ಕಾಳಸಂತೆ ಪಡಿತರ ಅಕ್ಕಿ ತಡೆಗೆ ಶಾಸಕರ ಸವಾಲು

ಸವಾಲು ಸ್ವೀಕರಿಸದೇ ಸಬೂಬು ಹೇಳಿದ ಅಧಿಕಾರಿ

Team Udayavani, May 7, 2022, 12:50 PM IST

illegal-rice

ದಾವಣಗೆರೆ: ಜಿಲ್ಲೆಯಲ್ಲಿ ಪಡಿತರ ಅಕ್ಕಿ ವ್ಯಾಪಕವಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಇದನ್ನು ನಿಯಂತ್ರಿಸಲು ನಿಮ್ಮಿಂದ (ಅಧಿಕಾರಿಗಳಿಂದ) ಸಾಧ್ಯವೇ ಇಲ್ಲ. ರೈಸ್‌ಮಿಲ್‌ಗ‌ಳಿಗೆ ಹೋದರೆ ಲೋಡ್‌ ಗಟ್ಟಲೆ ಪಡಿತರ ಅಕ್ಕಿ ಸಿಗುತ್ತದೆ. ಈಗಲೇ ತೋರಿಸುತ್ತೇನೆ ನನ್ನೊಂದಿಗೆ ಬರುತ್ತೀರಾ? ಹೀಗೆಂದು ಅಧಿಕಾರಿಗಳಿಗೆ ಸವಾಲು ಹಾಕಿದವರು ಜಗಳೂರು ಕ್ಷೇತ್ರದ ಶಾಸಕ ಎಸ್‌.ವಿ. ರಾಮಚಂದ್ರ.

ಶುಕ್ರವಾರ ಜಿಪಂ ಸಭಾಭವನದಲ್ಲಿ ನಡೆದ ಕೆಡಿಪಿ ನಾಲ್ಕನೇ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ರೀತಿ ಸವಾಲು ಹಾಕಿದರು. ಆದರೆ, ಆಹಾರ ಇಲಾಖೆ ಅಧಿಕಾರಿ ಸವಾಲು ಸ್ವೀಕರಿಸದೇ ತಮ್ಮ ಸಬೂಬು ಮುಂದುವರಿಸಿದರು.

ನ್ಯಾಯಬೆಲೆ ಅಂಗಡಿಗಳಿಗೆ ಹೋಗಬೇಕಾದ ಪಡಿತರ ಅಕ್ಕಿ ಲೋಡ್‌ ಗಟ್ಟಲೆ ರೈಸ್‌ ಮಿಲ್‌ಗ‌ಳಿಗೆ ನೇರವಾಗಿ ಹೋಗುತ್ತಿವೆ. ಇದನ್ನು ತಡೆಯುವುದನ್ನು ಬಿಟ್ಟು ಅಧಿಕಾರಿಗಳು, ಮನೆ ಮನೆಗೆ ಹೋಗಿ ಸಂಗ್ರಹಿಸಿದ 5-10ಕೆ.ಜಿ. ಅಕ್ಕಿ ಹಿಡಿದು, ಹೆಸರಿಗಾಗಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಹರಿಹರ ಶಾಸಕ ಎಸ್‌. ರಾಮಪ್ಪ ಸಹ ಧ್ವನಿಗೂಡಿಸಿ, ದೊಡ್ಡ ಪ್ರಮಾಣದ ಅಕ್ರಮ ಕೈಬಿಟ್ಟು ಅಧಿಕಾರಿಗಳು ಸಣ್ಣಪುಟ್ಟ ಪ್ರಕರಣ ದಾಖಲಿಸಿ, ಪತ್ರಿಕೆ ಮೂಲಕ ಪ್ರಚಾರ ಪಡೆಯುತ್ತಿದ್ದಾರೆ ಎಂದರು.

