ದಾವಣಗೆರೆ: ವರ್ಷದಿಂದ ಸಂಬಳ ಸಿಕ್ಕಿಲ್ಲ ಎಂದು ಬೇಸತ್ತು ಸಹಕಾರಿ ಸಂಘದ ಕಾರ್ಯದರ್ಶಿ ಆತ್ಮಹತ್ಯೆ
Team Udayavani, Jun 13, 2021, 2:54 PM IST
ದಾವಣಗೆರೆ: ತಾಲೂಕಿನ ಶ್ಯಾಗಲೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಿ.ಎನ್. ಚಂದ್ರಪ್ಪ ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಕಳೆದ ಒಂದು ವರ್ಷದಿಂದ ಅವರಿಗೆ ಬರಬೇಕಾದ ಸಂಬಳ ಕೊಟ್ಟಿರಲಿಲ್ಲ. ಸಹಕಾರ ಸಂಘಗಳ ಕಚೇರಿ ಸಿಬ್ಬಂದಿಯೊಬ್ಬರು ಸಂಬಳ ಮಂಜೂರು ಮಾಡಲು ಒಂದು ಲಕ್ಷ ರೂಪಾಯಿ ಲಂಚ ಕೇಳಿದ್ದರು. ಹೇಗೋ ಹಣ ಹೊಂದಿಸಿ 20 ಸಾವಿರ ಕೊಟ್ಟರೂ ಸಂಬಳ ಕೊಡದೆ ಹಣ ದುರ್ಬಳಕೆ ಆರೋಪದ ಮೇಲೆ ಕೆಲವರ ಚಿತಾವಣೆಯಿಂದ ನನ್ನನ್ನು ಅಮಾನತ್ತು ಮಾಡಲಾಗಿದೆ. ಸಂಬಳವಿಲ್ಲದೆ ಸಂಸಾರ ನೆಡೆಸುವುದು ಕಷ್ಟವಾಗಿದ್ದು ಬೇರೆ ದಾರಿ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಾವಿಗೂ ಮುನ್ನ ಅವರು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಅಪ್ಪನ ಕನಸು ನನಸು ಮಾಡಿದ ರಕ್ಷಕ: ಚಂದನವನಕ್ಕೆ ಕಾಲಿಟ್ಟ ದಿ.ಬುಲೆಟ್ ಪ್ರಕಾಶ್ ಪುತ್ರ
ನಾನು ಸೊಸೈಟಿಯಲ್ಲಿ ಯಾವುದೇ ಹಣ ದುರುಪಯೋಗ ಮಾಡಿಲ್ಲ. ತಾನು ನಿರಪರಾಧಿ ಎಂದು ಪತ್ರದಲ್ಲಿ ಬರೆದು ಸಹಿ ಮಾಡಿದ್ದಾರೆ. ಹದಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