ಐಪಿಎಲ್‌ ನಿಂದ ತಡವಾಯ್ತು ನಿರ್ಮಾಣ ಕಾರ್ಯ


Team Udayavani, May 21, 2018, 11:27 AM IST

dvg-2.jpg

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು, ವಿವಿಧ ಕ್ರೀಡೆಗಳ ತವರೂರು, ಕ್ರೀಡಾಭಿಮಾನಿಗಳ ನಗರಿ ದಾವಣಗೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಮೈದಾನಕ್ಕೆ ಕ್ರಿಕೆಟ್‌ ಪ್ರಿಯರು ಇನ್ನಷ್ಟು ದಿನ ಕಾಯಬೇಕಾಗಿದೆ.

ಕೆಲ ತಿಂಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್‌.ಎಸ್‌. ಮಲ್ಲಿಕಾರ್ಜುನ್‌ ರಾಜ್ಯ ಕ್ರಿಕೆಟ್‌ ಸಂಸ್ಥೆಯ ದಿಗ್ಗಜರ ಸಮ್ಮುಖದಲ್ಲಿ ಶಾಮನೂರಿನ ಜೆ.ಎಚ್‌. ಪಟೇಲ್‌ ಬಡಾವಣೆಯಲ್ಲಿ ಸುಸಜ್ಜಿತ ಕ್ರಿಕೆಟ್‌ ಮೈದಾನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಮೈದಾನ ನಿರ್ಮಾಣ ಆಗಲಿದೆ ಎಂಬಂತ ಸ್ಥಿತಿ ಅಂದು
ಇತ್ತು.  

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೆಎಸ್‌ ಸಿಎನ ಘಟಾನುಘಟಿಗಳು ಕೆಲವೇ ತಿಂಗಳಲ್ಲಿ ಇಲ್ಲಿ ಕೆಪಿಎಲ್‌ ಪಂದ್ಯ ನಡೆಯಲಿವೆ. ಅಂತಹ ಸುಸಜ್ಜಿತ ಕ್ರಿಕೆಟ್‌ ಮೈದಾನ ನಿರ್ಮಾಣ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದ್ದರು. ಆದರೆ, ಈ ವರೆಗೆ ಮೈದಾನಕ್ಕೆ ಕಾದಿರಿಸಿರುವ ಜಾಗದಲ್ಲಿ ಏನೂ ಆಗಿಲ್ಲ. ಶಂಕುಸ್ಥಾಪನೆ ನೆರವೇರಿದ ನಂತರ ಯಾರೂ ಸಹ ಇತ್ತ ಸುಳಿದಿಲ್ಲ.

ವಿಧಾನ ಪರಿಷತ್‌ ಸದಸ್ಯ ಕೊಂಡಜ್ಜಿ ಮೋಹನ್‌, ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರ ಪ್ರಯತ್ನದಿಂದ ಕೆಲವೇ ದಿನಗಳಲ್ಲಿ ಅಗತ್ಯವಿದ್ದ ಜಾಗವನ್ನು ಡೂಡಾದಿಂದ ಕೆಎಸ್‌ಸಿಎಗೆ ಹಸ್ತಾಂತರ ಮಾಡುವ ಕಾರ್ಯವನ್ನು ಮಾಡಿದ್ದರು.

ಸ್ವತಃ ಕೆಎಸ್‌ಸಿಐ ಪದಾಧಿಕಾರಿಗಳೇ  ಬೆರಗಾಗಿದ್ದರು. ಈವರೆಗೆ ಅನೇಕ ಕಡೆ ನಾವು ಮೈದಾನ ನಿರ್ಮಾಣಕ್ಕೆ ಮುಂದೆ ಬಂದಾಗ ಸ್ಥಳೀಯ ನಾಯಕರು ತೋರಿದ ಆಸಕ್ತಿ, ಪ್ರೋತ್ಸಾಹದಾಯಕವಾಗಿರಲಿಲ್ಲ. ಆದರೆ, ದಾವಣಗೆರೆ ಜಿಲ್ಲೆಯ ಜನಪ್ರತಿನಿಧಿಗಳು ತೋರಿದ ಆಸಕ್ತಿ ನಿಜಕ್ಕೂ ಅತ್ಯದ್ಭುತ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

 ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದ ದಾವಣಗೆರೆ ಎಕ್ಸ್‌ಪ್ರೆಸ್‌ ಖ್ಯಾತಿಯ ಭಾರತೀಯ ಕ್ರಿಕೆಟ್‌ ತಂಡದ ವೇಗದ ಬೌಲರ್‌ ವಿನಯಕುಮಾರ್‌ ಸಹ ಸಂತಸ ವ್ಯಕ್ತಪಡಿಸಿ, ನನ್ನ ಹುಟ್ಟೂರಾದ ದಾವಣಗೆರೆಯಲ್ಲಿ ಮೈದಾನ ಆಗುತ್ತಿರುವುದು
ನನಗೆ ಸಂತಸ ತಂದಿದೆ. ಆದಷ್ಟು ಬೇಗ ಮೈದಾನ ನಿರ್ಮಾಣ ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದ್ದರು.

