ಸಿಎಂ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆಗೆ ಸೂಚನೆ
Team Udayavani, Apr 27, 2022, 5:07 PM IST
ದಾವಣಗೆರೆ: ಜಗಳೂರು ತಾಲೂಕಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸೇರಿದಂತೆ ವಿವಿಧ ಇಲಾಖೆಗಳಿಂದ ನೀಡಲಾಗುವ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ. 29 ರಂದು ಜಗಳೂರಿಗೆ ಅಗಮಿಸುತ್ತಿದ್ದಾರೆ. ಎಲ್ಲಾ ಇಲಾಖೆಯ ಅಧಿಕಾರಿಗಳು ಸಂಬಂಧಿಸಿದ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಂಡು ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ಹಿನ್ನಲೆಯಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಗಳೂರು ತಾಲೂಕಿಗೆ ಸಂಬಂಧಿಸಿದ ಸಮಗ್ರ ಅಭಿವೃದ್ಧಿ ಕುರಿತ ಕಾರ್ಯಕ್ರಮದಲ್ಲಿ ಅನೇಕ ಹಿರಿಯ ಸಚಿವರು ಭಾಗವಹಿಸುತ್ತಿದ್ದಾರೆ. ಎಲ್ಲ ಇಲಾಖೆ ಅಧಿಕಾರಿಗಳು 2021ರ ಏಪ್ರಿಲ್‌ನಿಂದ 2022ರ ಏಪ್ರಿಲ್ ವರೆಗೆ ಸವಲತ್ತುಗಳನ್ನು ಪಡೆದ ಫಲಾನುಭವಿಗಳನ್ನು ಕರೆತರಬೇಕು. ಫಲಾನುಭವಿಗಳು ಬಂದು ಹೋಗುವ ವ್ಯವಸ್ಥೆಯನ್ನು ಆಯಾ ಇಲಾಖೆಯವರೇ ಮಾಡಬೇಕು. ಶಿಷ್ಟಾಚಾರದನ್ವಯ ಕಾರ್ಯಕ್ರಮದ ಆಹ್ವಾನಪತ್ರಿಕೆ ಹಾಗೂ ನಾಮಫಲಕವನ್ನು ಅಳವಡಿಸಬೇಕೆಂದು ತಿಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಿ. ಆನಂದ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏಷ್ಯಾ ಕಪ್ ಹಾಕಿ: ಜಪಾನ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡ ಭಾರತ
ಟೋಪಿ ಧರಿಸಿದ ವಿದ್ಯಾರ್ಥಿಗೆ ಥಳಿತ: ಪಿಎಸ್ ಐ,ಉಪನ್ಯಾಸಕ ಸೇರಿ ಏಳು ಜನರ ವಿರುದ್ಧ ದೂರು ದಾಖಲು
ಗುದನಾಳದಲ್ಲಿಟ್ಟು ಚಿನ್ನ ಕಳ್ಳಸಾಗಾಣಿಕೆ : ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಬೊಂಬೆನಾಡಿನಲ್ಲಿ ಕಾಂಗ್ರೆಸ್ ಪಕ್ಷ ಸದೃಢ: ಪಂಚಮಿ ಪ್ರಸನ್ನ ಪಿ.ಗೌಡ
ಋತುಸ್ರಾವ ಬಗ್ಗೆ ಜಿಲ್ಲಾದ್ಯಂತ ಜನಜಾಗೃತಿ ಸಪ್ತಾಹ