ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ಧಾಳಿ


Team Udayavani, Jan 10, 2019, 9:41 AM IST

dvg-1.jpg

ದಾವಣಗೆರೆ: ದೇಶದ್ಯಾಂತ ಎಲ್ಲಾ ಕಾರ್ಮಿಕರಿಗೆ 18 ಸಾವಿರ ರೂಪಾಯಿ ಕನಿಷ್ಠ ವೇತನ, ಡಾ| ಸ್ವಾಮಿನಾಥನ್‌ ವರದಿ ಜಾರಿ, ಗುತ್ತಿಗೆ ಕಾರ್ಮಿಕರ ಖಾಯಂ, ಸಾಮಾಜಿಕ ಭದ್ರತೆ, ಕಾರ್ಮಿಕ ವಿರೋಧಿ ನೀತಿ ಕೈ ಬಿಡುವುದು ಒಳಗೊಂಡಂತೆ 10ಕ್ಕೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಐಟಿಯುಸಿ, ಇಂಟಕ್‌, ಎಐಯುಟಿಯುಸಿ, ಸಿಐಟಿಯು ಒಳಗೊಂಡಂತೆ ಹತ್ತು ಕೇಂದ್ರ ಕಾರ್ಮಿಕ, ಬ್ಯಾಂಕ್‌, ವಿಮೆ, ಟೆಲಿಕಾಂ, ಕೇಂದ್ರ-ರಾಜ್ಯ ಸರ್ಕಾರದ ನೌಕರರ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ರಾಷ್ಟ್ರ ವ್ಯಾಪಿ ಸಾರ್ವತ್ರಿಕ ಮುಷ್ಕರ-ಹರತಾಳದ ಎರಡನೇ ದಿನ ಬುಧವಾರ ಪ್ರತಿಭಟಿಸಿದ ಮುಖಂಡರು, ಬಹಿರಂಗ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಕರೆ ನೀಡಿರುವ ಸಾರ್ವತ್ರಿಕ ಮುಷ್ಕರ-ಹರತಾಳ ಬೆಂಬಲಿಸಿ ದಾವಣಗೆರೆ ವಿಶ್ವವಿದ್ಯಾಲಯದ ಸಿ ಮತ್ತು ಡಿ ಗ್ರೂಪ್‌ ಹೊರ ಗುತ್ತಿಗೆ ನೌಕರರ ಸಂಘದವರು ಜಯದೇವ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿದರು. ಗೌರವ ಧನದ ಹೆಸರಲ್ಲಿ ಆಧುನಿಕ ಜೀತ ಪದ್ಧತಿಗೆ ನೌಕರರನ್ನು ದೂಡುವುದನ್ನ ನಿಲ್ಲಿಸಿ, ಕಾಯಂಗೊಳಿಸುವ ಮೂಲಕ ಹೊರ ಗುತ್ತಿಗೆ ನೌಕರರ ಜೀವನದಲ್ಲಿ ಅಚ್ಛೇ ದಿನ್‌… ತರುವಂತಾಗಬೇಕು ಎಂದು ಒತ್ತಾಯಿಸಿದರು.

ದಾವಣಗೆರೆ ವಿಶ್ವವಿದ್ಯಾಲಯದ ಸಿ ಮತ್ತು ಡಿ ಗ್ರೂಪ್‌ ಹೊರ ಗುತ್ತಿಗೆ ನೌಕರರ ಸಂಘದವರ ಪ್ರತಿಭಟನೆ ಹೊರತುಪಡಿಸಿದಂತೆ ಸಾರ್ವತ್ರಿಕ ಮುಷ್ಕರ-ಹರತಾಳಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಮೊದಲ ದಿನ ಮಂಗಳವಾರ ಕೆಲವಾರು ಅಂಗಡಿ, ಹೋಟೆಲ್‌, ವಾಣಿಜ್ಯ ಮಳಿಗೆ ಮುಚ್ಚಿದ್ದವು. ಬುಧವಾರ ಎಂದಿನಂತೆ ವ್ಯಾಪಾರ-ವಹಿವಾಟು ನಡೆಯಿತು. ಜನರು, ಬಸ್‌, ಆಟೋರಿಕ್ಷಾ ಇತರೆ ವಾಹನಗಳ ಸಂಚಾರ ಸಹಜವಾಗಿತ್ತು.

