ಸಿದ್ಧಗಂಗಾ ಶ್ರೀಗಳ ತತ್ವಾದರ್ಶ ಪಾಲನೆ ಇಂದಿನ ಅಗತ್ಯ

Team Udayavani, Jan 25, 2019, 6:23 AM IST

dvg-8.jpg

ಹೊನ್ನಾಳಿ: ಸಿದ್ಧಗಂಗಾ ಶ್ರೀಗಳ ತತ್ವಾದರ್ಶಗಳನ್ನು ಪಾಲಿಸುವುದು ಇಂದಿನ ಅಗತ್ಯವಾಗಿದೆ ಎಂದು ಡಾ| ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಹಿರೇಕಲ್ಮಠದಲ್ಲಿ ಗುರುವಾರ ಸಿದ್ಧಗಂಗಾ ಮಠದ ಡಾ| ಶಿವಕುಮಾರ ಸ್ವಾಮಿಗಳಿಗೆ ಭಕ್ತಿಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.

ನನಗಾಗಿ ನಾನು ಬದುಕಬಾರದು, ಅನ್ಯರಿಗಾಗಿ ಬದುಕಬೇಕು ಎಂದು ಸಾರಿ ಹೇಳಿದ ಸಿದ್ಧಗಂಗಾ ಶ್ರೀಗಳು ಅದ್ಭುತ ಸಾಧನೆ ಮಾಡಿ ಮೇರು ಪರ್ವತದಂತೆ ಬೆಳೆದರು. ಸಿದ್ಧಗಂಗಾ ಶ್ರೀಗಳು ಎಂದೂ ಪ್ರಚಾರದ ಗೀಳಿಗೆ ಹೋಗದೆ ಕಾಯಕಕ್ಕೆ ಅಂಟಿಕೊಂಡವರು. ಹೆಚ್ಚು ಮಾತನಾಡದೆ ಸದಾ ಕ್ರಿಯಾಶೀಲರಾಗಿ ಮಾತು ಸಾಧನೆಯಾಗಬಾರದು ಸಾಧನೆ ಮಾತಾಗಬೇಕು ಎನ್ನುವಂತೆ ಬಾಳಿದ ಮಹಾನ್‌ ಸಂತ ಎಂದು ಬಣ್ಣಿಸಿದರು.

ಮಕ್ಕಳಲ್ಲಿ ದೇವರನ್ನು ಕಾಣುತ್ತೇವೆ. ಅದರಂತೆ ಮಕ್ಕಳನ್ನು ಪ್ರೀತಿಸಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ತಮ್ಮನ್ನು ತೊಡಗಿಸಿಕೊಂಡು ನಡೆದಾಡುವ ದೇವರೆನಿಸಿಕೊಂಡವರು ಎಂದು ನುಡಿದರು.

ಸಿದ್ಧಗಂಗಾ ಮಠಕ್ಕೆ ಬಂದಂತಹ ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿ ತೆರಳುತ್ತಿದ್ದರು. ಇದಕ್ಕೆ ಕಾರಣೀಕರ್ತರು ಶ್ರೀಗಳು ಎಂದ ಅವರು, ಭಕ್ತರಿಂದ ಮಠ. ಮಠದಿಂದ ಭಕ್ತರಲ್ಲ ಎನ್ನುವ ತತ್ವ ಹೊಂದಿ ನಾಡಿಗೆ ಬೆಳಕಾದ ಸ್ವಾಮೀಜಿ ಡಾ| ಸಿದ್ಧಗಂಗಾ ಶ್ರೀಗಳು ಎಂದು ಹೇಳಿದರು.

ಚನ್ನಪ್ಪಸ್ವಾಮಿ ವಿದ್ಯಾಪೀಠದ ಕಾರ್ಯದರ್ಶಿ ಚನ್ನಯ್ಯ ಬೆನ್ನೂರುಮಠ ಮಾತನಾಡಿ, ಅನ್ನ, ಅಕ್ಷರ ಮತ್ತು ಆಶ್ರಯ ಕೊಟ್ಟ ನಾಡಿನ ನಡೆದಾಡುವ ದೇವರು ಡಾ| ಸಿದ್ಧಗಂಗಾ ಶ್ರೀಗಳು ತ್ರಿವಿಧ ದಾಸೋಹಿಗಳಾದರು ಎಂದು ಹೇಳಿದರು.

ಚನ್ನಪ್ಪಸ್ವಾಮಿ ವಿದ್ಯಾಪೀಠದ ಆಡಳಿತಾಧಿಕಾರಿ ಡಾ| ಎಚ್.ಜಯಪ್ಪ, ನಿರ್ದೇಶಕರಾದ ಎಚ್.ಆರ್‌. ಬಸವರಾಜಪ್ಪ, ಚನ್ನೇಶಯ್ಯ, ನಿವೃತ್ತ ಮುಖ್ಯ ಶಿಕ್ಷಕರಾದ ಚನ್ನಬಸಯ್ಯ, ವಿಜಯಾನಂದಸ್ವಾಮಿ ಮಾತನಾಡಿದರು. ವಿದ್ಯಾಪೀಠದ ನಿರ್ದೇಶಕರಾದ ಕೋರಿ ಮಲ್ಲಿಕಾರ್ಜುನಪ್ಪ, ಕುಂಬಾರ ವೀರಭದ್ರಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.