ಭಾಗ್ಯಗಳ ಕೊಟ್ಟ ಕಾಂಗ್ರೆಸ್‌ ಬೆಂಬಲಿಸಿ

Team Udayavani, May 4, 2018, 11:16 AM IST

ದಾವಣಗೆರೆ: ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ, ಅಲ್ಪಸಂಖ್ಯಾತ ಸಮುದಾಯಕ್ಕೆ ಶಾದಿ ಭಾಗ್ಯ ಯೋಜನೆ ರೂಪಿಸಿರುವ
ಕಾಂಗ್ರೆಸ್‌ ಬೆಂಬಲಿಸಿ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ. ಗುರುವಾರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ 4,6 ಮತ್ತು 7ನೇ ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್‌ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಶಾದಿ ಭಾಗ್ಯದಂತಹ ಮಹತ್ವದ ಯೋಜನೆ ಜಾರಿಗೆ ತಂದು ಅನೇಕ ಬಡವರಿಗೆ ಅನುಕೂಲ ಕಲ್ಪಿಸಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಾತಿ- ಧರ್ಮದ ಬಡವರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಕೂಲಿ ಕಾರ್ಮಿಕರಿಗಾಗಿಯೇ ಇಂದಿರಾ ಕ್ಯಾಂಟೀನ್‌ ಮೂಲಕ ಕಡಿಮೆ ದರದಲ್ಲಿ ಉಪಹಾರ ಮತ್ತು ಊಟ ನೀಡಲಾಗುತ್ತಿದೆ ಎಂದು ತಿಳಿಸಿದರು. 

ಡೆಪ್ಯುಟಿ ಮೇಯರ್‌ ಕೆ. ಚಮನ್‌ ಸಾಬ್‌, ಸದಸ್ಯರಾದ ಎ.ಬಿ. ರಹೀಂ, ಬುತ್ತಿಗೌಸ್‌ ಮೊಹಮ್ಮದ್‌, ಕೆ.ಆರ್‌. ಮೆಹಬೂಬ್‌ಸಾಬ್‌, ದಿಲ್‌ಶಾದ್‌ ಷೇಕ್‌ ಅಹ್ಮದ್‌, ನಾಮನಿರ್ದೇಶಿತ ಸದಸ್ಯ ಫಾರೂಕ್‌, ಮಾಜಿ ಸದಸ್ಯರಾದ ಶಫಿಕ್‌ ಪಂಡಿತ್‌, ಮುನ್ನಾ ಪೈಲ್ವಾನ್‌, ಉದ್ಯಮಿ ಎಸ್‌.ಎಸ್‌. ಗಣೇಶ್‌, ಎ.ಸಿ. ಜಯಣ್ಣ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಯೂಬ್‌ ಪೈಲ್ವಾನ್‌, ಇತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