ಇನ್ನೂ ಏರಲಿದೆ ಸೂರ್ಯನ ತಾಪ

Team Udayavani, Mar 21, 2019, 5:59 AM IST

dvg-1.jpg

ದಾವಣಗೆರೆ: ಅಬ್ಟಾ ಇದೇನಪ್ಪಾ ಇಂತಹ ಬಿಸಿಲು…! ಎಂದು ಪರಿತಪಿಸುವ ವಾತವಾರಣ ಈಗಷ್ಟೇ ಆರಂಭವಾಗಿದೆ. ಇನ್ನೂ ಒಂದು ತಿಂಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ. ಅಲ್ಲದೆ, ಸೂರ್ಯನ ಪ್ರಖರತೆ ಕಳೆದ ವರ್ಷಕ್ಕಿಂತ ಅಧಿಕವಾಗಲಿದೆ!.

2018ಕ್ಕೆ ಹೋಲಿಸಿದರೆ ಈ ಬಾರಿ ಬೇಸಿಗೆಯಲ್ಲಿ ಸೂರ್ಯನ ತಾಪ ಇನ್ನಷ್ಟು ಏರುವುದು ಖಚಿತ ಎಂಬುದಾಗಿ ಹವಾಮಾನ ಅಂದಾಜು ಮಾಡುವ ವಿವಿಧ ಸಂಸ್ಥೆಗಳು ಅಭಿಪ್ರಾಯಪಟ್ಟಿವೆ. ಅಂದಾಜಿನ ಪ್ರಕಾರ ಮಾರ್ಚ್‌-ಏಪ್ರಿಲ್‌ ತಿಂಗಳಲ್ಲಿ ಜಿಲ್ಲೆಯ ಗರಿಷ್ಠ ಉಷ್ಣಾಂಶ ಸರಾಸರಿ 36 ರಿಂದ 39 ಡಿಗ್ರಿ ಸೆಲ್ಸಿಯಸ್‌ನ ಆಸುಪಾಸಿನಲ್ಲಿ ಇರಲಿದೆ. ಕನಿಷ್ಠ ಉಷ್ಣಾಂಶ 18ರಿಂದ 24 ಡಿಗ್ರಿ ಸೆಲ್ಸಿಯಸ್‌ನವರೆಗೆ
ಇರಲಿದೆ. 

ಮಾರ್ಚ್‌ ಆರಂಭದಲ್ಲಿ 36 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದ ಉಷ್ಣಾಂಶ ಮಾ. 18ರ ನಂತರ 37 ಡಿಗ್ರಿ ಸೆಲ್ಸಿಯಸ್‌ಗೆ ಏರಿದೆ. ಇದೇ ಉಷ್ಣಾಂಶ 23ರ ವರೆಗೂ  ಮುಂದುವರಿಯಲಿದೆ. ಮಾ.23ರ ನಂತರ ಸೂರ್ಯ ತನ್ನ ಪ್ರಖರತೆಯನ್ನು ಮತ್ತಷ್ಟು ಹೆಚ್ಚಿಸಲಿದ್ದಾನೆ. 26ರ ನಂತರ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ. ಮಾ. 29ರಂದು 39 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಏರಲಿದೆ. ಮಾರ್ಚ್‌ ಕೊನೆಯಲ್ಲಿ ಸೂರ್ಯ ತನ್ನ ಪ್ರತಾಪ ಪ್ರದರ್ಶಿಸಲಿದ್ದಾನೆ.
 
ಮಾರ್ಚ್‌ 28ರ ನಂತರ ಮೋಡ ಕವಿದ ವಾತಾವರಣವಿದ್ದರೂ ಬಿಸಿಲು ಮಾತ್ರ ಎಂದಿನಂತೆ ಇರಲಿದೆ. ಏಪ್ರಿಲ್‌ನಲ್ಲೂ
ಬಿಸಿಲಿನ ತಾಪ ಮತ್ತಷ್ಟು ಏರಲಿದೆ. ಸದ್ಯ 35 ಡಿಗ್ರಿ ಸೆಲ್ಸಿಯಸ್‌ನಿಂದ 37ರ ವರೆಗೆ ತಾಪಮಾನ ಇದೆ. ತಾಪಮಾನದಲ್ಲಿ ಇಳಿಕೆಗಿಂತ ಏರಿಕೆಯೇ ಕಾಣುತ್ತಿದೆ. ಕಳೆದ ವರ್ಷ ಇದೇ ವೇಳೆ ತಾಪಮಾನ 35-36 ಡಿಗ್ರಿ ಸೆಲ್ಸಿಯಸ್‌ನಷ್ಟು ಇತ್ತು. ಈ ಬಾರಿ ಸರಾಸರಿ 2 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಏರಿಕೆಯಾಗಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ನಾಗಕರಿಕರು ಹೆಚ್ಚು ತಾಪಮಾನ ಅನುಭವಿಸಬೇಕಿದೆ. 

ತಾಪಮಾನ ಹೆಚ್ಚಳಕ್ಕೆ ಕೇವಲ ಸೂರ್ಯ ಮಾತ್ರ ಕಾರಣನಲ್ಲ. ನಗರ ಪ್ರದೇಶದಲ್ಲಿನ ಮರಗಳ ಕಡಿತ, ವಾಹನಗಳ ಹೆಚ್ಚಳ ಸಹ ಕಾರಣವಾಗಿದೆ. ಸೂರ್ಯನ ಕಿರಣಗಳು ಮರ, ಗಿಡಗಳ ಮೇಲೆ ಬೀಳುತ್ತಿದ್ದುದರಿಂದ ತಾಪಮಾನ ಹೆಚ್ಚಾಗುತ್ತಿರಲಿಲ್ಲ. ಆದರೆ, ಮರಗಳ ನಾಶ ಮತ್ತು ಕಟ್ಟಡಗಳ ಹೆಚ್ಚಳದಿಂದಾಗಿ ತಾಪಮಾನ ಸೂರ್ಯನ ಶಾಖಕ್ಕಿಂತ ಹೆಚ್ಚಾಗುತ್ತದೆ. 

ಬಿಸಿಯಿಂದಾಗಿ ಜನರು ಇಂದು ಹೊರಬೀಳಲು ಹಿಂದೇಟು ಹಾಕುತ್ತಿದ್ದಾರೆ. ಬೆಳಿಗ್ಗೆ 9 ಗಂಟೆಯ ವೇಳೆಗಾಗಲೇ ಬಿಸಿಲು ಮೈ ಸುಡುವಷ್ಟು ಮಟ್ಟಿಗಿದೆ. ಸೂರ್ಯ ನೆತ್ತಿಯ ಮೇಲೆ ಬರುವ ವೇಳೆಗಂತೂ ಬೀದಿಗಳಲ್ಲಿ ಜನರ ಓಡಾಟವೇ ಕಡಿಮೆಯಾಗುತ್ತಿದೆ. ಬಿಸಿಲ ಬೇಗೆ ತಣಿಸಿಕೊಳ್ಳಲು ಮಂದಿ ಹಣ್ಣಿನ ರಸ ಸೇರಿದಂತೆ ಇತರೆ ತಂಪು ಪಾನೀಯಗಳ ಮೊರೆಹೋಗುತ್ತಿದ್ದಾರೆ. 

ವಿಶೇಷ ವರದಿ

ಟಾಪ್ ನ್ಯೂಸ್

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.