ಕೊರೊನಾ ಭೀತಿ; ಮೆಕ್ಕೆಜೋಳ ಬೇಡಿಕೆ ಕುಸಿತ!

Team Udayavani, Mar 17, 2020, 1:08 PM IST

ಕೊರೊನಾ ಭೀತಿ; ಮೆಕ್ಕೆಜೋಳ ಬೇಡಿಕೆ ಕುಸಿತ!

ಸಾಂದರ್ಭಿಕ ಚಿತ್ರ

ಮಾಯಕೊಂಡ: ಮಾಯಕೊಂಡ ಮತ್ತು ಆನಗೋಡು ಹೋಬಳಿಯ ರೈತರಿಗೆ ಮೆಕ್ಕೆಜೋಳ ಬೆಳೆಗಾರರಿಗೆ ಕೊರೊನಾ ಬಿಸಿ ತಟ್ಟಿದೆ. ಕೊರೊನಾ ಬಿಸಿ ಕುಕ್ಕುಟೋದ್ಯಮದ ಮೇಲೆ ಪರಿಣಾಮ ಬೀರಿರುವ ಕಾರಣಕ್ಕೆ ಕೋಳಿಯ ಪ್ರಮುಖ ಆಹಾರ ಧಾನ್ಯವಾದ ಮೆಕ್ಕೆಜೋಳದ ಬೇಡಿಕೆ ಕುಸಿದಿದ್ದು, ದರ ದಿನದಿಂದ ದಿನಕ್ಕೆ ಕುಸಿಯುತ್ತಿದೆ.  ಇದರಿಂದ ಕಳೆದ ಮುಂಗಾರಿನಲ್ಲಿ ಬೆಳೆದ ಮೆಕ್ಕೆಜೋಳವನ್ನು ಮಾರಾಟ ಮಾಡದೆ ರೈತರು ಕಣಗಳಲ್ಲಿ ಸಂಗ್ರಹಣೆ ಮಾಡಿಟ್ಟುಕೊಂಡ ಪರಿಣಾಮ ಬೆಳೆಗಾರರು ಕಂಗಾಲಾಗಿದ್ದಾರೆ.

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಕೊರೊನಾ ಭೀತಿಗಿಂತ ಮೊದಲು ಮೆಕ್ಕೆಜೋಳದ ದರ 1900-2000 ರೂ. ಗಡಿ ದಾಟಿತ್ತು. 2000 ರೂ. ದರ ನಿರೀಕ್ಷೆ ಮಾಡಿದ್ದ ರೈತರುಗಳು ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಬಂಗಾರದ ಬೆಲೆ ಸಿಕ್ಕಿತ್ತು ಎಂದು ಸಂತಸಗೊಂಡಿದ್ದರು. ಈಗ ದಿಢೀರ್‌ ದರ ಕುಸಿದು ಸಾವಿರದಿಂದ ಸಾವಿರದ ಇನ್ನೂರು ರೂ.ಗೆ ವ್ಯಾಪಾರ ನಡೆಯುತ್ತಿರುವುದರಿಂದ ರೈತರು ಇನ್ನು ಬೆಲೆ ಕುಸಿಯಬಹುದು ಎಂಬ ಅತಂಕದಲ್ಲಿದ್ದಾರೆ.

ಮುಂಗಾರಿನಲ್ಲಿ ಬೆಳೆದ ಮೆಕ್ಕೆಜೋಳವನ್ನು ತೆನೆ ಸಮೇತ ಕಣಗಳಲ್ಲಿ ಸಂಗ್ರಹಿಸಿಡುವ ರೈತರು ಜನವರಿ ತಿಂಗಳ ನಂತರ ಮಾರಾಟ ಮಾಡುವುದು ವಾಡಿಕೆ. ಮೆಕ್ಕೆಜೋಳವನ್ನು ಜನವರಿ ಬಳಿಕ ಮಾರಾಟ ಮಾಡಿ ಹೆಚ್ಚಿನ ಆದಾಯ ಗಳಿಸುತ್ತಿದ್ದ ರೈತರಿಗೆ ಇದೀಗ ಕೊರೊನಾ ವೈರಸ್‌ ರೈತರ ಮಗ್ಗಲ ಮುಳ್ಳು ಮುರಿಯುತ್ತಿದೆ.

