ತಂತ್ರಜ್ಞಾನ ಕೊರತೆಯಿಂದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಕುಂಠಿತ

Team Udayavani, Jan 18, 2019, 6:02 AM IST

dvg-2.jpg

ದಾವಣಗೆರೆ: ಭಾರತದಲ್ಲಿ ತಂತ್ರಜ್ಞಾನದ ಕೊರತೆಯಿಂದಾಗಿ ಸಣ್ಣ ಕೈಗಾರಿಕೆಗಳು ಅಭಿವೃದ್ಧಿ ಹೊಂದುತ್ತಿಲ್ಲ. ಆದರೆ, ದೇಶದ ಆರ್ಥಿಕತೆಗೆ ಗುಡಿ ಕೈಗಾರಿಕೆಗಳು ಬೆನ್ನೆಲುಬಾಗಿವೆ. ಹಾಗಾಗಿ ಈ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ| ಮೀನಾ ಚಂದಾವರಕರ್‌ ಹೇಳಿದ್ದಾರೆ.

ಗುರುವಾರ, ದಾವಣಗೆರೆ ವಿವಿಯಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಆಯೋಜಿಸಿದ್ದ ಭಾರತದ ಗುಡಿ ಕೈಗಾರಿಕೆಗಳಲ್ಲಿ ಹೊರಹೊಮ್ಮುತ್ತಿರುವ ಸಮಸ್ಯೆಗಳು, ಸವಾಲುಗಳು ಮತ್ತು ಅವಕಾಶಗಳು ಕುರಿತ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ, ಮಾತನಾಡಿದ ಅವರು, ಭಾರತ ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ಗುರುತಿಸಿಕೊಳ್ಳಲು ತಾಂತ್ರಿಕತೆಯಲ್ಲಿ ಅನ್ವೇಷಣೆ ಕೈಗೊಳ್ಳುವ ಅಗತ್ಯವಿದೆ ಎಂದರು.

ಇಂದು ಹಲವಾರು ಕ್ಷೇತ್ರಗಳಲ್ಲಿ ಹೇರಳವಾದ ಉದ್ಯೋಗವಕಾಶಗಳಿದ್ದು, ಆ ಅವಕಾಶಗಳನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳಬೇಕಿದೆ. ಪ್ರಸ್ತುತ ಹೋಮ್‌ ನರ್ಸಿಂಗ್‌ ಸೇವೆ ಸಹ ಪ್ರಾಮುಖ್ಯತೆ ಪಡೆಯುತ್ತಿದ್ದು, ಮಹಿಳಾ ಸಬಲೀಕರಣಕ್ಕೆ ಸಾಥ್‌ ನೀಡುತ್ತಿದೆ. ಮೀಸಲಾತಿಗಾಗಿ ಕಾಯುತ್ತಾ ಕೂರದೇ ಸತತ ಪರಿಶ್ರಮ ಪಟ್ಟಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ದೇಶದ ಆರ್ಥಿಕ ನೀತಿ ಅರ್ಥ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ಯಶಸ್ಸು ನಿಶ್ಚಿತ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ದಾವಣಗೆರೆ ವಿವಿಯ ಕುಲಪತಿ ಪ್ರೊ| ಎಸ್‌ ವಿ. ಹಲಸೆ ಮಾತನಾಡಿ, ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಿದಾಗ ದೇಶದ ಆರ್ಥಿಕತೆ ಸುಸ್ಥಿರವಾಗುತ್ತದೆ. ಗುಡಿ ಕೈಗಾರಿಕೆಗಳಲ್ಲಿ ಹಣದ ