ಶೀಘ್ರ ಪರಿಹಾರ ಬಿಡುಗಡೆ: ರೇಣುಕಾಚಾರ್ಯ
Team Udayavani, Nov 21, 2021, 12:42 PM IST
ಹೊನ್ನಾಳಿ: ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಾದ್ಯಂತ ಅಕಾಲಿಕ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡಿಸುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಶನಿವಾರ ದೂರವಾಣಿ ಮೂಲಕ “ಉದಯವಾಣಿ’ ಜತೆ ಮಾತನಾಡಿದ ಅವರು, ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಳೆ ಹಾನಿಯ ಬಗ್ಗೆ ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದರು.
ಅವಳಿ ತಾಲೂಕಿನಾದ್ಯಂತ 300 ಹೆಕ್ಟೇರ್ ಭತ್ತ, ಮೆಕ್ಕೆಜೋಳ ಬೆಳೆಗಳಿಗೆ ಹಾನಿಯಾಗಿದೆ. 169 ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಹಾನಿಯಾಗಿದೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಾದ್ಯಂತ 83 ಮನೆಗಳಿಗೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು. ಈಗಾಗಲೆ ಅವಳಿ ತಾಲೂಕಿನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದು, ಹಾನಿಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಜಂಟಿ ಸರ್ವೇ ಮಾಡುವಂತೆ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಅಧಿಕಾರಿಗಳಿಂದ ವರದಿ ಬಂದ ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಪರಿಹಾರ ಕೊಡಿಸಲಾಗುವುದು. ಅವಳಿ ತಾಲೂಕಿನಲ್ಲಿ ರಸ್ತೆ, ಸೇತುವೆಗಳಿಗೂ ಹಾನಿಯಾಗಿದ್ದು, ಈ ಬಗ್ಗೆ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಳೆಯಿಂದಾಗಿ ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿದ್ದು, ಜನರು ಓಡಾಡುವಾಗ ಜಾಗರೂಕತೆಯಿಂದ ಇರುವಂತೆ ಶಾಸಕರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ನೆಲ್ಯಾಡಿ: ಕಾರು – ಟಿಪ್ಪರ್ ಢಿಕ್ಕಿ; ಓರ್ವ ಸಾವು
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