ಕೆರೆಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ

Team Udayavani, Apr 8, 2017, 1:10 PM IST

dvg7.jpg

ಚನ್ನಗಿರಿ: ದೇಶದ ಪ್ರತಿಯೊಂದು ಹಳ್ಳಿಗಳಲ್ಲಿನ ಕೆರೆಗಳು ಅಭಿವೃದ್ಧಿಯಾದರೆ ನಾವುಗಳು ಪ್ರಗತಿ ಕಾಣಲು ಸಾಧ್ಯ. ಇದನ್ನು ಮನಗಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘದಿಂದ ಕೆರೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವುದರ ಜತೆಗೆ ಕೆರೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಧರ್ಮಸ್ಥಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಹೇಳಿದರು. 

ತಾಲೂಕಿನ ಚಿಕ್ಕಬೆನ್ನೂರು ಗ್ರಾಮದದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಕೆರೆ ಹಸ್ತಾಂತರ ಕಾರ್ಯಕ್ರಮ  ಉದ್ಘಾಟಿಸಿ ಅವರು ಮಾತನಾಡಿದರು ಕೆರೆಗಳ ರಕ್ಷಣೆಯಿಂದ ದೇಶವು ಪ್ರಗತಿಯನ್ನು ಕಾಣಲು ಸಾಧ್ಯವಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಅಂತರ್‌ ಜಲಮಟ್ಟದ ಕೊರತೆಯಿಂದ ಸಾಕಷ್ಟು ತೊಂದರೆಗಳನ್ನು ಎದುರಿಸುವಂತೆ ಆಗಿದೆ. 

ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಿಂದಿನ ಕಾಲದಲ್ಲಿ ನಮ್ಮ  ಹಿರಿಯರು ಕೆರೆಗಳ ಬಗ್ಗೆ ಹೊಂದಿದ ಅಸಕ್ತಿ ಇಂದಿನ ಯುವಕರಿಗೆ ಇಲ್ಲವಾಗಿದೆ. ಕೆರೆಗಳೆಂದರೆ ನಿರ್ಲಕ್ಷé ವಹಿಸಲಾಗುತ್ತಿದೆ. ಹೀಗಾಗಿ ಬರಗಾಲದ ದಂತಹ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಎಚ್ಚೆತ್ತುಕೊಂಡು ಕೆರೆಗಳ ರಕ್ಷಣೆ ಕೈಗೊಂಡರೆ ಸಮಾಜ ಉಳಿಯಲು ಸಾಧ್ಯ ಎಂದರು. 

ಪ್ರಸಕ್ತ ವರ್ಷ 100 ಕೆರೆಗಳನ್ನು ಅಭಿವೃದ್ಧಿಪಡಿಸಲು ತೀರ್ಮಾನಿಸಿದ್ದು, ಕೆರೆ ರಕ್ಷಿಸಿ ನೀರನ್ನು ಸಂರಕ್ಷಿಸುವ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕರಿಸಲಾಗುತ್ತದೆ. ಕೃಷಿ ತೋಟಗಳಿಗೆ ಅಂತರ್ಜಲದ ಮಹತ್ವದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಯೋಜನೆಯಿಂದ 10 ಲಕ್ಷ ರೂ. ಅನುದಾನ ಹಾಗೂ ಗ್ರಾಮಸ್ಥರಿಂದ 15 ಕ್ಷ ರೂ. ಸಹಕಾರದೊಂದಿಗೆ 8 ಎಕರೆಯ ಕೆರೆಯನ್ನು ಅಭಿವೃದ್ಧಿಪಡಿಸಲಾಗಿದೆ.

ಮುಂದಿನ ದಿನಗಳಲ್ಲಿ ಕೆರೆಯನ್ನು ನಿರ್ವಹಣೆ ಮಾಡುವುದರ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಜಿಪಂ ಸದಸ್ಯ ವಾಗೀಶ್‌ ಮಾಸ್ಟರ್‌ ಮಾತನಾಡಿ., ಧರ್ಮಸ್ಥಳ ಗ್ರಾಮಾಭಿವೃಧಿದ್ಧಿ ಸಂಸ್ಥೆಯು ಸಾಮಾಜಿಕ ಕಳಕಳಿ ಇಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ಸ್ವಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಚಿಕ್ಕಬೆನ್ನೂರುಕೆರೆಯ ನೀರು ತುಂಬಿಸುವ ಕುರಿತು ಚಿಂತನೆ ನಡೆಯುತ್ತಿದೆ ಎಂದರು.

ತಾಪಂ ಸದಸ್ಯ ಪ್ರಕಾಶ್‌, ಗ್ರಾಪಂ ಅಧ್ಯಕ್ಷೆ ನಾಗರತ್ನಮ್ಮ ಮೂರ್ತಪ್ಪ, ಕಾಂಗ್ರೆಸ್‌ ಯುವ ಮುಖಂಡ ವಡ್ನಾಳ್‌  ಜಗದೀಶ್‌, ಪ್ರಾದೇಶಿಕ ನಿರ್ದೇಶಕ ಜಯಶಂಕರ್‌ ಶರ್ಮ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಹಾಲಪ್ಪ, ಜಿಲ್ಲಾ ನಿರ್ದೇಶಕ ಚಂದ್ರಶೇಖರ್‌, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರೇಗೌಡ, ತಾಲೂಕು ಯೋಜನಾಧಿಧಿಕಾರಿ ಎಸ್‌. ಜನಾರ್ಧನ್‌, ಕಾಕನೂರ್‌ ನಾಗರಾಜ್‌, ಎನ್‌ .ಪಿ. ನಾಗೇಶ್‌, ಮಹಾಬಲೇಶ್ವರ್‌ ಇತರರಿದ್ದರು.  

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.