ವಜ್ರ ಮಾರಾಟ-30 ಕೋಟಿ ಸಕ್ರಮ ಸೋಗಲ್ಲಿ ವಂಚನೆ: ಮೂವರ ಬಂಧನ

Team Udayavani, Aug 10, 2017, 3:07 PM IST

10-DV-2.jpg

ದಾವಣಗೆರೆ: ಬೆಲೆ ಬಾಳುವ ವಜ್ರ ಮಾರಾಟ ಮತ್ತು 30 ಕೋಟಿ ಕಪ್ಪುಹಣ ಸಕ್ರಮದ ಸೋಗಲ್ಲಿ ವ್ಯಕ್ತಿಯೊಬ್ಬನಿಗೆ ವಂಚಿಸಿದ ಆರೋಪದಡಿ ದುನಿಯಾ ವಿಜಿ ಅಭಿಮಾನಿಗಳ ಬಳಗದ ರಾಜ್ಯಾಧ್ಯಕ್ಷ, ಹೊನ್ನಾಳಿ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ, ಚಲನಚಿತ್ರ ನಿರ್ಮಾಪಕ
ಸೇರಿ ಮೂವರನ್ನು ಹೊನ್ನಾಳಿ ಪೊಲೀಸರು ಬಂಧಿಸಿದ್ದಾರೆ.

ದುನಿಯಾ ವಿಜಿ ಅಭಿಮಾನಿಗಳ ಬಳಗದ ರಾಜ್ಯಾಧ್ಯಕ್ಷ ದೊಡ್ಡೇಶ್‌, ಹೊನ್ನಾಳಿ ತಾಪಂ ಮಾಜಿ ಉಪಾಧ್ಯಕ್ಷ, ಬೆಳ್ಳಿಬೆಟ್ಟ ಚಿತ್ರ ನಿರ್ಮಾಪಕ ಉತ್ತೇಶ್‌ ಹಾಗೂ ದಾವಣಗೆರೆ ಎಸ್‌ಎಸ್‌ ಬಡಾವಣೆ ನಿವಾಸಿ, ಎಚ್‌ಡಿಎಫ್‌ಸಿ ಬ್ಯಾಂಕ್‌ ಮಾಜಿ ನೌಕರ ಗುರುರಾಜ್‌ ಬಂಧಿತ ಆರೋಪಿಗಳು. ಬಂಧಿತರಿಂದ 2 ಕಾರು, 2 ಲಕ್ಷ ರೂ. ನಗದು ಸೇರಿ ಒಟ್ಟು 68.66 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ  ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಭೀಮಾಶಂಕರ್‌ ಎಸ್‌. ಗುಳೇದ್‌ ತಿಳಿಸಿದ್ದಾರೆ.

ಘಟನೆ ವಿವರ: ಬೆಂಗಳೂರಿನಲ್ಲಿರುವ ಸೆಕ್ಯುರಿಟಿ ಏಜೆನ್ಸಿಯ ತಬರೇಜ್‌ ಎಂಬುವವರನ್ನು ಸಂಪರ್ಕಿಸಿದ ಆರೋಪಿಗಳು, ತಮ್ಮ ಬಳಿ 30 ಕೋಟಿ ರೂ. ಕಪ್ಪುಹಣ ಇದ್ದು, ಅದನ್ನು ಸಕ್ರಮ ಮಾಡಿ ಕೊಡಬೇಕು, ಜೊತೆಗೆ ಬೆಲೆ ಬಾಳುವ ವಜ್ರ ಖರೀದಿಸಬೇಕು ಎಂದು ಹೇಳಿದ್ದಾರೆ. ಜು.28ರಂದು ತಬರೇಜ್‌ ರನ್ನು ದಾವಣಗೆರೆಗೆ ಕರೆಸಿಕೊಂಡಿದ್ದಾರೆ. ದಾವಣಗೆರೆಗೆ ಬಂದ ತಬರೇಜ್‌ರನ್ನು ಹುತ್ತೇಶರ ಸ್ವಂತ ಊರಾದ ಹೊನ್ನಾಳಿ ತಾಲೂಕು ಕೆಂಚಿಕೊಪ್ಪ ಗ್ರಾಮಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಹುತ್ತೇಶ್‌ ಮನೆಯಲ್ಲಿ ಅವರನ್ನು ಮೂರು ದಿನಗಳ ಕಾಲ ಕೂಡಿಹಾಕಿದ್ದಾರೆ. ಆತನ ಬಳಿ ಇದ್ದ 2 ಲಕ್ಷ ರೂ. ಹಾಗೂ ಅವರು ತಂದಿದ್ದ ಬೆಂಜ್‌ ಕಾರ್‌ ಕಸಿದುಕೊಂಡಿದ್ದಾರೆ. ನಂತರ ಆತನನ್ನು ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ-4ಕ್ಕೆ ಕರೆತಂದು ಬೆಂಗಳೂರಿಗೆ ಬಸ್‌ ಮೂಲಕ ಕಳುಹಿಸಿದ್ದಾರೆ ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

ಒಂದು ವಾರದ ನಂತರ ತಬರೇಜ್‌ ವಾಪಸ್‌ ನ್ಯಾಮತಿಗೆ ಬಂದು ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಗ್ರಾಮಾಂತರ ಡಿಎಸ್‌ಪಿ ಮಂಜುನಾಥ ಕೆ. ಗಂಗಲ್‌, ಹೊನ್ನಾಳಿ ಸಿಪಿಐ ಜೆ. ರಮೇಶ್‌, ನ್ಯಾಮತಿ ಪಿಎಸ್‌ಐ ಎನ್‌.ಸಿ. ಕಾಡದೇವರ, ಆ.9ರಂದು ಹೊನ್ನಾಳಿ ತಾಲೂಕು ಕಮ್ಮಾರಗಟ್ಟ ಬಳಿ ಎರಡು ಕಾರ್‌ಗಳನ್ನು ವಶಪಡಿಸಿಕೊಂಡು, ಮೂವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಅವರ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಆರೋಪಿಗಳಿಂದ ವಶಪಡಿಸಿಕೊಂಡಿರುವ ಫೋರ್ಡ್‌ ಇಕೋ ಎಸ್‌ಯುವಿ ಕಾರ್‌ ಬೇರೆಯವರ ಹೆಸರಲ್ಲಿದೆ. ಇದು ಯಾರದ್ದು ಎಂದು ಪತ್ತೆ ಮಾಡುವಲ್ಲಿ ನಮ್ಮ ತಂಡ ನಿರತವಾಗಿದೆ. ಮೇಲ್ನೋಟಕ್ಕೆ ಈ ಆರೋಪಿಗಳು ಇಂತಹುದ್ದೇ ಕೃತ್ಯ ಇನ್ನು ಹಲವು ಕಡೆ ಮಾಡಿರುವ ಶಂಕೆ ಇದೆ. ಇನ್ನಷ್ಟು ತನಿಖೆ ನಂತರ ಇದು ಗೊತ್ತಾಗಲಿದೆ ಎಂದು ಅವರು ಹೇಳಿದರು. ಪ್ರಕರಣದಲ್ಲಿ ಆರೋಪಿಗಳ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಜಿ. ಶಿವಾನಂದಪ್ಪ, ದೊಡ್ಡಬಸಪ್ಪ, ಎಚ್‌.ವಿ. ಹರೀಶ, ವೆಂಕಟರಮಣ, ಫೈರೋಜ್‌ ಖಅನ್‌, ಪ್ರಕಾಶ್‌, ರಾಜಶೇಖರ್‌ ಹೇಮನಾಯ್ಕ, ವಿಜಯ್‌, ನಾಗರಾಜ, ತಾಂತ್ರಿಕ ವಿಭಾಗದ ರಾಮಚಂದ್ರರಿಗೆ ಇಲಾಖೆಯಿಂದ 10 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ ಎಂದು ಅವರು ತಿಳಿಸಿದರು. 

ಹೆಚ್ಚುವರಿ ಪೊಲೀಸ್‌ ಅಧೀಕ್ಷಕಿ ಯಶೋಧ ಎಸ್‌.ವಂಟಿಗೋಡಿ, ಗ್ರಾಮಾಂತರ ವಿಭಾಗದ ಉಪಾಧೀಕ್ಷಕ ಮಂಜುನಾಥ ಕೆ. ಗಂಗಲ್‌, ಹೊನ್ನಾಳಿ ಸಿಪಿಐ ಜೆ. ರಮೇಶ, ಪಿಎಸ್‌ಐ ಎನ್‌.ಸಿ. ಕಾಡದೇವರ ಮಠ ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.