ತತ್ತರಿಸಿದ ಪೌಲ್ಟ್ರಿ ಉದ್ಯಮ ಕೋಳಿ ತಿಂದರೆ ಕೊರೊನಾ ವೈರಸ್‌ ಬರುತ್ತದೆ ಎಂಬ ವದಂತಿಗಳಿಂದಾಗಿ ಉದ್ಯಮ ತಲ್ಲಣಿಸಿದ ಕಾರಣಕ್ಕೆ ಕೋಳಿಗಳ ಪ್ರಮುಖ ಆಹಾರ ಧಾನ್ಯ ಮೆಕ್ಕೆಜೋಳವನ್ನು ಖರೀದಿ ಮಾಡಲು ಖರೀದಿದಾರರು ಮುಂದೆ ಬಾರದ ಕಾರಣಕ್ಕೆ ಮೆಕ್ಕೆಜೋಳ ದರ ಕೂಡ ದಿನೇ ದಿನೇ ಕುಸಿತಗೊಳ್ಳುತ್ತಿದೆ. ಪ್ರತಿ ಕ್ವಿಂಟಲ್‌ ಮೆಕ್ಕೆಜೋಳ ದರ 1000-1200 ರೂ.ಗೆ ಖರೀದಿ ನಡೆಯುತ್ತಿದೆ. ಇನ್ನೂ ದರ ಕುಸಿಯುವ ಸಾಧ್ಯತೆ ದಟ್ಟವಾಗಿದೆ ಎಂದು ಹೋಬಳಿಯ ರೈತರು ಸರ್ಕಾರದ ಮೆಕ್ಕೆಜೋಳ ಸಂರಕ್ಷಣ ಘಟಕಗಳಲ್ಲಿ ಸಂಗ್ರಹ ಮಾಡುತ್ತಿದ್ದಾರೆ. ಇನ್ನೂ ಕೆಲವು ರೈತರು ವರ್ತಕರಿಗೆ ತಿಂಗಳ ನಂತರ (ಸಾಲ) ನಂತರ ಹಣ ಪಡೆದುಕೊಳ್ಳಲು 1400 -1600 ರೂ.ಗೆ ಮಾರಟ ಮಾಡುತ್ತಿರುವುದು ಸಾಮಾನ್ಯವಾಗಿ ಹೋಬಳಿಯ ಗ್ರಾಮಗಳಲ್ಲಿ ಕಂಡು ಬರುತ್ತದೆ. ದಾವಣಗೆರೆ ತಾಲೂಕಿನ ಮಾಯಕೊಂಡ, ಆನಗೋಡು ಹೋಬಳಿಗಳಲ್ಲಿ ಶೇ.40% ರಷ್ಟು ಮೆಕ್ಕೆಜೋಳ ಇದುವರೆಗೆ ಮಾರಾಟವಾಗಿದೆ. ಇನ್ನೂ ಶೇ. 60%ರಷ್ಟು ರೈತರು ಉತ್ತಮ ಬೆಲೆಗಾಗಿ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ. ಕೊರೊನಾ ವೈರಸ್‌ನಿಂದ ಹಠಾತ್‌ ಬೆಲೆ ಇಳಿಕೆ ಕಂಡಿರುವುದರಿಂದ ರೈತರನ್ನು ಚಿಂತೆಗೀಡು ಮಾಡಿದೆ.

ಒಂದು ಎಕ್ಕರೆ ಮೆಕ್ಕೆಜೋಳ ಬೆಳೆಯಲು 20 ರಿಂದ 25 ಸಾವಿರ ರೂ. ಖರ್ಚು ತಗಲುತ್ತದೆ. ಬಿತ್ತನೆ ಬೀಜ ಪ್ಯಾಕೆಟ್‌ ಸುಮಾರು ಸಾವಿರದಿಂದ ಎರಡು ಸಾವಿರ ರೂಪಾಯಿವರೆಗೂ ಬೆಲೆ ಇದೆ. ಇಂತಹ ಸಂದಿಗ್ಧ ಕಾಲದಲ್ಲಿ ಸರ್ಕಾರ ಬೆಂಬಲ ಬೆಲೆ ಘೋಷಿಸಿ 2500 ದರ ನಿಗದಿಪಡಿಸಿ ಸಕಾಲದಲ್ಲಿ ಖರೀದಿಸಲು ಖರೀದಿ ಕೇಂದ್ರ ತೆರೆಯಬೇಕು. ಖರೀದಿ ಕೇಂದ್ರ ತೆರೆದರೆ ರೈತರನ್ನು ಸಂಕಷ್ಟದಿಂದ ದೂರ ಮಾಡಬಹುದು ಎಂಬುದು ರೈತಪರ ಸಂಘಟನೆಗಳು ಮತ್ತು ಈ ಭಾಗದ ರೈತರ ಒತ್ತಾಯವಾಗಿದೆ.

ಕಳೆದ ನಾಲ್ಕೈದು ವರ್ಷಗಳಿಂದ ಬರಗಾಲದಿಂದ ತತ್ತರಿಸಿ ಹೋಗಿದ್ದ ರೈತರಿಗೆ ಕೊರೊನಾದಿಂದ ಮೆಕ್ಕೆಜೋಳದ ಬೆಲೆ ಕುಸಿತ ಒಂದು ಕಡೆ ಅದರೆ, ಕಣದಲ್ಲಿ ಸಂಗ್ರಹಣೆ ಮಾಡಿದ ಜೋಳದ ರಾಶಿ ಬಿಸಿಲಿನ ತಾಪಮಾನದಿಂದ ತೇವಾಂಶ ಕಳೆದುಕೊಂಡು ತೂಕ ಕಡಿಮೆ ಅಗಿರುವುದು. ನಾನಾ ಸಂಕಷ್ಟಗಳಿಂದ ನೊಂದಿರುವ ರೈತರ ಕಷ್ಟಕ್ಕೆ ಸರ್ಕಾರ ನೆರವಿಗೆ ಬಾರದಿರುವುದು ವಿಪರ್ಯಸವೇ ಸರಿ.

-ಶಶಿಧರ್‌ ಶೇಷಗಿರಿ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.