ವೇಕಾನಂದರ ಕನಸು ನನಸಾಗಿಸಲು ಶ್ರಮಿಸಿ

Team Udayavani, Jan 14, 2021, 3:36 PM IST

vivekanda

ದಾವಣಗೆರೆ: ಸ್ವದೇಶಿ ಜಾಗೃತಿ ಮತ್ತು ಸ್ವಾವಲಂಬನೆಯ ಬದುಕನ್ನು ರೂಢಿಸಿಕೊಂಡು ನಮ್ಮ ಸಾಮರ್ಥ್ಯವನ್ನು ಅರಿತು ಮುನ್ನಡೆದರೆ ಭಾರತವನ್ನು ವಿಶ್ವದ ಮಹಾನ್‌ ರಾಷ್ಟ್ರವನ್ನಾಗಿ ಪರಿವರ್ತಿಸಲು ಸಾಧ್ಯ ಎಂದು ಆದರ್ಶ ಗೋಖಲೆ ಹೇಳಿದರು.

ದಾವಣಗೆರೆ ವಿಶ್ವವಿದ್ಯಾಲಯ ಮತ್ತು ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ  158ನೇ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ “ಯುವ ಧ್ವನಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತಕ್ಕೆ ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳನ್ನು ತಡೆಯುವ, ವಿರುದ್ಧ ಹೋರಾಡುವ ಅನಿವಾರ್ಯತೆ ಇದೆ. ದೇಶದ ಪ್ರತಿಯೊಬ್ಬರೂ ಸ್ವದೇಶಿ ವಸ್ತುಗಳನ್ನೇ ಬಳಸಿ ಸ್ವಾಭಿಮಾನದಿಂದ ಸ್ವಾವಲಂಬನೆಯ ಬದುಕು ಬಾಳಿದರೆ ಸ್ವಾಮಿ ವಿವೇಕಾನಂದರು ಕಂಡ ಕನಸಿನ ಭಾರತವನ್ನು ನಿರ್ಮಿಸಬಹುದು ಎಂದರು.

ದೇಶದಲ್ಲಿರುವ ಪ್ರಸ್ತುತ ಶಿಕ್ಷಣವು ಮಕ್ಕಳಿಗೆ ಪ್ರಮಾಣಪತ್ರ ನೀಡುವ ಕಲಿಕೆಯಾಗಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಮಕ್ಕಳಿಗೆ ಅನುಭವ ಆಧಾರಿತ ಬದುಕನ್ನು ಕಟ್ಟಿಕೊಡುವ, ಸಾಮಾಜಿಕ ಜವಾಬ್ದಾರಿ, ನೈತಿಕ ಮೌಲ್ಯಗಳನ್ನು ಕಲಿಸಿ, ಭವಿಷ್ಯವನ್ನು ರೂಪಿಸಿಕೊಳ್ಳುವ ಪ್ರಜ್ಞಾವಂತ, ಸಮಾಜಮುಖೀ ವ್ಯಕ್ತಿಗಳನ್ನು ನಿರ್ಮಿಸಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಪರಿಕಲ್ಪನೆಯ ಸಮಾಜದ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ:ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು: ಡಿ ಕೆ ಶಿವಕುಮಾರ್ ಗುಡುಗು

ಸ್ವಾಮಿ ವಿವೇಕಾನಂದರ ಸಲಹೆಯಂತೆ ಪ್ರತಿಯೊಬ್ಬ ವ್ಯಕ್ತಿಯ ಗುರಿ ಮತ್ತು ಯೋಚನೆ ಒಂದಾಗಿದ್ದಾಗ ಮಾತ್ರ ಯಶಸ್ಸು ಸಾ  ಧಿಸಲು ಸಾಧ್ಯ. ಆದರೆ ಭಾರತೀಯರಲ್ಲಿ ಯೋಚನೆ ಮತ್ತು ಗುರಿ ಭಿನ್ನವಾಗಿದ್ದರಿಂದ ಶತಮಾನಗಳ ಕಾಲ ಪರಕೀಯರು ದೇಶವನ್ನು ಆಳುವಂತಾಯಿತು. ಅವರ ದಾಸ್ಯದಿಂದ ದೇಶದ ಸಂಪತ್ತು, ಸಂಪನ್ಮೂಲಗಳು ನಷ್ಟವಾಗಿ ಈಗಲೂ ಅದರ ಪರಿಣಾಮವನ್ನು ಎದುರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ದೇಶೀಯತೆಯ ಭಾವನೆಯೊಂದಿಗೆ ಉನ್ನತ ಯೋಚನೆಗಳೊಂದಿಗೆ ನಿರ್ದಿಷ್ಟ ಗುರಿಯತ್ತ ಚಿಂತನೆ ಮಾಡಿ, ಅನುಷ್ಠಾನಕ್ಕೆ ತರಲು ಎಲ್ಲರೂ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಮಾತನಾಡಿ, ವೈಯಕ್ತಿಕ ಹಿತಾಸಕ್ತಿ ಬಿಟ್ಟು ಜನಪರ ಕಾಳಜಿಯಿಂದ ಸಮಾಜದ ಹಿತಕ್ಕಾಗಿ ದುಡಿದ ವ್ಯಕ್ತಿ ಸಾಧನೆಯ ಎತ್ತರಕ್ಕೆ ಏರುವರು. ಸಮಾಜ ಗುರುತಿಸಿ ಗೌರವಿಸುವುದು. ಓದು, ಅಧ್ಯಯನದಲ್ಲಿಯೂ ಗುರಿ, ಉದ್ದೇಶಗಳನ್ನು ಒಂದಾಗಿ ಮಾಡಿಕೊಂಡರೆ ಉತ್ತಮ ಸಾಧನೆ ಮಾಡಬಹುದು ಎಂದು ತಿಳಿಸಿದರು. ಕುಲಸಚಿವ ಪ್ರೊ| ಬಸವರಾಜ ಬಣಕಾರ, ಪ್ರತಿಯೊಬ್ಬರಲ್ಲಿಯೂ ವಿಶಿಷ್ಟ ವ್ಯಕ್ತಿತ್ವ ಇರುತ್ತದೆ. ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಉತ್ತಮ ಕೆಲಸಗಳಿಗೆ ಬಳಸಿಕೊಂಡಾಗ ಯಶಸ್ಸಿನ ಹಾದಿ ಸುಲಭವಾಗುತ್ತದೆ. ಅದು ವಿವೇಕಾನಂದರ ಆದರ್ಶದ ಭಾರತ ಮರುಸೃಷ್ಟಿಗೆ ನೆರವಾಗುತ್ತದೆ ಎಂದು ನುಡಿದರು.

ಪರೀಕ್ಷಾಂಗ ಕುಲಸಚಿವೆ ಪ್ರೊ| ಎಚ್‌.ಎಸ್‌. ಅನಿತಾ, ಹಣಕಾಸು ಅ ಧಿಕಾರಿ ಪ್ರೊ| ಗೋಪಾಲ ಎಂ. ಅಡವಿರಾವ್‌, ಹಿಂದುಳಿದ ವರ್ಗಗಳ ಸಮಿತಿ ಸಂಯೋಜನಾ ಧಿಕಾರಿ ಕುಮಾರ ಸಿದ್ದಮಲ್ಲಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.