ಬೇಡಿಕೆ ಶೀಘ್ರ ಈಡೇರಿಕೆಗೆ ಮುಷ್ಕರ


Team Udayavani, May 31, 2018, 4:46 PM IST

dvg-1.jpg

ದಾವಣಗೆರೆ: ಭಾರತೀಯ ಬ್ಯಾಂಕುಗಳ ಸಂಘದ ಶೇ. 2 ವೇತನ ಪರಿಷ್ಕರಣೆ ಪ್ರಸ್ತಾವನೆ ವಿರೋಧಿಸಿ, ಕೇಂದ್ರ ಸರ್ಕಾರದ ಮಧ್ಯಪ್ರವೇಶ ಹಾಗೂ ಇತರೆ ಬೇಡಿಕೆಗಳ ತ್ವರಿತ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ನೌಕರರ ಸಂಘಗಳ ಸಂಯುಕ್ತ ವೇದಿಕೆ ನೇತೃತ್ವದಲ್ಲಿ ವಿವಿಧ ಬ್ಯಾಂಕ್‌ ಉದ್ಯೋಗಿಗಳು ಬುಧವಾರ ಮಂಡಿಪೇಟೆಯಲ್ಲಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಪ್ರಾದೇಶಿಕ ಕಚೇರಿ ಎದುರು ಪ್ರತಿಭಟಿಸಿದ್ದಾರೆ.

ಎರಡು ದಿನಗಳ ಬ್ಯಾಂಕ್‌ ಮುಷ್ಕರದ ಪ್ರಥಮ ದಿನ 9 ಸಂಘಟನೆಗಳ ಸದಸ್ಯರು ಕೇಂದ್ರ ಸರ್ಕಾರ ಮತ್ತು ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಷನ್‌ನ ನೌಕರ ವಿರೋಧಿ ಧೋರಣೆ ಖಂಡಿಸಿದರು.

ವಾಸ್ತವವಾಗಿ 11ನೇ ದ್ವಿಪಕ್ಷೀಯ ವೇತನ ಪರಿಷ್ಕರಣೆ 2017ರ ನ. 1 ರಿಂದಲೇ ಜಾರಿಗೆ ಬರಬೇಕಿತ್ತು. ಒಂದು ವರ್ಷದ ಮೊದಲೇ ವೇತನ ಪರಿಷ್ಕರಣೆಯ ಬೇಡಿಕೆ ಇಟ್ಟಿದ್ದರೂ 2017ರ ಮೇ ತಿಂಗಳಿನಿಂದ 15 ಸುತ್ತಿನ ಮಾತುಕತೆ ನಡೆದಿದ್ದರೂ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಫಲ ಪ್ರದವಾಗುವಂತಹ ನಿಟ್ಟಿನಲ್ಲಿ ಪ್ರಸ್ತಾವ ಬಂದಿಲ್ಲ ಎಂದು ಪ್ರತಿಭಟನಾ ನಿರತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವೇತನ ಪರಿಷ್ಕರಣೆಗೆ ಸಂಬಂಧವಾಗಿ ಈಚೆಗೆ ನಡೆದ ಸಭೆಯಲ್ಲಿ ಶೇ. 2ರಷ್ಟು ವೇತನ ಪರಿಷ್ಕರಣೆ ಮಾಡುವ ಹಾಗೂ ವೇತನ ಶ್ರೇಣಿ-3ರ ವರೆಗೆ ಬರುವ ಅಧಿಕಾರಿಗಳಿಗೆ ಮಾತ್ರವೇ ವೇತನ ಪರಿಷ್ಕರಣೆ ಮಾಡುವ ಪ್ರಸ್ತಾವನೆ ಮುಂದಿಡಲಾಗಿತ್ತು. ಆದರೆ, ಈ ಪ್ರಸ್ತಾವನೆಗೆ ನೌಕರ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ ಎಂದು ತಿಳಿಸಿದರು.

