ರೆಡ್ಡಿ ವಿರುದ್ಧ ಸುಳ್ಳು ಜಾತಿನಿಂದನೆ ದೂರು: ಖಂಡನೆ

Team Udayavani, Apr 15, 2017, 1:24 PM IST

dvg5.jpg

ಹರಪನಹಳ್ಳಿ: ಮಾಜಿ ಸಚಿವ ಜಿ.ಕರುಣಾಕರರೆಡ್ಡಿ ಅವರ ವಿರುದ್ಧ ಸುಳ್ಳು ಜಾತಿ ನಿಂದನೆ ಮೊಕದ್ದಮೆ ದಾಖಲಿಸುವ ಮೂಲಕ ಶೋಷಿತ ಸಮುದಾಯಗಳ ಹಿತ ಕಾಯುವ ಜಾತಿ ನಿಂದನೆ ಕಾನೂನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕು ಉಪಾಧ್ಯಕ್ಷ ಕಣವಿಹಳ್ಳಿ ಮಂಜುನಾಥ್‌ ದೂರಿದರು. 

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.10ರಂದು ಜನ್ಮದಿನ ಆಚರಿಸಿಕೊಳ್ಳುವ ದಿನದಂದು ಬಳ್ಳಾರಿಯಲ್ಲಿ ಕರುಣಾಕರರೆಡ್ಡಿ ವಿರುದ್ಧ ಅಮಾಯಕರಿಂದ ಜಾತಿ ನಿಂದನೆ ಪ್ರಕರಣ ದಾಖಲು ಮಾಡಿಸಿದ್ದಾರೆ. ಆದರೆ ಏ.9 ಮತ್ತು 10ರಂದು ರೆಡ್ಡಿ ಅವರು ಹರಪನಹಳ್ಳಿ ಕ್ಷೇತ್ರದಲ್ಲಿದ್ದರು.

ಕರುಣಾಕರರೆಡ್ಡಿ ಬಳ್ಳಾರಿಯಲ್ಲಿ ಇಲ್ಲದ ಸಮಯದಲ್ಲಿ ಜಾತಿ ನಿಂದಿಸಿರುವುದಾಗಿ ದೂರು ದಾಖಲಿಸಿರುವುದು ಹಾಸ್ಯಾಸ್ಪದ ಎಂದರು. ಕಳೆದ ಫೆ.15,16,17ರಂದು ಕೂಡ ಕರುಣಾಕರರೆಡ್ಡಿ ಅವರು ಹರಪನಹಳ್ಳಿ ಕ್ಷೇತ್ರದಲ್ಲಿದ್ದಾಗ ಫೆ.15ರಂದು ಅವರ ವಿರುದ್ಧ ದೂರು ದಾಖಲಿಸಲು ತೆರಳಿದಾಗ ಪೊಲೀಸರು ಪರಿಶೀಲನೆ ನಡೆಸುವುದಾಗ ಕೇಳಿದ್ದರು.

ಆಗ ದೂರುದಾರರು ಎಸ್ಸಿ-ಎಸ್ಟಿ ಸೇಲ್‌ಗೆ ಹೋಗಿದ್ದರು. ಅವರು ಪರಿಶೀಲಿಸಿ ದೂರು ದಾಖಲಿಸಿಕೊಳ್ಳುವಂತೆ ತಿಳಿಸಿದಾಗ ಕರುಣಾಕರರೆಡ್ಡಿ ಬಳ್ಳಾರಿಯಲ್ಲಿ ಇಲ್ಲದ ಸಮಯದಲ್ಲಿ ಜಾತಿ ನಿಂದಿಸಿರುವುದಾಗಿ ದೂರು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸುವ ಹಿಂದೆ ರಾಜ್ಯಮಟ್ಟದ ನಾಯಕರೊಬ್ಬರಿದ್ದು, ದೊಡ್ಡವರಿಗೆ ಇಂತಹ ಸಣ್ಣತನ ಶೋಭೆಯಲ್ಲ ಎಂದು ತಿಳಿಸಿದರು. 

