ತಾಪಮಾನ ಏರಿಕೆ ಅಪಾಯಕಾರಿ


Team Udayavani, Feb 4, 2019, 5:34 AM IST

dvg-3.jpg

ದಾವಣಗೆರೆ: ಪ್ರಸ್ತುತ ದಿನಗಳಲ್ಲಿ ಜಾಗತಿಕ ತಾಪಮಾನ ಏರಿಕೆಯನ್ನು ತಡೆಯುವುದು ಪ್ರತಿ ವ್ಯಕ್ತಿ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಮುಂದೆ ದೊಡ್ಡ ಸವಾಲಾಗಿದೆ ಎಂದು ದೊಡ್ಡಪೇಟೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

ಜಯದೇವ ವೃತ್ತದ ಶಿವಯೋಗಾಶ್ರಮದಲ್ಲಿ ಭಾನುವಾರ ಶರಣ ಸಂಗಮದ ಅಂಗವಾಗಿ ಧರೆಹೊತ್ತಿ ಉರಿದಡೆ-ಜಾಗತಿಕ ತಾಪಮಾನ ಮತ್ತು ಜನಜೀವನ ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.

ನಿತ್ಯದ ವಾತಾವರಣದ ಉಷ್ಣತೆ ಒಂದೊಂದು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾದರೂ ಕೂಡ ಅದರಿಂದಾಗುವ ಅಪಾಯ ಅಪಾರವಾದುದು. ಧ್ರುವಗಳಲ್ಲಿ ಹಿಮ, ನೀರ್ಗಲ್ಲು ಕರಗಿ ಸಮುದ್ರದ ಮಟ್ಟ ಏರಬಹುದು. ಕಡಲ ತಡಿಯ ಜನವಸತಿ ಪ್ರದೇಶಗಳು ಮುಳುಗಬಹುದು. ಆಹಾರ ಉತ್ಪಾದನೆ ಕೊರತೆ, ಮಳೆ ಬೀಳುವಲ್ಲಿ ಏರು-ಪೇರಾಗಬಹುದು. ಹಾಗಾಗಿ ಪರಿಸರದಲ್ಲಿ ಗಿಡ-ಮರಗಳನ್ನು ಹೆಚ್ಚೆಚ್ಚು ಬೆಳೆಸುವ ಮೂಲಕ ಇಡೀ ಜೀವ ಸಂಕುಲದ ಮೇಲಾಗುವ ತೊಂದರೆಯನ್ನು ತಪ್ಪಿಸಬೇಕಾಗಿದೆ ಎಂದರು.

ಆಧುನೀಕರಣ, ಯಾಂತ್ರೀಕರಣ, ಕೈಗಾರಿಕರಣದಲ್ಲಿ ಮಾನವ ಅನುಸರಿಸುತ್ತಿರುವ ನೀತಿಗಳು ಜಾಗತಿಕ ತಾಪಮಾನ ಹೆಚ್ಚಳಕ್ಕೆ ಕಾರಣವಾಗುತ್ತಿವೆ. ಇಂಗಾಲದ ಹೊರಸೂಸುವಿಕೆ, ಅರಣ್ಯ ಪ್ರದೇಶಗಳ ನಾಶ, ತಾಪಮಾನ ಏರಿಕೆಗೆ ಅತಿದೊಡ್ಡ ಕಾಣಿಕೆ ಕೊಡುತ್ತಿವೆ. ಈ ಧೋರಣೆ ಬದಲಾಗಬೇಕಿದೆ ಎಂದು ಹೇಳಿದರು.

ಓಲೆ ಹತ್ತಿ ಉರಿದಡೆ ನಿಲ್ಲಬಹುದಲ್ಲದೇ, ಧರೆ ಹೊತ್ತಿ ಉರಿದಡೆ ನಿಲ್ಲಬಹುದೇ ಅಯ್ನಾ ಎಂದು 12ನೇ ಶತಮಾನದಲ್ಲಿಯೇ ಬಸವಣ್ಣನವರು ಹೇಳುವ ಮೂಲಕ ಜನರನ್ನು ಎಚ್ಚರಿಸಿದ್ದಾರೆ. ಈ ವಾಕ್ಯವನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು. ಮಾನವ ಪರಿಸರಮುಖೀ ಜೀವನ ಸಾಗಿಸಿದಾಗ ಮಾತ್ರ ಪರಿಸರ ಉಳಿಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪರಿಸರಮುಖೀಯಾಗಿ ಜೀವನ ಸಾಗಿಸೋಣ. ಸಮಾಜದಲ್ಲಿ ಪರಿಸರ ನಾಶ ಆಗದಂತೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸೋಣ ಎಂದು ಹೇಳಿದರು.

ಪರಿಸರ ಅಧಿಕಾರಿ ಕೆ.ಬಿ. ಕೊಟ್ರೇಶ್‌ ಮಾತನಾಡಿ, ಜನರು ಸಮೃದ್ಧ ಗಾಳಿ, ಬೆಳಕು ಬರುವ ಪರಿಸರ ಸ್ನೇಹಿ ಮನೆಗಳ ನಿರ್ಮಾಣಕ್ಕೆ ಮುಂದಾಗಬೇಕು. ಇದಕ್ಕೆ ಇಂದಿನ ಇಂಜಿನಿಯರ್ ಕೂಡ ಕೈಜೋಡಿಸಬೇಕು. ನಶಿಸಲಾರದ ಇಂಧನ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿನ ಕಸವನ್ನು ವಿಂಗಡಣೆ ಮಾಡುವ ಮೂಲಕ ಭೂಮಿಯನ್ನು ಸಮೃದ್ಧವಾಗಿ, ಆರೋಗ್ಯಪೂರ್ಣವಾಗಿ ಇಡುವ ಕೆಲಸ ಮಾಡಬೇಕು. ಆಗ ಜಾಗತಿಕ ತಾಪಮಾನ ಕೂಡ ಕಡಿಮೆ ಆಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರಕೃತಿ ಸಕಲ ಜೀವಿಗಳಿಗೂ ಉತ್ತಮ ಗಾಳಿ, ನೀರು, ಬೆಳಕು ಎಲ್ಲವನ್ನು ನೀಡುತ್ತಿದೆ. ಆದರೆ ನಮ್ಮ ದುರಾಸೆಗೆ ಪ್ರಕೃತಿ ನಾಶವಾಗುತ್ತಿದೆ. ಪ್ರಜ್ಞಾವಂತ ಜನರು ಗಿಡ-ಮರಗಳನ್ನು ಬೆಳೆಸುವ ಮೂಲಕ ಮುಂದಿನ ಪೀಳಿಗೆ ಸಮೃದ್ಧ ಜೀವನ ನಡೆಸಲು ಅನುಕೂಲಕರ ವಾತಾವರಣ ನಿರ್ಮಿಸಿಕೊಡಬೇಕಿದೆ ಹೇಳಿದರು.

ರಾಜ್ಯ ಕಾಲೇಜು ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರೊ| ಸಿ.ಎಚ್. ಮುರಿಗೇಂದ್ರಪ್ಪ, ಹಿರಿಯ ಚಿತ್ರಕಲಾವಿದ ಮಹಾಲಿಂಗಪ್ಪ ಮಾಸ್ತರ್‌ ಉಪಸ್ಥಿತರಿದ್ದರು. ಗಿರೀಶ್‌ ದೇವರಮನಿ ಸ್ವಾಗತಿಸಿದರು. ಚನ್ನಪ್ಪ ಕುಂಟೋಜಿ ನಿರೂಪಿಸಿದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.