ಶಾಲಾ ಶಿಕ್ಷಕರ ಪ್ರತಿಭಟನೆ ನಾಡಿದ್ದು

Team Udayavani, Feb 14, 2019, 5:48 AM IST

dvg-2.jpg

ದಾವಣಗೆರೆ: ಮುಂದಿನ ಶೈಕ್ಷಣಿಕ ವರ್ಷಕ್ಕೆ ಅನುಕೂಲ ಆಗುವಂತೆ ಶಿಕ್ಷಕರ ವರ್ಗಾವಣೆ, ಪದವೀಧರರು ಮತ್ತು ಇತರೆ ಶಿಕ್ಷಕರಿಗೆ ಬಡ್ತಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಫೆ. 16ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಎನ್‌. ತಿಪ್ಪೇಶಪ್ಪ ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನ 12ಕ್ಕೆ ನಡೆಯುವ ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು, ಶಿಕ್ಷಕರು ಭಾಗವಹಿಸುವರು. ಹಲವಾರು ವರ್ಷಗಳ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಮೂರು ವರ್ಷದಿಂದ ಒಟ್ಟಾರೆಯಾಗಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನೇ ನಿಲ್ಲಿಸಲಾಗಿದೆ. ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವಾರು ತಾಂತ್ರಿಕ ಸಮಸ್ಯೆ, ಗೊಂದಲ ಎಲ್ಲವೂ ನಿವಾರಣೆ ಆಗಿವೆ. ಸರ್ಕಾರ ಆದಷ್ಟು ಬೇಗ ಮುಂದಿನ ಶೈಕ್ಷಣಿಕ ವರ್ಷಕ್ಕೆ ಅನುಕೂಲ ಆಗುವಂತೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರಾಥಮಿಕ ಶಾಲಾ ಹಂತದಲ್ಲಿ 6 ರಿಂದ 8ನೇ ತರಗತಿಯವರೆಗೆ ಪಾಠ ಮಾಡುತ್ತಿರುವ ಪದವೀಧರರು ಮತ್ತು ಇತರೆ ಶಿಕ್ಷಕರಿಗೆ ಬಡ್ತಿ ನೀಡಬೇಕು. ಹೊಸದಾಗಿ ನೇಮಕಾತಿ ಮಾಡಿಕೊಳ್ಳುವ ಬದಲಿಗೆ ಈಗಾಗಲೇ ಕೆಲಸ ಮಾಡುತ್ತಿರುವಂತಹ ಪದವೀಧರರು ಮತ್ತು ಇತರೆ ಶಿಕ್ಷಕರಿಗೆ ಬಡ್ತಿ ನೀಡುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂಬುದು ಸಂಘದ ಒತ್ತಾಯ ಎಂದು ತಿಳಿಸಿದರು.

ರಾಜ್ಯದಲ್ಲೆಡೆ 28 ಸಾವಿರದಷ್ಟು ಮುಖ್ಯೋಪಾಧ್ಯಾಯರು, ಬಡ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ 10 ರಿಂದ 30 ವರ್ಷಗಳಲ್ಲಿ ಯಾವುದೇ ರೀತಿಯ ಆರ್ಥಿಕ ಸೌಲಭ್ಯವೇ ದೊರೆತಿಲ್ಲ. ಶಾಲಾ ಆಡಳಿತ ಎಲ್ಲಾ ಕೆಲಸದ ನಿರ್ವಹಣೆ ಮಾಡುತ್ತಿದ್ದರೂ ಆರ್ಥಿಕ ಸೌಲಭ್ಯ ಮಾತ್ರ ಮರೀಚಿಕೆ. ಅವರ ಜೊತೆ ಕೆಲಸ ಮಾಡುವಂತಹ ಸಹ ಶಿಕ್ಷಕರಿಗೆ ಎಲ್ಲಾ ರೀತಿಯ ಆರ್ಥಿಕ ಸೌಲಭ್ಯ ದೊರೆಯುತ್ತಿವೆ. ಮುಖ್ಯೋಪಾಧ್ಯಾಯರು, ಬಡ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಆರ್ಥಿಕ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. 

ಗ್ರಾಮೀಣ ಕೃಪಾಂಕ ಶಿಕ್ಷಕರಲ್ಲಿ ಕೆಲವರು ಕೆಲಸ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರ ಪುನರ್‌ ನೇಮಕಾತಿ ಬಾಕಿ ಇದೆ. ಅವರ ಸಮಸ್ಯೆ ಬಗೆಹರಿಸುವುದು, ಮರಣಶಾಸನದಂತಿರುವ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ಪುನಾಃ ಹಳೆಯ ಪಿಂಚಣಿ ಯೋಜನೆ ಮುಂದುವರೆಸುವ ನಿಟ್ಟಿನಲ್ಲಿ ಸರ್ಕಾರ ರಚಿಸಿರುವ ಸಮಿತಿಯ ವರದಿಯನ್ನು ಆದಷ್ಟು ಬೇಗ ಪಡೆದು, ಹಳೆಯ ಪಿಂಚಣಿ ಯೋಜನೆಯನ್ನೇ ಮುಂದುವರೆಸುವುದು, ಶಿಕ್ಷಕರನ್ನ ಬಿಎಲ್‌ಒ ಹಾಗೂ ಇನ್ನಿತರೆ ಶಿಕ್ಷಣೇತರ ಕಾರ್ಯಗಳಿಂದ ಮುಕ್ತಗೊಳಿಸುವ ಮುಖೇನ ಬೋಧನಾ ಕಾರ್ಯದಲ್ಲಿ ಹೆಚ್ಚಾಗಿ
ತೊಡಗಿಸಿಕೊಳ್ಳಲು ಅನುಕೂಲ ಮಾಡಿಕೊಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಸಿದ್ದೇಶಿ, ಎಚ್‌. ಚಂದ್ರಪ್ಪ, ಕೆ.ಶಿವಮೂರ್ತಿ, ಖೈರುನ್ನಿಸಾ, ಎಸ್‌. ಓಂಕಾರಪ್ಪ, ಪ್ರಕಾಶ್‌ ಮಡಿವಾಳ್‌, ದೇವೇಂದ್ರಪ್ಪ, ಶಾಮಣ್ಣ. ಗಂಗಾಧರನಾಯ್ಕ, ಆರ್‌.ಜಿ. ಅಜ್ಜಯ್ಯ, ಕೆ.ಇ. ವೇದಮೂರ್ತಿ, ಸೈಯದ್‌ ನಜೀರ್‌ ಅಹಮ್ಮದ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.