ವೇತನ ಪರಿಷ್ಕರಣೆ ಮಾಡದೇ ಇರುವುದಕ್ಕೆ ಕಾರಣ ಬ್ಯಾಂಕುಗಳು ಲಾಭದಾಯಕವಾಗಿ ನಿರ್ವಹಿಸುತ್ತಿಲ್ಲ ಎಂಬುದು ಸರ್ಕಾರದ ನಿಲುವು. ಆದರೆ, ಪ್ರತಿ ವರ್ಷ ಬ್ಯಾಂಕುಗಳ ಒಟ್ಟಾರೆ ಲಾಭಾಂಶ ಹೆಚ್ಚುತ್ತಲೇ ಇದೆ. ಕಳೆದ 10 ವರ್ಷಗಳಲ್ಲಿ ಬ್ಯಾಂಕುಗಳ ಲಾಭದ ಶೇ. 70 ರಷ್ಟನ್ನು ವಸೂಲಾಗದ ಸಾಲಗಳಿಗೆ ಮೀಸಲಿಡಲಾಗಿದೆ. 

ಇದರಿಂದಲೇ ನಷ್ಟ ಕಂಡುಬರುತ್ತಿದೆಯೇ ಹೊರತು ಬ್ಯಾಂಕುಗಳ ಕಳಪೆ ನಿರ್ವಹಣೆಯಿಂದ ಅಲ್ಲ. ನಿವ್ವಳ ಲಾಭದ ಗಣನೀಯವಾದ ಕುಸಿತದ ಹೊಣೆಗಾರಿಕೆ ಉದ್ಯೋಗಿಗಳ ಮೇಲೆ ಹೇರುವುದು ಮತ್ತ ವೇತನ ಪರಿಷ್ಕರಣೆ ಮಾಡದೇ ಇರುವುದಕ್ಕೆ ಆ ಕಾರಣ ಹೇಳುವುದು ಸರಿಯಲ್ಲ. ಕೇಂದ್ರ ಸರ್ಕಾರವೇ ಮಧ್ಯಪ್ರವೇಶಿಸಿ ಸಂಬಂಧಿತರಿಗೆ ಸೂಕ್ತ ನಿರ್ದೇಶನ ನೀಡಿ ಬ್ಯಾಂಕ್‌ ಉದ್ಯೋಗಿಗಳಿಗೆ ಗೌರವಯುತವಾದ ವೇತನ ಹೆಚ್ಚಳವಾಗುವ ಹಾಗೇ ನೋಡಿಕೊಳ್ಳಬೇಕಾಗಿದೆ. 

ಇಲ್ಲವಾದರೆ ಬ್ಯಾಂಕ್‌ ನೌಕರರ ಸಂಘಟನೆಗಳು ಅನಿವಾರ್ಯವಾಗಿ ಅನಿರ್ದಿಷ್ಟವಾಗಿ ಮುಷ್ಕರದಂತಹ ತೀವ್ರ ಹೋರಾಟವನ್ನು ನಡೆಸುವ ಪರಿಸ್ಥಿತಿ ತಲೆದೋರಬಹುದು ಎಂದು ಎಚ್ಚರಿಸಿದರು. ಮುಖಂಡರಾದ ಕೆ. ರಾಘವೇಂದ್ರ ನಾಯರಿ, ಕೆ.ಎನ್‌. ಗಿರಿರಾಜ್‌, ಹರೀಶ್‌ ಪೂಜಾರಿ, ಜಿ. ರಂಗಸ್ವಾಮಿ, ಅಜಿತ್‌ಕುಮಾರ್‌ ನ್ಯಾಮತಿ, ಎಸ್‌. ಪ್ರಶಾಂತ್‌, ಕೆ. ವಿಶ್ವನಾಥ್‌ ಬಿಲ್ಲವ, ತಿಪ್ಪೇಸ್ವಾಮಿ, ವಾಗೀಶ್‌, ಪುರುಷೋತ್ತಮ್‌, ಜಮೀರ್‌ ಅಹಮದ್‌, ದತ್ತಾತ್ರೇಯ ಮೇಲಗಿರಿ, ಶಿವಕುಮಾರ್‌, ನಾಗವೇಣಿ ನರೇಂದ್ರಕುಮಾರ್‌, ಸುಜಯಾ ನಾಯಕ್‌, ಜಯಲಕ್ಷ್ಮಿ, ಕವಿತಾಬಾಯಿ, ಭಾರತಿ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.