ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Team Udayavani, Oct 1, 2019, 12:21 PM IST

dg-tdy-3

ದಾವಣಗೆರೆ: ಕಾರ್ಮಿಕ ಕಾನೂನುಗಳಲ್ಲಿ ಕಾರ್ಮಿಕ ವಿರೋಧಿ ಬದಲಾವಣೆ, 178 ರೂಪಾಯಿ ಕನಿಷ್ಟ ವೇತನ ಪ್ರಕಟಣೆ ಒಳಗೊಂಡಂತೆ ವಿವಿಧ ಕಾರ್ಮಿಕ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಸೋಮವಾರ ಕರ್ನಾಟಕ ಶ್ರಮಿಕ ಶಕ್ತಿ, ನೆರಳು ಬೀಡಿ ಕಾರ್ಮಿಕರ ಯೂನಿಯನ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೋರ್ಟ್‌ ವೃತ್ತದ ಪೂಜಾ ಹೋಟೆಲ್‌ನಿಂದ ಸಹಾಯಕ ಕಾರ್ಮಿಕರ ಆಯುಕ್ತರ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಭಾರತದ ಕಾರ್ಮಿಕ ವರ್ಗದ ಮೇಲೆ ಅತ್ಯಂತ ಅಪಾಯಕಾರಿ ದಾಳಿ ನಡೆಯುತ್ತಿದೆ. ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದ ಫಲವಾಗಿ ಜಾರಿಗೆ ಬಂದಿದ್ದ ಕಾರ್ಮಿಕ ಕಾನೂನುಗಳನ್ನು ಕಿತ್ತು ಹಾಕಿರುವ ಕೇಂದ್ರ ಸರ್ಕಾರ 44 ಕಾರ್ಮಿಕ ಕಾಯ್ದೆಗಳನ್ನ 4 ಲೇಬರ್‌ ಕೋಡ್‌ಗಳಾಗಿ ಬದಲಾಯಿಸಲು ಮುಂದಾಗಿರುವುದು ಆತ್ಯಂತ ಖಂಡನೀಯ ಎಂದು ಪ್ರತಿಭಟನಾಕಾರರು ದೂರಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ  ವೇತನಗಳ ಸಂಹಿತೆ, ಕೈಗಾರಿಕಾ ಸಂಬಂಧ ಸಂಹಿತೆ, ಸಾಮಾಜಿಕ ಭದ್ರತೆ, ಕಾರ್ಮಿಕ ಕಲ್ಯಾಣ ಕುರಿತ ಸಂಹಿತೆ ಅಲ್ಲದೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಮಾಡಿದ ಬಿಸಿಡಬ್ಲೂ ಕಾಯ್ದೆ-1961 ರದ್ದುಪಡಿಸುವ ಮೂಲಕ ಶ್ರಮಿಕ ವರ್ಗದವರಿಗೆ ಸಮಸ್ಯೆ ಉಂಟು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಸಿಡಬ್ಲೂ ಮಂಡಳಿ ಮುಚ್ಚುತ್ತಿರುವ ನೇರ ಪರಿಣಾಮ ಕಾರ್ಮಿಕರ ಮೇಲೆ ಆಗುತ್ತಿದೆ. ದೇಶದ 4 ಕೋಟಿಗೂ ಅಧಿಕ ಕಾರ್ಮಿಕರ ನೋಂದಣಿಯೇ ರದ್ದಾಗಲಿದೆ.

ಕಾರ್ಮಿಕರು, ಬಡವರ ಪರ ಪುಖಾಂನುಪುಂಖವಾಗಿ ಮಾತನಾಡುವ ಕೇಂದ್ರ ಸರ್ಕಾರ ದೈನಂದಿನ ರಾಷ್ಟ್ರೀಯ ಕನಿಷ್ಟ ವೇತನವನ್ನು 178 ರೂಪಾಯಿಗೆ ನಿಗದಿ ಮಾಡಿರುವುದು ನಾಚಿಕೆಗೇಡಿನ ವಿಚಾರ. ಮೋದಿ ಸರ್ಕಾರ ಹೇಳುತ್ತಿರುವ 5 ಟ್ರಿಲಿಯನ್‌ ಆರ್ಥಿಕತೆ ಮತ್ತು ಅಭಿವೃದ್ಧಿಯ ಮಾತುಗಳು ಕಾರ್ಮಿಕರ ಪಾಲಿಗೆ ಮಾಡುತ್ತಿರುವ ಅತಿ ದೊಡ್ಡ ವಂಚನೆ ಎಂದು ದೂರಿದರು. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ನೆರಳು ಬೀಡಿ ಕಾರ್ಮಿಕರ ಯೂನಿಯನ್‌ ಅಧ್ಯಕ್ಷೆ ಜಬೀನಾಖಾನಂ, ಎಂ. ಕರಿಬಸಪ್ಪ, ಸತೀಶ್‌ ಅರವಿಂದ್‌, ಆದಿಲ್‌ಖಾನ್‌, ಶಿರಿನ್‌ ಬಾನು, ಹಸೀನಾಬಾನು, ನಾಜಿಯಾಬಾನು, ಸಬ್ರಿನ್‌ತಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.