ಕರುಣಾಕರರೆಡ್ಡಿ ಅವರ ವ್ಯಕ್ತಿತ್ವ ಎಲ್ಲರಿಗೂ ಗೊತ್ತಿದೆ. ಯಾರಿಗೂ ಅವಾಚ್ಚ ಶಬ್ದಗಳಿಂದ ನಿಂದಿಸಿರುವುದು ಅವರ ಇತಿಹಾಸದಲ್ಲಿಯೇ ಇಲ್ಲ. ರಾಜಕಾರಣದ ಪಿತೂರಿಯಿಂದ ಇಂತಹ ಪ್ರಕರಣ ದಾಖಲಿಸಲಾಗಿದೆ. ಕ್ಷೇತ್ರದಲ್ಲಿ ಎಸ್ಟಿ-ಎಸ್ಟಿ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ, ತಲಾ 1 ಕೋಟಿರೂ ವೆಚ್ಚದಲ್ಲಿ ಅಂಬೇಡ್ಕರ್‌ ಹಾಗೂ ವಾಲ್ಮೀಕಿ ಭವನ ನಿರ್ಮಿಸಿದ್ದಾರೆ.

ದಲಿತ ಕಾಲೋನಿಗಳಲ್ಲಿ ಕಾಂಕ್ರಿಟ್‌ ರಸ್ತೆ, ಆಶ್ರಯ ಮನೆ ಕೊಟ್ಟಿದ್ದಾರೆ. ಇಂತವರು ಜಾತಿ ನಿಂದಿಸಲು ಸಾಧ್ಯವೇ ಇಲ್ಲ. ರಾಜಕಾರಣದ ದ್ವೇಷ ತೀರಿಸಿಕೊಳ್ಳಲು ದೊಡ್ಡ ಮನುಷ್ಯರು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಆ ನಾಯಕನ ಹೆಸರು ಬಹಿರಂಗಪಡಿಸುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.  ಬಿಜೆಪಿ ಎಸ್ಟಿ ಘಟಕದ ಅಧ್ಯಕ್ಷ ಆರ್‌.ಲೋಕೇಶ್‌ ಮಾತನಾಡಿ, ದಲಿತರು, ಹಿಂದುಳಿದವರ, ಅಲ್ಪಸಂಖ್ಯಾತರ ಬಗ್ಗೆ ಅಪಾರ ಪ್ರೀತಿ, ಕಾಳಜಿ ಹೊಂದಿರುವ ಕರುಣಾಕರರೆಡ್ಡಿ ಅವರ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ.

ಕರುಣಾಕರರೆಡ್ಡಿ  ಅವರ ಆಡಳಿತಾವಧಿಧಿಯಲ್ಲಿ ಕ್ಷೇತ್ರದಲ್ಲಿ ಜಾತಿ ನಿಂದನೆ ಪ್ರಕರಣಗಳು ದಾಖಲಾಗದಂತೆ ನೋಡಿಕೊಂಡು ಎಲ್ಲಾ ಸಮುದಾಯಗಳ ನಡುವೆ ಸಾಮರಸ್ಯ  ಮೂಡಿಸಿದ್ದರು ಎಂದು ತಿಳಿಸಿದರು. ಬಿಜೆಪಿ ಉಪಾಧ್ಯಕ್ಷ ಸಣ್ಣಹಾಲಪ್ಪ, ಪುರಸಭೆ ಸದಸ್ಯರಾದ ದುರುಗಪ್ಪ, ಜಯಮ್ಮ, ಕೃಷ್ಣ, ಮಾದಿಗ ಸಮಾಜದ ಮುಖಂಡರಾದ ನೀಲಗುಂದ ಹನುಮಂತ, ಹುಲಿಕಟ್ಟಿ ಕೋಟ್ರಪ್ಪ, ಮ್ಯಾಕಿ ದುರುಗಪ್ಪ, ಲಕ್ಕೇಶ್‌ ಸುದ್ದಿಗೋಷ್ಠಿಯಲ್ಲಿದ್ದರು.  

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.