ಸೌರಶಕ್ತಿಯಿಂದ ಇ-ವಾಹನ ತಯಾರಿಗೆ ಸಂಶೋಧನೆ

ವಿದ್ಯುತ್‌ ಚಾಲಿತ, ಹೈಬ್ರಿಡ್‌ ವಾಹನಗಳಲ್ಲಿ ಸೌರಶಕ್ತಿ ಬಳಕೆ ಕಾರ್ಯ ಸಾಧ್ಯ

Team Udayavani, Mar 13, 2022, 10:55 AM IST

3

ದಾವಣಗೆರೆ: ಯಾವುದೇ ಅಡೆತಡೆ ಇಲ್ಲದೆ ನಿರಂತರ ಇ-ವಾಹನ ಚಲಾಯಿಸಲು ಸಾಧ್ಯವಾಗಬಹುದಾದ ಹೈಬ್ರಿಡ್‌ ಸೌರಶಕ್ತಿ ಅಭಿವೃದ್ಧಿಪಡಿಸುವ ಪರಿಕಲ್ಪನೆಯ ಪಿವಿ-ಸೆಲ್‌ ಮತ್ತು ಡಿಎಸ್‌ಎಸ್‌ಸಿ ಸಂಯೋಜನೆಯ ಸಂಶೋಧನೆ ನಗರದ ಬಾಪೂಜಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ| ಎಚ್‌.ಬಿ. ಅರವಿಂದ್‌ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ರೋವ್‌ ಲ್ಯಾಬ್ಸ್ ಪ್ರೈ ಲಿಮಿಟೆಡ್‌ ಸಹಯೋಗದಲ್ಲಿ ಕಾಲೇಜಿನಲ್ಲಿ ಸಾಕಷ್ಟು ಸಂಶೋಧನಾ ಯೋಜನೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಹೆಚ್ಚುತ್ತಿರುವ ಇಂಧನ ಬೆಲೆಗಳು, ವಾಯುಮಾಲಿನ್ಯ ತಡೆ, ಇಂಧನ ಉಳಿತಾಯದ ಅಗತ್ಯದ ಹಿನ್ನೆಲೆಯಲ್ಲಿ ಸೌರಶಕ್ತಿ ಪರಿಹಾರವಾಗಿದೆ. ವಿದ್ಯುತ್‌ ಚಾಲಿತ, ಹೈಬ್ರಿಡ್‌ ವಾಹನಗಳಲ್ಲಿ ಸೌರಶಕ್ತಿ ಬಳಕೆ ಕಾರ್ಯ ಸಾಧ್ಯ. ಅದೇ ರೀತಿ ಕೊಳಚೆ ನೀರಿನಿಂದ ದ್ರವರೂಪದ ನ್ಯಾನೋ ಗೊಬ್ಬರ ತಯಾರಿಸುವ ನಿಟ್ಟಿನಲ್ಲಿ ತಮ್ಮ ಕಾಲೇಜು ವಿದ್ಯಾರ್ಥಿಗಳು ಬೋಧಕರ ಮಾರ್ಗದರ್ಶನದಲ್ಲಿ ಮುಂದಾಗಿದ್ದಾರೆ. ರಾಜ್ಯದ ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜುಗಳಲ್ಲೊಂದಾದ ಬಿಐಇಟಿಯಲ್ಲಿ ಸುಮಾರು 25 ಸಾವಿರ ವಿದ್ಯಾರ್ಥಿಗಳು ಓದಿದ್ದು 8ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಶ್ವದ ವಿವಿಧೆಡೆ ಪ್ರತಿಷ್ಠಿತ ಕಂಪನಿಗಳಲ್ಲಿ, ಸ್ವಂತ ಕಂಪನಿಗಳನ್ನು ಸ್ಥಾಪಿಸಿಕೊಂಡು
ಸಾಧನೆ ಮಾಡುತ್ತಿದ್ದಾರೆ ಎಂದರು.
ಪ್ರಾಧ್ಯಾಪಕಿ ಡಾ| ಆಶಾಲತಾ ಮಾತನಾಡಿ, ಮಾ. 14ರಂದು ಬೆಳಿಗ್ಗೆ 10:30ಕ್ಕೆ ಕಾಲೇಜಿನ ಎಸ್ಸೆಸ್ಸೆಂ ಸಾಂಸ್ಕೃತಿಕ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಮ್ಮಿಕೊಂಡಿದ್ದೇವೆ. ಡಾ| ಪ್ರಭಾ ಮಲ್ಲಿಕಾರ್ಜುನ, ಡಾ| ಟಿ.ಕೆ. ಅನುರಾಧ, ಡಾ| ಬಿ.ಇ. ರಂಗಸ್ವಾಮಿ
ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾಲೇಜು ನಿರ್ದೇಶಕ ಪ್ರೊ.ವೈ.ವೃಷಭೇಂದ್ರಪ್ಪ, ಪ್ರಾಚಾರ್ಯ ಡಾ.ಎಚ್‌.ಬಿ.ಅರವಿಂದ ಇತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಕಾಲೇಜಿನ ಬೋಧಕ ಸಾರ್ವಜನಿಕ ಸಂಪರ್ಕ ಡೀನ್‌ ಡಾ| ಈ.ಪಿ. ದೇಸಾಯಿ, ಡಾ| ಶಂಕರಮೂರ್ತಿ, ಡಾ| ನಿರ್ಮಲ, ಡಾ| ಶರಣ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.