ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರ ಪ್ರತಿಭಟನೆ


Team Udayavani, Mar 31, 2017, 12:56 PM IST

dvg5.jpg

ಚನ್ನಗಿರಿ: ಖಾಸಗಿ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ತಡೆಗಟ್ಟಿ ಗ್ರಾಮಸ್ಥರು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ಗುರುವಾರ ನಡೆದಿದೆ. ನಲ್ಲೂರಿನಿಂದ ಓಮ್ನಿನಿಯೊಂದರಲ್ಲಿ ಸುಮಾರು 15 ಬಾಕ್ಸ್‌ಗಳ ಮದ್ಯವನ್ನು ಮಂಟರಘಟ್ಟ ಗ್ರಾಮಕ್ಕೆ ತಂದಾಗ ಗ್ರಾಮಸ್ಥರು ವಾಹನ ತಡೆದು ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಅಬಕಾರಿ ಡಿಸಿ ಬರಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಯಾವುದೇ ಕಾರಣಕ್ಕೂ ಅಕ್ರಮ ಮದ್ಯ ತುಂಬಿರುವ ವಾಹನವನ್ನು ಗ್ರಾಮದಿಂದ ಮುಂದೆ ಹೋಗಲು ಬಿಡುವುದಿಲ್ಲ. ತಕ್ಷಣ ಇದಕ್ಕೆ ಸಂಬಂಧಪಟ್ಟ ಅಧಿಧಿಕಾರಿಗಳು ಸ್ಥಳಕ್ಕೆ ಬರಬೇಕು. ಈ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ.

ಈ ಸಮಸ್ಯೆಗೆ ಮುಕ್ತಿ ನೀಡಬೇಕು ಎಂದು ಪ್ರತಿಭಟನಾ ಗ್ರಾಮಸ್ಥರು ಆಗ್ರಹಿಸಿದರು. ಬಿಜೆಪಿ ಮುಖಂಡ ಬಸವರಾಜಪ್ಪ ಮಾತನಾಡಿ, ಗ್ರಾಮದಲ್ಲಿ ಎಗಿಲ್ಲದೆ ಅಕ್ರಮ ಮದ್ಯವನ್ನು ಹಲವು ವರ್ಷಗಳಿಂದ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಬಕಾರಿ ಇಲಾಖೆಗೆ ದೂರೂ ನೀಡಿದರೂ ಏನು ಪ್ರಯೋಜನವಾಗಿಲ್ಲ.

ಅಧಿಧಿಕಾರಿಗಳು ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಗ್ರಾಮದ ಮುಖಂಡ ಶ್ರೀಧರ್‌ ಮಾತನಾಡಿ, ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಯುವಕರು ದುಶ್ಚಟಗಳ ದಾಸರಾಗಿದ್ದಾರೆ. ಗ್ರಾಮದಲ್ಲಿ ಕೂಲಿ ಕಾರ್ಮಿಕರ ಪರಿಸ್ಥಿಯಂತೂ ಏಳತೀರದು. 

ಕೂಲಿ-ನಾಲಿ ಮಾಡಿ ದುಡಿದ ಹಣವನ್ನು ಪೂರ್ತಿ ಹೆಂಡಕ್ಕೆ ಹಾಕುತ್ತಿದ್ದಾರೆ. ಆದರಿಂದ ಗ್ರಾಮದಲ್ಲಿಯೇ ಈ ಅಕ್ರಮ ಮದ್ಯವನ್ನು ಸ್ಥಳದಲ್ಲಿಯೇ ಗ್ರಾಮಸ್ಥರು ಹಿಡಿದಿದ್ದಾರೆ. ಅಬಕಾರಿ ಡಿಸಿ ಮತ್ತು ಸಂಬಂಧಪಟ್ಟ ಅಧಿಧಿಕಾರಿಗಳು ಬರುವವರೆಗೂ ಸ್ಥಳದಿಂದ ವಾಹನವನ್ನು ಬೀಡುವುದಿಲ್ಲ ಎಂದರು.

ಪಿಎಸ್‌ಐ ವೀರಬಸಪ ಕುಸಲಾಪುರ ಮಾತನಾಡಿ, ತಪಿತಸ್ಥರ ವಿರುದ್ಧ ಕೇಸ್‌ನ್ನು ದಾಖಲು ಮಾಡಲಾಗುವುದು ಹಾಗೂ ಗ್ರಾಮದಲ್ಲಿ ಇನ್ನೂ ಮುಂದೆ ಮದ್ಯಮಾರಾಟ ಮಾಡದಂತೆ ಶಿಸ್ತು ಕ್ರಮವನ್ನು ಜರುಗಿಸಲಾಗುವುದು ಎಂದು ಗ್ರಾಮಸ್ಥರ ಮನವೋಲಿಸಿ ವಾಹನವನ್ನು ಚನ್ನಗಿರಿ ಪೊಲೀಸ್‌ ಠಾಣೆಗೆ ತರಲು ಯಶಸ್ವಿಯಾದರು. ನಂತರ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂಪಡೆದರು. ಗ್ರಾಮದ ಮುಖಂಡರಾದ ರವಿಕುಮಾರ್‌, ನಾಗಪ್ಪ, ಕುಮಾರ್‌ ಸ್ವಾಮಿ ಇತರರಿದ್ದರು. 

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.