ಸಾರಿಗೆ ಸಂಸ್ಥೆ ಬಸ್‌ಗಳಿಗೆ ಅಲ್ಲಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಪರಿಸ್ಥಿತಿಗೆ ಅನುಗುಣವಾಗಿ ಬಸ್‌ ಓಡಿಸಲು ನಿರ್ಧರಿಸಿದ್ದರಿಂದ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ದೂರದ ಬಸ್‌ ಸಂಚಾರ ವಿರಳವಾಗಿತ್ತು.

ಮಂಗಳವಾರ ಜನರಿಲ್ಲದೆ ಭಣಗುಡುತ್ತಿದ್ದ ಖಾಸಗಿ ಬಸ್‌ ನಿಲ್ದಾಣದಲ್ಲಿ ಜನಸಂದಣಿ ಕಂಡು ಬಂದಿತು. ಮುಷ್ಕರ- ಹರತಾಳದ ಹಿನ್ನೆಲೆಯಲ್ಲಿ ಮಂಗಳವಾರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ, ಬುಧವಾರ ಶಾಲೆಗಳಿಗೆ ರಜೆ ಇರಲಿಲ್ಲ. ಹಾಗಾಗಿ ಶಾಲೆಗಳಲ್ಲಿ ಪಾಠ ನಡೆದವು. ಕೆಲವು ಖಾಸಗಿ ಶಾಲೆಗಳಿಗೆ ಬುಧವಾರವೂ ರಜೆ ನೀಡಲಾಗಿತ್ತು.

ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ-ಹರತಾಳಕ್ಕೆ ವಿವಿಧ ಬ್ಯಾಂಕ್‌ ನೌಕರರು ಬೆಂಬಲ ನೀಡಿದ್ದರಿಂದ ಬುಧವಾರವೂ ಬ್ಯಾಂಕ್‌ ತೆರೆದರಲಿಲ್ಲ. ಹಾಗಾಗಿ ಜನರು ಬ್ಯಾಂಕಿಂಗ್‌ ಕೆಲಸ-ಕಾರ್ಯಕ್ಕೆ ಪರದಾಡುವಂತೆ ಆಯಿತು.

