ಕುರುಬ ಸಮಾಜ ಎಸ್ಟಿಗೆ ಸೇರಿಸಲು ಆಗ್ರಹ

Team Udayavani, Dec 13, 2020, 4:35 PM IST

ಕುರುಬ ಸಮಾಜ ಎಸ್ಟಿಗೆ ಸೇರಿಸಲು ಆಗ್ರಹ

ದಾವಣಗೆರೆ: ಎಲ್ಲಾ ಕ್ಷೇತ್ರಗಳಲ್ಲಿ ಹಿಂದುಳಿದಿರುವ ಕುರುಬ ಸಮುದಾಯದವರ ಅಭ್ಯುದಯಕ್ಕೆ ಎಸ್‌ಟಿ ಪಟ್ಟಿಗೆ ಸೇರಿಸಲು ಆಗ್ರಹಿಸಲಾಗುತ್ತಿದೆ. ಹೊರತು ಯಾರ ವಿರುದ್ಧವಾಗಿಯೂ ಹೋರಾಟ ನಡೆಸುತ್ತಿಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ತಿಳಿಸಿದರು.

ಶನಿವಾರ ದೇವರಾಜ ಅರಸು ಬಡಾವಣೆ ಶ್ರೀ ಬೀರಲಿಂಗೇಶ್ವರ ಭವನದಲ್ಲಿ ನಡೆದ ಕುರುಬ ಎಸ್‌ಟಿ ಹೋರಾಟ ಸಮಿತಿ ಪೂರ್ವಭಾವಿ ಸಭೆಯಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಎಲ್ಲಾನಾಯಕರು ರಾಜಕೀಯ ಪಕ್ಷಕ್ಕೆ ಅಂಟಿಕೊಂಡುಹುಟ್ಟಿರುವುದಿಲ್ಲ. ಜಾತಿ, ಸಮುದಾಯದಲ್ಲಿಹುಟ್ಟಿರುತ್ತಾರೆ. ಜಾತಿಯ ಋಣ ತೀರಿಸಲು ಮುಂದಾಗಬೇಕು. ಈಶ್ವರಪ್ಪ ಅವರು ಸಹ ಹುಟ್ಟತ್ತಲೇ ಬಿಜೆಪಿಯವರಾಗಿ ಹುಟ್ಟಿಲ್ಲ.ಹೋರಾಟಕ್ಕೆ ಬಲ ತುಂಬುವ ಮೂಲಕ ಜಾತಿ ಋಣ ತೀರಿಸಲು ಮುಂದೆ ಬಂದಿದ್ದಾರೆ ಎಂದರು. ಸಮಾಜಕ್ಕೆ ಸಂಬಂಧಿಸಿದ ಹೋರಾಟಗಳಿಗೆ ಅಧಿಕಾರ ಮತ್ತು ಜಾಗೃತಿ ಅವಶ್ಯಕ. ಈಶ್ವರಪ್ಪ ಅವರು ತಮಗಿರುವ ಅಧಿಕಾರದ ಮೂಲಕ ಈ ಹೋರಾಟದ ಹೊಣೆ ಹೊರಬೇಕು ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ,ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿಹಿಂದುಳಿದ ಎಲ್ಲಾ ಜಾತಿಗಳಿಗೆ ಮೀಸಲಾತಿ ದೊರಕಬೇಕು ಎಂಬುದು ಅಂಬೇಡ್ಕರ್‌ರವರ ಆಶಯ. ಕುರುಬ ಸಮಾಜದ ಎಸ್ಟಿ ಮೀಸಲಾತಿಗೆಕಾಗಿನೆಲೆ ಮಹಾಸಂಸ್ಥಾನದ ಸ್ವಾಮೀಜಿಗಳು ನೇತೃತ್ವ ವಹಿಸಿಕೊಂಡಿರುವುದರಿಂದ ಸಮುದಾಯಕ್ಕೆ ಎಸ್ಟಿಮೀಸಲು ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.ಹಿಂದುತ್ವ ಬಿಟ್ಟು ಜಾತಿ ಪರ ಹೋಗಿದ್ದೀರಿ ಎಂದು ಸ್ವಪಕ್ಷೀಯರು ಸೇರಿದಂತೆ ಕೆಲವರು ತಮಗೆ ಪ್ರಶ್ನಿಸುತ್ತಿದ್ದಾರೆ. ಹಿಂದುತ್ವದಲ್ಲಿಯೇ ಈಎಲ್ಲಾ ಜಾತಿಗಳು ಇವೆ. ಬಡವರ ಪರವಾಗಿ ನಿಲ್ಲುವ ಕಾಲಬಂದಿದೆ. ಹಾಗಾಗಿ, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಯಾವುದೇ ಜಾತಿಗಳಿದ್ದರೂ ಅವುಗಳ ಮೀಸಲಾತಿಗಾಗಿ ತಾವು ಹೋರಾಟ ನಡೆಸುವುದಾಗಿ ತಿಳಿಸಿದರು.

ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಬೇಕು ಎಂಬುದು ಹಲವು ವರ್ಷಗಳ ಒತ್ತಾಯ. ರಾಜಕೀಯ ಒತ್ತಡವಿಲ್ಲದಿದ್ದರೆ ನಮ್ಮನ್ನು ಯಾರೂ ಮಾತನಾಡಿಸುವುದಿಲ್ಲ. ಕೆಲವರು ° ರಾಜೀನಾಮೆಕೊಟ್ಟು ಹೋರಾಟ ನಡೆಸಿ ಎನ್ನುತ್ತಿದ್ದಾರೆ. ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಸಿಗುತ್ತದೆ ಎಂದರೆ ನಾನು ರಾಜೀನಾಮೆ ನೀಡಲು ಸಿದ್ದ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಹೋರಾಟಕ್ಕೆ ಆಹ್ವಾನಿಸಿದ್ದೇವೆ. ಕೆಲವು ಕಾರಣಗಳಿಂದ ಅವರು ಪಾಲ್ಗೊಳ್ಳಲು ಆಗುತ್ತಿಲ್ಲ.ನಮ್ಮ ಬೆಂಬಲ ಇರಲಿದೆ. ಯಾವುದೇ ತೊಂದರೆ ಆಗುವುದಿಲ್ಲ ಎಂದಿದ್ದರು. ಅವರು ಯಾವಾಗಬಂದರೂ ಅವರಿಗೆ ಸ್ವಾಗತವಿದೆ ಎಂದು ಹೇಳಿದರು.

ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಕೊಡುವಂತೆ ಕಳೆದ 30 ವರ್ಷಗಳಿಂದ ಹೋರಾಟ ನಡೆಸಿದ್ದರೂ ಸಹ ಯಾವುದೇ ಪ್ರಯೋಜನವಾಗಿರಲಿಲ್ಲ. ಈಗ ಕಾಗಿನೆಲೆಯ ಮತ್ತು ಹೊಸದುರ್ಗ ಶಾಖಾ ಮಠದ ಶ್ರೀಗಳು ಮುಂದಾಳತ್ವ ವಹಿಸಿದ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನಕ್ಕೆ ತೆಗೆದುಕೊಂಡಿವೆ. ಕುಲಶಾಸ್ತ್ರ ಅಧ್ಯಯನ ಮುಗಿದ ನಂತರ ರಾಜ್ಯ ಸರ್ಕಾರದ ಒಪ್ಪಿಗೆ ಪಡೆದು, ಪ್ರಯತ್ನಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಪ್ರಾಸ್ತಾವಿಕ ಮಾತನಾಡಿದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಕುರುಬ ಸಮಾಜ ಅತ್ಯಂತ ಹಿಂದುಳಿದ ಸಮಾಜ ಎಂದು ಬ್ರಿಟಿಷರ ಕಾಲದಲ್ಲಿ ಎಸ್‌ಟಿಯಲ್ಲಿತ್ತು ಎಂದು ಹೇಳಿದರು.

ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಬಿ.ಎಂ. ಸತೀಶ್‌, ಮುಕುಡಪ್ಪ, ಜೀಹೆÌàಶ್ವರಿ, ಎಚ್‌.ಸಿ. ಜಯಮ್ಮ, ಪ್ರಸನ್ನಕುಮಾರ್‌, ಜಿಪಂಮಾಜಿ ಅಧ್ಯಕ್ಷೆ ಕೆ.ಆರ್‌. ಜಯಶೀಲ, ನಾಗೇಂದ್ರಪ್ಪ,  ಹದಡಿ ಲಿಂಗಣ್ಣ, ಶಂಕರಪ್ಪ, ರಾಜುಗೌಡ, ಪ್ರಭಾವತಿ, ಶಶಿಕಲಾ ಇದ್ದರು.

ಪಾದಯಾತ್ರೆಗೆ ತೀರ್ಮಾನ : ಕುರುಬ ಸಮಾಜದ ಎಸ್‌ಟಿ ಮೀಸಲಾತಿಗಾಗಿ ಆಗ್ರಹಿಸಿ ದಾವಣಗೆರೆ, ಹಾವೇರಿ, ಚಿತ್ರದುರ್ಗ ಜಿಲ್ಲೆಗಳ ವಿಭಾಗ ಮಟ್ಟದ ಸಮಾವೇಶವನ್ನು ಜ. 6 ರಂದು ದಾವಣಗೆರೆಯಲ್ಲಿ ಆಯೋಜಿಸಲು ಮತ್ತು ಜ.15 ರಿಂದ ಕಾಗಿನೆಲೆಯಿಂದ ಬೆಂಗಳೂರು ವರೆಗೆ ಪಾದಯಾತ್ರೆ ಕೈಗೊಳ್ಳಲು ತೀರ್ಮಾನಿಸಲಾಯಿತು.

ಟಾಪ್ ನ್ಯೂಸ್

ಬ್ಯಾಟಿಂಗ್‌ನಲ್ಲಿ ಮಿಂಚಿದ ಹನುಮ ವಿಹಾರಿ, ಇಶಾನ್‌ ಕಿಶನ್‌ 

ಬ್ಯಾಟಿಂಗ್‌ನಲ್ಲಿ ಮಿಂಚಿದ ಹನುಮ ವಿಹಾರಿ, ಇಶಾನ್‌ ಕಿಶನ್‌ 

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಸುಲಭ ದಯಾಮರಣಕ್ಕೆ ಬಂದಿದೆ ಯಂತ್ರ

ಸುಲಭ ದಯಾಮರಣಕ್ಕೆ ಬಂದಿದೆ ಯಂತ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanagere news

ಮಾದಿಗ ದಂಡೋರ ಮಹಾಸಭೆಗೆ ಜಿಲ್ಲೆಯಿಂದ 100 ಜನ

davanagere news

ನಾಮಫಲಕ ಆಂಗ್ಲಮಯವಾಗಿದ್ದರೆ ದಂಡ

Lok Adalat

18ರಂದು ಬೃಹತ್‌ ಲೋಕ್‌ ಅದಾಲತ್‌ ಆಯೋಜನೆ

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

davanagere news

ಮೊದಲ ಡೋಸ್‌ನಲ್ಲಿ ಸಾಧನೆ -2ನೇ ಡೋಸ್‌ಗೆ ವೇದನೆ

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

ಬ್ಯಾಟಿಂಗ್‌ನಲ್ಲಿ ಮಿಂಚಿದ ಹನುಮ ವಿಹಾರಿ, ಇಶಾನ್‌ ಕಿಶನ್‌ 

ಬ್ಯಾಟಿಂಗ್‌ನಲ್ಲಿ ಮಿಂಚಿದ ಹನುಮ ವಿಹಾರಿ, ಇಶಾನ್‌ ಕಿಶನ್‌ 

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.