ಸೊಳ್ಳೆ ನಿವಾರಣೆಗೆ ಬೇವಿನ ಎಲೆ ಹೊಗೆ ಹಾಕಿ

Team Udayavani, Jul 28, 2018, 11:14 AM IST

dvg-4.jpg

ಹರಿಹರ: ಒಣಗಿದ ಬೇವಿನ ಎಲೆಗಳ ಹೊಗೆ ಹಾಕುವ ಮೂಲಕ ಸೊಳ್ಳೆಗಳನ್ನು ನಿವಾರಿಸಬಹುದು ಎಂದು ಭಾನುವಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅಬ್ದುಲ್‌ ಖಾದರ್‌ ಹೇಳಿದರು.

ತಾಲೂಕಿನ ಭಾನುವಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಜಿಪಂ, ಆರೋಗ್ಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಮ್ಮಿಕೊಂಡಿದ್ದ ಡೆಂಘೀ ವಿರೋಧಿ  ದಿನಾಚರಣೆಯಲ್ಲಿ ಮಾತನಾಡಿದ ಅವರು, ನಮ್ಮ ಮನೆ ಅಂಗಳ, ಕೊಟ್ಟಿಗೆ ಮುಂತಾದೆಡೆ ಸೊಳ್ಳೆಗಳ ಕಾಟ ತಪ್ಪಿಸಲು ಬೇವಿನ ಸೊಪ್ಪಿನ ಹೊಗೆ ಹಾಕುವುದು ಸುಲಭದ ಹಾಗೂ ಖರ್ಚಿಲ್ಲದ ವಿಧಾನವಾಗಿದೆ ಎಂದರು.

ಡೆಂಘೀ, ಮಲೇರಿಯಾ ಸೇರಿದಂತೆ ವಿವಿಧ ರೀತಿಯ ಜ್ವರಗಳು ಸೊಳ್ಳೆ ಕಡಿತದಿಂದ ಬರುತ್ತವೆ. ಆದ್ದರಿಂದ ನಮ್ಮ ಸುತ್ತಮುತ್ತಲ ಪರಿಸರದಲ್ಲಿ ಸೊಳ್ಳೆಗಳು ಇರದಂತೆ ನೋಡಿಕೊಳ್ಳಬೇಕು. ನೀರು ಸಂಗ್ರಹಿಸುವ ಪಾತ್ರೆ, ಡ್ರಮ್‌, ಕೊಳ, ಸಿಂಟೆಕ್ಸ್‌, ಕೊಡಪಾನಗಳನ್ನು ಸದಾ ಬಾಯಿ ಮುಚ್ಚಿಡಬೇಕು. ಅಲ್ಲದೆ ಕನಿಷ್ಟ 15 ದಿನಗಳಿಗೊಮ್ಮೆಯಾದರೂ ಸೋಪ್‌, ಬ್ರಶ್‌ನಿಂದ
ತೊಳೆಯಬೇಕು. ಹೂವಿನ ಕುಂಡದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಈ ವಿಧಾನಗಳಿಂದ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಬಹುದು. ಜ್ವರ ಬಂದರೆ ಕೂಡಲೆ ವೈದ್ಯರಲ್ಲಿ ತಪಾಸಣೆ, ಅಗತ್ಯವಿದ್ದಲ್ಲಿ ರಕ್ತ ಪರೀಕ್ಷೆ ಮಾಡಿಸಬೇಕು. ನಿರ್ಲಕ್ಷé ಮಾಡಬಾರದು ಎಂದರು.

ಆರೋಗ್ಯ ಸಹಾಯಕ ವಿಜಯ ವಿಠ್ಠಲ ಮಾತನಾಡಿ, ಸೊಳ್ಳೆ ಕಚ್ಚದಂತೆ ಮೈತುಂಬ ಬಟ್ಟೆ ಹಾಕಿಕೊಳ್ಳಬೇಕು. ಮಲಗುವಾಗ ಸೊಳ್ಳೆಪರದೆ ಬಳಸಬೇಕು ಎಂದರು.

ಮುಖ್ಯ ಶಿಕ್ಷಕ ಕರಿಯಪ್ಪ ಮಾತನಾಡಿ, ವೈದ್ಯರ ಸಲಹೆಗಳನ್ನು ಮಕ್ಕಳು ಪೋಷಕರಿಗೂ ತಿಳಿಸಿ ಮನೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವೀಂದ್ರನಾಥ್‌, ಗ್ರಾಪಂ ಉಪಾಧ್ಯಕ್ಷೆ ರಿಯಾಜ್‌ ಉನ್ನಿಸಾ, ಸದಸ್ಯ ಹಳದಪ್ಪ, ಪಿಡಿಒ ರೇಣುಕಾಬಾಯಿ, ಸಿಸ್ಟರ್‌ ಕೋಕಿಲಾವಾಣಿ, ಭಾರತ್‌ ನಿರ್ಮಾಣ್‌ ಸಂಸ್ಥೆಯ ಎನ್‌.ಶಿವಕುಮಾರ್‌ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.