ಶೌಚಾಲಯ ಸೌಲಭ್ಯ ಕಲ್ಪಿಸಿ

Team Udayavani, Jul 18, 2017, 1:43 PM IST

18-DV-5.gif

ದಾವಣಗೆರೆ: ಕೊಳಗೇರಿಯಲ್ಲಿ ಶೌಚಾಲಯ ಸೌಲಭ್ಯ ಒದಗಿಸಲು ಒತ್ತಾಯಿಸಿ ಸ್ಲಂ ಜನಾಂದೋಲನ, ಸಾವಿತ್ರಿ ಬಾ ಫುಲೆ
ಸಂಘಟನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯ 15ನೇ ವಾರ್ಡ್‌ನ ಭಾರತ್‌ ಕಾಲೋನಿ 1ನೇ ಕ್ರಾಸ್‌ ಕುಂಬಾರ ಓಣಿ ಪಕ್ಕದಲ್ಲಿರುವ 40ಕ್ಕೂ
ಹೆಚ್ಚು ಕುಟುಂಬಗಳಿಗೆ ಶೌಚಾಲಯ ವ್ಯವಸ್ಥೆ ಇಲ್ಲ. ಹಾಗಾಗಿ ಇಲ್ಲಿನ ಜನರು ಈಗಲೂ ಬಹಿರ್ದೆಸೆಗೆ ಬಯಲಿಗೆ ಹೋಗಬೇಕಿದೆ.
ಬಯಲು ಶೌಚಕ್ಕೆ ಹೋಗಬೇಕಾದ ಸಂದರ್ಭದಲ್ಲಿ ಮಹಿಳೆಯರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವೊಮ್ಮೆ ರಾತ್ರಿ ಆಗುವರೆಗೆ ಕಾಯಬೇಕಾಗುತ್ತದೆ. ವಯಸ್ಕ ಹೆಣ್ಣು ಮಕ್ಕಳ ಸ್ಥಿತಿಯ ಬಗ್ಗೆ ಹೇಳುವಂತೆಯೇ ಇಲ್ಲ ಎಂದು ಪ್ರತಿಭಟನಾಕಾರರು ಅಳಲು
ತೋಡಿಕೊಂಡರು.

ನಗರಪಾಲಿಕೆ 7ನೇ ವಾರ್ಡ್‌ ವ್ಯಾಪ್ತಿಯ ಬಾಷಾನಗರ 2ನೇ ಕ್ರಾಸ್‌ ರುದ್ರಭೂಮಿ ಪಕ್ಕದಲ್ಲಿರುವ ಅನೇಕ ಮನೆಗಳಿಗೆ
ಶೌಚಾಲಯ ವ್ಯವಸ್ಥೆ ಇಲ್ಲ. ಇಲ್ಲಿನ ಹೆಣ್ಣು ಮಕ್ಕಳು ಬಯಲು ಶೌಚಾಲಯಕ್ಕೆ ಹೋಗಲು ಭಯಪಡುತ್ತಾರೆ. ಶೌಚಕ್ಕೆ ಹೋಗುವ
ಹೆಣ್ಣು ಮಕ್ಕಳ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದು. ಶೌಚಕ್ಕೆ ಕುಳಿತವರ ಮೇಲೆ ಕಲ್ಲು ಎಸೆಯುವುದು ಸಹ ನಡೆಯುತ್ತದೆ
ಎಂದು ತಿಳಿಸಿದರು. 

ಸ್ಮಾರ್ಟ್‌ಸಿಟಿ ಯೋಜನೆಯಡಿ ಎಲ್ಲಾ ಕಡೆ ರಸ್ತೆ ಮಾಡಲಾಗುತ್ತಿದೆ. ಮಹಿಳೆಯರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆ ದೂರ
ಮಾಡುವ ಶೌಚಾಲಯ ನಿರ್ಮಾಣಕ್ಕೆ ಸಂಬಂಧಿತರು ಗಮನ ಹರಿಸಿಲ್ಲ. ಮೊದಲು ಭಾರತ್‌ ಕಾಲೋನಿ 1ನೇ ಕ್ರಾಸ್‌ ಕುಂಬಾರ
ಓಣಿ, ಬಾಷಾನಗರ 2ನೇ ಕ್ರಾಸ್‌ ರುದ್ರಭೂಮಿ ಪಕ್ಕದ ನಿವಾಸಿಗಳಿಗೆ ಶೌಚಾಲಯ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಕೊಳಗೇರಿಯಲ್ಲಿ ಶೌಚಾಲಯ ವ್ಯವಸ್ಥೆಗೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಅನೇಕ ಬಾರಿ ಸಲ್ಲಿಸಿ, ಹೋರಾಟ ನಡೆಸಲಾಗಿದೆ.

ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಈಚೆಗೆ ಜಿಲ್ಲಾ ಪಂಚಾಯತಿಯಲ್ಲಿ ನಡೆದ ಸಭೆಯಲ್ಲಿ ಅಕ್ಟೋಬರ್‌ ಒಳಗೆ ಜಿಲ್ಲೆಯನ್ನು ಬಹಿರ್ದೆಸೆಮುಕ್ತ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಸಂಕಲ್ಪ ಮಾಡಲಾಗಿದೆ. ಬಹಿರ್ದೆಸೆಮುಕ್ತ ಜಿಲ್ಲೆಯಾಗಬೇಕಾದಲ್ಲಿ ದಾವಣಗೆರೆ ನಗರಪಾಲಿಕೆ ವ್ಯಾಪ್ತಿಯಲ್ಲಿ ಶೌಚಾಲಯ ಸೌಲಭ್ಯದ ಇಲ್ಲದ ಕಡೆ ಶೌಚಾಲಯ ವ್ಯವಸ್ಥೆ ಮಾಡಬೇಕು. ಮಹಿಳೆಯರ ಕಷ್ಟ ದೂರ ಮಾಡಬೇಕು ಎಂದು ಒತ್ತಾಯಿಸಿದರು. 

ಸ್ಲಂ ಜನಾಂದೋಲನ ಜಿಲ್ಲಾ ಸಂಚಾಲಕಿ ರೇಣುಕ ಯಲ್ಲಮ್ಮ ಹಾವೇರಿ, ಪುಷ್ಪಮ್ಮ, ಹುಲುಗಮ್ಮ, ಪಾರ್ವತಿ, ಎಚ್‌. ಶಂಕರ್‌,
ಎಂ. ಬಸವರಾಜ್‌, ಶಬೀºರ್‌, ಗಂಗಮ್ಮ, ಸಿ. ರೇಖಾ, ಹೊಳಿಯಮ್ಮ, ಜಯಂತಿ, ಜಯಂತಿ, ಕೆ. ಹನುಮಂತಪ್ಪ, ಶಾಂತಮ್ಮ, ಗೀತಮ್ಮ, ಚಂದ್ರಮ್ಮ, ವಸಂತಮ್ಮ, ರಂಜಿತಾ, ಬಸಪ್ಪ, ರುದ್ರಗೌಡ, ಚಂದ್ರಪ್ಪ, ಸಂತೋಷ್‌ನಾಯ್ಕ, ಸರೋಜಾ, ನಿರ್ಮಲ ಇತರರು ಇದ್ದರು.

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.