
Karnataka Election ಮೋದಿ-ಶಾ ರೋಡ್ ಶೋ ಬಳಿಕ ವಾತಾವರಣ ಬದಲಾಗಿದೆ: ಬಿಎಸ್ ಯಡಿಯೂರಪ್ಪ
Team Udayavani, May 5, 2023, 12:35 PM IST

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ. ನೂರಕ್ಕೆ ನೂರು ಸ್ವಂತ ಬಲದಿಂದ ಸರ್ಕಾರ ರಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಬಾರಿ ನೂರಕ್ಕೆ ನೂರರಷ್ಟು ನಾವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ. 135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ. ಯಾರ ಜೊತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದರು.
ಇದನ್ನೂ ಓದಿ:ನಿರಂಜನಕುಮಾರ್ ಪರ ನಟ ಕಿಚ್ಚ ಸುದೀಪ್ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ
ರಾಜ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತಾ ಶಾ ರೋಡ್ ಶೋ ನಂತರ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ. ಬಿಜೆಪಿಗೆ ಮತ್ತಷ್ಟು ಬಲ ಬಂದಿದೆ. ಸ್ವತಂತ್ರ ಸರ್ಕಾರ ರಚನೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಅಂಶಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್ ಮೂರ್ಖತನ ಮಾಡಿದೆ. ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತದೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere Bandh: ದಾವಣಗೆರೆ ಬಂದ್ ಗೆ ಅಭೂತಪೂರ್ವ ಬೆಂಬಲ… ಅಂಗಡಿ ಮುಂಗಟ್ಟು ಬಂದ್

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

BJP-JDS ಮೈತ್ರಿ ಕಳ್ಳರು ಕಳ್ಳರು ಸಂತೆ ಮಾಡಿದಂತಿದೆ: ಮುಖ್ಯಮಂತ್ರಿ ಚಂದ್ರು

BJP; ಎರಡ್ಮೂರು ತಿಂಗಳು ಮಾಧ್ಯಮಗಳ ಮುಂದೆ ಮಾತಾಡಲ್ಲ: ಸಂಸದ ಸಿದ್ದೇಶ್ವರ

Jagalur; ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಲು ನಮ್ಮ ನಾಯಕರೇ ಕಾರಣ: ಬಿಜೆಪಿ ಮಾಜಿ ಶಾಸಕ