ಎಷ್ಟೇ ದೊಡ್ಡವರಿದ್ದರೂ ಕ್ರಮ ಕೈಗೊಳ್ಳಿ

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಮಾತನಾಡಿ, ಆಹಾರ ಇಲಾಖೆಯವರಿಗೆ ಅಕ್ಕಿ ನೋಡಿದಾಕ್ಷಣ ಅದು ಪಡಿತರ ಅಕ್ಕಿ ಹೌದೋ ಅಲ್ಲವೋ ಎಂಬುದು ತಿಳಿಯುವ ಅನುಭವ ಇರಬೇಕು. ಚೀಲ ಇದ್ದರೆ ಮಾತ್ರ ಅಕ್ಕಿ ಗುರುತಿಸುವುದಾದರೆ ಇದು ಅಕ್ರಮಕ್ಕೆ ಅಧಿಕಾರಿಗಳೇ ಇಂಬು ಕೊಟ್ಟಂತಾಗುತ್ತದೆ. ಅಧಿಕಾರಿಗಳು ಇಂಥ ಸಬೂಬುಗಳನ್ನು ನೀಡದೆ ಪಡಿತರ ಅಕ್ಕಿ ಅಕ್ರಮ ಕಡಿವಾಣ ಹಾಕಲು ಪೊಲೀಸರ ಸಹಕಾರದೊಂದಿಗೆ ಕಟ್ಟುನಿಟ್ಟಿನ ಕ್ರಮವಹಿಸಬೇಕು. ಎಷ್ಟೇ ದೊಡ್ಡವರಿದ್ದರೂ ಅವರ ಮೇಲೆ ಪ್ರಕರಣ ದಾಖಲಿಸಿ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಆದೇಶಿಸಿದರು.

ವ್ಯಾಪಾರಿಗಳ ರಾಗಿ ಖರೀದಿಸಬೇಡಿ

ರಾಗಿ ಖರೀದಿ ವಿಚಾರವಾಗಿ ಮಾತನಾಡಿದ ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರ, ಖರೀದಿ ಕೇಂದ್ರದ ಅಧಿಕಾರಿಯೇ ಕೆಲವು ವ್ಯಾಪಾರಿಗಳನ್ನು ಕರೆದುಕೊಂಡು ಬಂದು ರೈತರ ಹೆಸರಲ್ಲಿ ರಾಗಿ ಖರೀದಿಸುವ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಭೈರತಿ ಬಸವರಾಜ್‌, ಸಂಸದ ಜಿ.ಎಂ. ಸಿದ್ದೇಶ್ವರ, ರೈತರಿಗೆ ಅನುಕೂಲ ಕಲ್ಪಿಸುವ ಯೋಜನೆ ಮಧ್ಯವರ್ತಿಗಳ ಪಾಲಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ರೈತರಿಂದ ದೂರು ಬಂದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ನೀರಿನ ಸಮಸ್ಯೆ ಇಲ್ಲ

ಕುಡಿಯುವ ನೀರಿನ ಕುರಿತು ಮಾತನಾಡಿದ ಜಿಪಂ ಸಿಇಒ ಡಾ| ಎ.ಚನ್ನಪ್ಪ, ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿ, ಟ್ಯಾಂಕರ್‌ ಮೂಲಕ ನೀರು ಒದಗಿಸುವಷ್ಟು ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿಲ್ಲ. ಜಲಜೀವನ ಮಿಷನ್‌ ಯೋಜನೆ ಮೂಲಕ ಮನೆಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ಯೋಜನೆ ಮೊದಲ ಹಂತದಲ್ಲಿ 188 ಕಡೆಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು. ಶಾಸಕ ರಾಮಪ್ಪ, ಭಾನುವಳ್ಳಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲು ಕೋರಿದರು. ಜಿಪಂ ಸಿಇಒ ಕೂಡಲೇ ಸ್ಪಂದಿಸುವ ಭರವಸೆ ನೀಡಿದರು.

