ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಮನವಿ ಸಲ್ಲಿಕೆ

Team Udayavani, Mar 28, 2021, 6:53 PM IST

ಜ್ಗಹಜಗ್ಜ

ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕರಾಳ ಕೃಷಿ ಕಾಯ್ದೆಗಳ ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಬೆಂಬಲವಾಗಿ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಮೂರು ಕರಾಳ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಮತ್ತು ದೆಹಲಿ ಹೋರಾಟದ ರೂವಾರಿ ರಾಕೇಶ್‌ ಟಿಕಾಯತ್‌ ವಿರುದ್ಧ ದಾಖಲಾಗಿರುವ ಮೊಕದ್ದಮೆ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಮೂರು ಕೃಷಿ ಸಂಬಂಧಿತ ಕಾನೂನುಗಳನ್ನು ರದ್ದು ಮಾಡಬೇಕು. ವಿದ್ಯುತ್‌ ಮಸೂದೆ-2020 ನ್ನು ವಾಪಸು ಪಡೆಯಬೇಕು ಹಾಗು ಎಲ್ಲಾ ಕೃಷಿ ಉತ್ಪನ್ನಗಳಿಗೆ ಡಾ|ಎಂ.ಎಸ್‌. ಸ್ವಾಮಿನಾಥನ್‌ ವರದಿಯನ್ವಯ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿ ಮಾಡುವ ಕಾನೂನನ್ನು ರಚಿಸಬೇಕು ಎಂದು ಒತ್ತಾಯಿಸಿ ಕಳೆದ ನಾಲ್ಕು ತಿಂಗಳನಿಂದ ಶಾಂತಿಯುತವಾಗಿ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ಲಕ್ಷಾಂತರ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸುತ್ತಿರುವ ದೌರ್ಜನ್ಯ, ದಬ್ಟಾಳಿಕೆ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಚಾರಿತ್ರಿಕ ರೈತ ಹೋರಾಟದ ಬೇಡಿಕೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಬೇಕಾದ ಕೇಂದ್ರ ಸರ್ಕಾರ ಆರಂಭದಿಂದಲೂ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ.ರೈತರ ಜೊತೆಗೆ ಭಯೋತ್ಪಾದಕರು ಸೇರಿಕೊಂಡಿದ್ದಾರೆ.

ಚೀನಾ, ಪಾಕಿಸ್ತಾನಿ ಏಜೆಂಟರು ಇತ್ಯಾದಿ ಅಪಪ್ರಚಾರ ಮಾಡಲಾಗುತ್ತಿದೆ. ರೈತ ಚಳವಳಿಯನ್ನು ದುರ್ಬಲಗೊಳಿಸಲು ಸಾಧ್ಯವಾಗದೇ ಹತಾಶೆಯಿಂದ ಕೇಂದ್ರ ಸರ್ಕಾರ ಈಗ ಕಳೆದ ಒಂದು ತಿಂಗಳಿಂದ ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವ ಲಕ್ಷಾಂತರ ರೈತರು ಉಳಿದಿರುವ ಕಡೆ ವಿದ್ಯುತ್‌ ಸಂಪರ್ಕ, ಕುಡಿಯುವ ನೀರಿನ ಕಡಿತ, ಇಂಟರ್‌ನೆಟ್‌ ಸೇವೆ ಸ್ಥಗಿತ, ಹೋರಾಟದ ಕೇಂದ್ರಗಳನ್ನು ಬಯಲು ಬಂಧಿಖಾನೆಗಳಾಗಿ ಪರಿವರ್ತಿಸುತ್ತಿದ್ದಾರೆ. ಈ ಎಲ್ಲಾ ಕ್ರಮಗಳು ಅತ್ಯಂತ ಪ್ರಜಾಪ್ರಭುತ್ವ ವಿರೋಧಿ, ಅನಾಗರೀಕ ಧೋರಣೆ, ಫ್ಯಾಸಿಸ್ಟ್‌ ಕ್ರಮಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಪಂ ಸದಸ್ಯ ತೇಜಸ್ವಿ ಪಟೇಲ್‌, ನ್ಯಾಯವಾದಿ ಅನೀಸ್‌ ಪಾಷಾ, ಸುನೀತ್‌ ಕುಮಾರ್‌, ತಿಪ್ಪೇಸ್ವಾಮಿ ಅಣಬೇರು, ಸತೀಶ್‌ ಅರವಿಂದ್‌, ಆದಿಲ್‌ಖಾನ್‌ ಇತರರು ಇದ್ದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.