ಬಿಜೆಪಿಗೆ ಮುಂದಿದೆ ತಕ್ಕ ಪಾಠ: ಗಡಿಯಾರ ಕಂಬದ ಬಳಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಿಐಟಿಯು ಮುಖಂಡ ಕೆ.ಎಲ್‌. ಭಟ್, ಲೋಕಸಭಾ ಚುನಾವಣಾ ಪೂರ್ವದಲ್ಲಿ ನರೇಂದ್ರ ಮೋದಿ ಬಿಜೆಪಿ ಅಧಿಕಾರಕ್ಕೆ ಬಂದ 100 ದಿನದಲ್ಲಿ ವಿದೇಶಿ ಬ್ಯಾಂಕ್‌ನಲ್ಲಿರುವ ಕಪ್ಪು ಹಣವನ್ನು ಭಾರತಕ್ಕೆ ವಾಪಸ್‌ ತಂದು ಎಲ್ಲರ ಖಾತೆಗೆ 15 ಲಕ್ಷ ಜಮೆ ಮಾಡುವುದಾಗಿ ಹೇಳಿದ್ದರು. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷ ಕಳೆದರೂ ಒಬ್ಬರ ಖಾತೆಗೆ ನಯಾ ಪೈಸೆ ಬಂದಿಲ್ಲ. ಈಗ 2022 ತೋರಿಸುತ್ತಿದ್ದಾರೆ. ಜನರಿಗೆ ಸುಳ್ಳು ಹೇಳುತ್ತಿರುವ ಮೋದಿಯವರನ್ನ ಜನರು ಇನ್ನು ನಂಬುವುದಿಲ್ಲ. 2019ರ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವರು ಎಂದು ಎಚ್ಚರಿಸಿದರು.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಜನರಗಿಂತಲೂ ದನ, ಗೋವುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬಿಜೆಪಿಯವರಿಗೆ ಜನರಗಿಂತಲೂ ದನಗಳೇ ಹೆಚ್ಚು ಬೇಕಾಗಿವೆ. ಜನರು ಬದುಕಿದರೆ ದನಗಳು ಇರಲಿವೆ ಎಂಬುದನ್ನು ಅವರು ಅರಿಯಬೇಕಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗೋವುಗಳ ಬಗ್ಗೆ ಮಾತನಾಡುತ್ತಾರೆ. ದೇಶದಲ್ಲಿ ಅತಿ ಹೆಚ್ಚು ಗೋಮಾಂಸ ರಫ್ತು ಮಾಡುವರು ಗುಜರಾತ್‌ನ ಬಿಜೆಪಿ ಮುಖಂಡರು, ಪ್ರಧಾನಿಯವರ ಆತ್ಮೀಯರು ಎಂಬುದನ್ನ ಮರೆತಿದ್ದಾರೆ. ಪ್ರಧಾನಿ ಜಾರಿಗೆ ತಂದಿರುವ ಅನೇಕ ಯೋಜನೆಗಳ ಪ್ರಯೋಜನ ಸತ್ತ ಮೇಲೆ ಸಿಗುತ್ತವೆಯೇ ಹೊರತು ಬದುಕಿದ್ದಾಗ ಅಲ್ಲ. ಜನಪರ ಆಡಳಿತ ನೀಡದೇ ಇರುವ ಯಾರೇ ಆಗಲಿ ಕುರ್ಚಿಯಲ್ಲಿ ಮುಂದುವರೆಯಲಿಕ್ಕೆ ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಎಐಯುಟಿಯುಸಿ ಮುಖಂಡ ಮಂಜುನಾಥ್‌ ಕೈದಾಳೆ ಮಾತನಾಡಿ, ಅಧಿಕಾರಕ್ಕೆ ಬಂದ ನಂತರ ಪ್ರತಿ ವರ್ಷ 2 ಕೋಟಿ ಉದ್ಯೋಗ, ಲೋಕಪಾಲ್‌ ಜಾರಿ, ವಿದೇಶಿ ನೇರ ಬಂಡವಾಳ ಹೂಡಿಕೆ ರದ್ದತಿ ಬಗ್ಗೆ ಮಾತನಾಡುತ್ತಿದ್ದ ಮೋದಿ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಭರವಸೆ ಈಡೇರಿಸಿಲ್ಲ. ತಮ್ಮ ಪರಮಾಪ್ತರಿಗೆ ಅನುಕೂಲ ಆಗುವಂತೆ ಕಾರ್ಪೋರೇಟ್ ಪರ ನೀತಿ ಜಾರಿಗೆ ತರುತ್ತಿದ್ದಾರೆ. ಕಾರ್ಮಿಕ ಕಾನೂನುಗಳ ಕಿತ್ತು ಹಾಕುತ್ತಿದ್ದಾರೆ. ಬಂಡವಾಳಶಾಹಿಪರ ಅಧಿಕಾರ ಕಿತ್ತು ಹಾಕಿ ಜನಪರ ಆಡಳಿತ ಮತ್ತು ಸಮ ಸಮಾಜಕ್ಕಾಗಿ ಎಲ್ಲರೂ ಸಂಘಟಿತರಾಗಬೇಕು ಎಂದು ಮನವಿ ಮಾಡಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಮುಖಂಡರಾದ ಆವರಗೆರೆ ಚಂದ್ರು, ಆನಂದರಾಜ್‌, ಕೆ.ಎಚ್. ಆನಂದರಾಜ್‌, ಆವರಗೆರೆ ವಾಸು, ಬ್ಯಾಂಕ್‌ ನೌಕರರ ಸಂಘದ ಆಂಜನೇಯ, ಪ್ರಗತಿ ಕೃಷ್ಣಾ ಬ್ಯಾಂಕ್‌ ನೌಕರರ ಸಂಘದ ನಾಗರಾಜ್‌, ಬಿಎಸ್ಸೆನ್ನೆಲ್‌ನ ಷಣ್ಮುಖಪ್ಪ, ಕೆಎಸ್ಸಾರ್ಟಿಸಿ ನೌಕರರ ಸಂಘದ ಪ್ರಕಾಶ್‌, ಎಂ.ಬಿ. ಶಾರದಮ್ಮ, ಸರೋಜಾ, ಬಿ.ಆರ್‌. ಅಪರ್ಣಾ, ಸಂತೋಷ್‌, ಮಧು ತೊಗಲೇರಿ, ಪರಶುರಾಮ್‌, ಸೌಮ್ಯ, ಸೈಯದ್‌ ಖಾಜಾಪೀರ್‌, ಐರಣಿ ಚಂದ್ರು, ಆವರಗೆರೆ ಕೆ. ಬಾನಪ್ಪ, ಪಾಲವನಹಳ್ಳಿ ಪ್ರಸನ್ನಕುಮಾರ್‌, ಗಿರೀಶ್‌ ಇತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.