ದೂರು ಬಂದರೆ ಶಿಸ್ತುಕ್ರಮ ಎಚ್ಚರಿಕೆ

ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು ಎಲ್ಲರಿಗೂ ಎರಡು ಡೋಸ್‌ ಲಸಿಕೆ ಆಗಿರುವ ಬಗೆಗೆ ಖಾತ್ರಿ ಪಡಿಸಿಕೊಳ್ಳಬೇಕು. ಶೇ.100ರಷ್ಟು ಎಲ್ಲರಿಗೂ ಲಸಿಕೆ, ಬೂಸ್ಟರ್‌ ಡೋಸ್‌ ಲಸಿಕೆ ಆಗಬೇಕು. ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜ, ಗೊಬ್ಬರ ಕೊರತೆ ಉಂಟಾಗದಂತೆ ಕ್ರವವಹಿಸಬೇಕು. ಶಾಲಾರಂಭಗೊಳ್ಳುವ ಮೊದಲೇ ವಿದ್ಯಾಥಿ ವಸತಿ ನಿಲಯಗಳನ್ನು ಶುಚಿಗೊಳಿಸಬೇಕು. ತೀರಾ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಗಳನ್ನು ನರೇಗಾದಡಿ ದುರಸ್ತಿಗೆ ಕ್ರಮವಹಿಸಬೇಕು. ಅಧಿಕಾರಿಗಳು ತಮ್ಮ ಇಲಾಖೆಗೆ ನೀಡಿದ ಅನುದಾನ ಸಮರ್ಪಕ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಅನಿರೀಕ್ಷಿತವಾಗಿ ಭೇಟಿ ನೀಡಿ ನಾನು ಪರಿಶೀಲಿಸುತ್ತೇನೆ. ಆಗ ತಪ್ಪು ಕಂಡು ಬಂದರೆ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ಸಚಿವ ಭೈರತಿ ಬಸವರಾಜ್‌ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌ ನವೀನ್‌, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಹಸುಗಳಿಗೆ ಸಮಸ್ಯೆ ಗೊತ್ತಾಗುತ್ತಾ?

ಪಶು ಆಸ್ಪತ್ರೆಗಳಲ್ಲಿ ವೈದ್ಯರೇ ಇರುವುದಿಲ್ಲ ಎಂದು ಶಾಸಕ ರಾಮಚಂದ್ರ ಸಭೆಯಲ್ಲಿ ದೂರಿದರು. ಆಗ ಪಶು ಇಲಾಖಾಧಿಕಾರಿ, ಸಿಬ್ಬಂದಿ ಕೊರತೆ ಬಹಳ ಇದೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಶಾಸಕ ರಾಮಚಂದ್ರ, ವೈದ್ಯರಿಲ್ಲ ಎಂಬುದು ಮನುಷ್ಯರಾದ ನಮಗೆ ಗೊತ್ತಾಗುತ್ತದೆ. ಆದರೆ, ಹಸು-ಎತ್ತುಗಳಿಗೆ ಸಮಸ್ಯೆ ಗೊತ್ತಾಗುತ್ತದೆಯೇ? ಎಲ್ಲಿ ಹೆಚ್ಚು ಬೇಡಿಕೆ ಇದೆಯೋ ಅಲ್ಲಿಗೆ ಬೇರೆ ಕಡೆಯಿಂದ ವೈದ್ಯರನ್ನು ನಿಯೋಜಿಸುವ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಅಕ್ಕಿ ಗುರುತಿಸದ ಆಹಾರ ಅಧಿಕಾರಿಗಳು!

ಪಡಿತರ ಅಕ್ಕಿ ಅಕ್ರಮ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌, ಪಡಿತರ ಅಕ್ಕಿ ಅಕ್ರಮ ದಾಸ್ತಾನು ಬಗ್ಗೆ ಅಧಿಕಾರಿಗಳು ದೂರು ಕೊಡಲು ಮುಂದೆ ಬರಬೇಕು. ದೂರು ಕೊಟ್ಟಾಗ ಮಾತ್ರ ನಾವು ಮುಂದುವರಿಯಲು ಸಾಧ್ಯ. ಇನ್ನು ಹಿಡಿದಿರುವ ಅಕ್ಕಿ ಪಡಿತರ ಅಕ್ಕಿ ಹೌದೋ ಅಲ್ಲವೋ ಎಂಬುದನ್ನು ಗುರುತಿಸುವಲ್ಲಿಯೂ ಅಧಿಕಾರಿಗಳು ವಿಫಲರಾಗುತ್ತಿದ್ದಾರೆ. ಪಡಿತರ ಅಕ್ಕಿ ಹೌದೋ ಅಲ್ಲವೋ ಎಂಬುದಕ್ಕೆ ಅಕ್ಕಿಯ ಚೀಲದ ಮೇಲೆ ಮುದ್ರಿತ ಚಿಹ್ನೆ ನೋಡಬೇಕು ಎನ್ನುತ್ತಾರೆ. ಪತ್ತೆ ಹಚ್ಚಿದ ಅಕ್ಕಿಗೆ ಮೂಲ ಚೀಲವೇ ಇರುವುದಿಲ್ಲ ಎಂದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.