ಕ್ರಿಕೆಟ್‌ ಮೈದಾನ ನಿರ್ಮಾಣ ಕಾರ್ಯ ಈಗಾಗಲೇ ಆರಂಭ ಆಗಬೇಕಿತ್ತು. ಆದರೆ, ಐಪಿಎಲ್‌ ಪಂದ್ಯಾವಳಿ ಆರಂಭವಾಗಿದ್ದರಿಂದ ಪಿಚ್‌ ನಿರ್ಮಾಣ ಕಾರ್ಯ ನಿಭಾಯಿಸುವರರು ಐಪಿಎಲ್‌ ಪಂದ್ಯ ನಡೆಯುವ ಮೈದಾನದ ನಿಗಾವಹಿಸಬೇಕಾಯಿತು. ಇದೇ ಕಾರಣಕ್ಕೆ ಇಲ್ಲಿನ ಮೈದಾನದ ಕಾರ್ಯ ಇನ್ನೂ ಆರಂಭವಾಗಿಲ್ಲ ಎನ್ನುತ್ತವೆ ಮೂಲಗಳು.

ಇದರ ಜೊತೆಗೆ ಇಲ್ಲಿ ನಿರ್ಮಾಣ ಆಗಲಿರುವ ಮೈದಾನ ಅಂತಾರಾಷ್ಟ್ರೀಯ ಗುಣಮಟ್ಟದ್ದಾಗಿರಲಿದೆ. ರಣಜಿ, ಕೆಪಿಎಲ್‌,
ವಲಯ ಮಟ್ಟದ ಪಂದ್ಯಾವಳಿ ಸೇರಿದಂತೆ ದೇಸಿಯ ಕ್ರಿಕೆಟ್‌ ಪಂದ್ಯ ಆಯೋಜಿಸಲು ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮೈದಾನದಲ್ಲಿ ಒದಗಿಸುವ ಯೋಜನೆ ಸದ್ಯ ರೂಪುಗೊಳ್ಳುತ್ತಿದೆ.

ಮುಂದಿನ ವರ್ಷ ರಣಜಿ ಪಂದ್ಯ ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ವರ್ಷ ನಮ್ಮೂರಲ್ಲಿ ರಣಜಿ, ಕೆಪಿಎಲ್‌ ಪಂದ್ಯಗಳು ನಡೆಯಲಿವೆ. ರಾಜ್ಯ ತಂಡದಲ್ಲಿನ ಮನೀಶ್‌ ಪಾಂಡೆ, ಕೆ.ಎಲ್‌. ರಾಹುಲ್‌, ಕರುಣ್‌ ನಾಯರ್‌, ಮಯಾಂಕ್‌ ಅಗರವಾಲ್‌ ಸೇರಿದಂತೆ ಖ್ಯಾತನಾಮ ಕ್ರಿಕೆಟಿಗರ ಆಟವನ್ನು ನೇರವಾಗಿ ನೋಡುವ ಅವಕಾಶ ದೊರೆಯಲಿದೆ.

ಅಂತಾರಾಷ್ಟ್ರೀಯ ಮೈದಾನ ಆಗಲಿದೆ ನಮ್ಮ ದಾವಣಗೆರೆಯಲ್ಲಿ ಅಂತರಾಷ್ಟ್ರೀಯ ಮೈದಾನ ನಿರ್ಮಾಣ ಮಾಡುವ ಕನಸನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಎಸ್‌. ಮಲ್ಲಿಕಾರ್ಜುನ್‌ ಹೊಂದಿದ್ದರು. ಅವರ ಪ್ರಯತ್ನದಿಂದಾಗಿ 8.5 ಎಕರೆ ವಿಶಾಲವಾದ ಜಮೀನು ಕ್ರಿಕೆಟ್‌ ಮೈದಾನಕ್ಕೆ ಸಿಕ್ಕಿದೆ. ಇಲ್ಲೊಂದು ಸುಸಜ್ಜಿತ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಮೈದಾನ ನಿರ್ಮಾಣ ಮಾಡುವ ಅವರ ಕನಸು ಶೀಘ್ರ ನನಸಾಗಲಿದೆ. 15 ದಿನಗಳಲ್ಲಿ ಮೈದಾನ ನಿರ್ಮಾಣ ಕಾರ್ಯ ಆರಂಭ ಆಗಲಿದೆ.
 ಕೆ. ಶಶಿಧರ್‌, ಕೆಎಸ್‌ಸಿಐ ಸದಸ್ಯ.

ಪಾಟೀಲ ವೀರನಗೌಡ

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.