ಭದಲ್ಲಿ ಒಳ್ಳೆಯ ರೀತಿ ಪೊಲೀಸ್‌ ಇಲಾಖೆಗೆ ಭುಜಕ್ಕೆ ಭುಜ ನೀಡಿ ಕೆಲಸ ಮಾಡುತ್ತಿದೆ ಎಂದರು. ಪೊಲೀಸ್‌ ಇಲಾಖೆಯ ಕೆಲಸ ಎಂದರೆ ಕಷ್ಟ. ಸಮಯದ ಮಿತಿ ಇಲ್ಲದೆ ಕೆಲಸ ಮಾಡುವ ಸಂದರ್ಭದಲ್ಲಿ ಗೃಹರಕ್ಷಕ ದಳದಿಂದ ಸ್ವಲ್ಪ ನೆರವು ದೊರೆಯುತ್ತದೆ. 2017ರಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ಕಾನೂನು, ಸುವ್ಯವಸ್ಥೆಯ ಸಮಸ್ಯೆಯೇ ಆಗಲಿಲ್ಲ. ಗೃಹರಕ್ಷಕದಳದ ಸಿಬ್ಬಂದಿಯ ನೆರವು ಸಹ ಕಾರಣ. 2018ರ ಏಪ್ರಿಲ್‌ ಇಲ್ಲವೇ ಮೇ ತಿಂಗಳಲ್ಲಿ ಚುನಾವಣೆ ಬರುವ ಹಿನ್ನೆಲೆಯಲ್ಲಿ ಈಗಿನಿಂದಲೇ ಬಂದೋಬಸ್ತ್ ಕೆಲಸ ನಡೆಯುತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಗೃಹರಕ್ಷಕದಳದ ಸಿಬ್ಬಂದಿ
ಇನ್ನೂ ಹೆಚ್ಚಿನ ಶ್ರಮದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸಂಚಾರ ನಿಯಂತ್ರಣಕ್ಕಾಗಿ ಖಾಯಂಯಾಗಿ 500 ಜನ ಗೃಹರಕ್ಷಕದಳದ ಸಿಬ್ಬಂದಿ ನೀಡಲಾಗಿದೆ. ಪೊಲೀಸ್‌ ಮಹಾನಿರೀಕ್ಷಕರ ಕಚೇರಿ ರಸ್ತೆಯಲ್ಲಿ ಕೆಲಸ ಮಾಡುವಂತಹ ಮಹಿಳಾ ಸಿಬ್ಬಂದಿ ಯೊಬ್ಬರು ಮಾಡುವಂತಹ ಉತ್ತಮ ಕೆಲಸಕ್ಕೆ ಮುಖ್ಯಮಂತ್ರಿಗಳ ಪ್ರಶಸ್ತಿ ದೊರೆತಿದೆ. ದಾವಣಗೆರೆ ಗೃಹರಕ್ಷಕದಳದ ಸಿಬ್ಬಂದಿ ಸಹ ಅದೇ ರೀತಿ ಕೆಲಸ ಮಾಡಬೇಕು ಎಂದು ಆಶಿಸಿದರು. ದಾವಣಗೆರೆ ಜಿಲ್ಲೆಯಲ್ಲಿ ಮಂಜೂರಾಗಿರುವ ಒಟ್ಟು 800 ಗೃಹರಕ್ಷಕದಳದ ಸಿಬ್ಬಂದಿಯಲ್ಲಿ 580 ಕೆಲಸ ಮಾಡುತ್ತಿದ್ದಾರೆ. ಇನ್ನೂ 220 ಹುದ್ದೆಗಳು ಖಾಲಿ ಇವೆ. ಜಿಲ್ಲಾ ಸಮಾದೇಷ್ಟರು ಆದಷ್ಟು ಬೇಗ ಖಾಲಿ ಇರುವ 220 ಜನರ ನೇಮಕ ಮಾಡಿದರೆ ಪೊಲೀಸ್‌ ಇಲಾಖೆಗೆ ಸಹಾಯವಾಗುತ್ತದೆ. ಆದಷ್ಟು ಬೇಗ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿವಂತೆ ಸಂಬಂಧಿತರಿಗೆ
ಸೂಚಿಸಿದರು. ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಟಿ.ಎಸ್‌. ಉದ್ದೇಶ್‌ ಮಾತನಾಡಿ, ಮುಂಬೈನಲ್ಲಿ ಕೋಮುಗಲಭೆ ನಡೆದ ಸಂದರ್ಭದಲ್ಲಿ
ಪ್ರಾರಂಭವಾದ ಗೃಹರಕ್ಷಕದಳದ ಸಿಬ್ಬಂದಿ ಅಂದಿನಿಂದಲೂ ಪೊಲೀಸ್‌ ಇಲಾಖೆಯಿಂದ ಉತ್ತಮ ಕೆಲಸ ಮಾಡುತ್ತಿದೆ. ವೃತ್ತಿ ಮತ್ತು
ವೈಯಕ್ತಿಕ ಜೀವನದಲ್ಲಿ ಶಿಸ್ತು ಪಾಲಿಸುವ ಮೂಲಕ ಒಳ್ಳೆಯ ಕೆಲಸ ಮಾಡಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಮಾದೇಷ್ಟ ಡಾ| ಬಿ.ಎಚ್‌. ವೀರಪ್ಪ ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 220 ಗೃಹರಕ್ಷಕ
ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಹರಿಹರ ತಾಲೂಕಿನ ದೇವರಬೆಳಕೆರೆಯಲ್ಲಿ 6.5 ರಿಂದ 7 ಕೋಟಿ
ವೆಚ್ಚದಲ್ಲಿ ನಿರ್ಮಾಣವಾಗಿರುವ ರಾಜ್ಯದ ಮೊಟ್ಟ ಮೊದಲ ಪ್ರಾದೇಶಿಕ ತರಬೇತಿ ಕೇಂದ್ರ ನಿಷ್ಕಿಯವಾಗದಂತೆ ಹಿರಿಯ ಅಧಿಕಾರಿಗಳು
ಗಮನ ನೀಡಬೇಕು ಎಂದು ಮನವಿ ಮಾಡಿದರು. ದೇವರಾಜ್‌, ನಿರ್ಮಲಾ ನಿರೂಪಿಸಿದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.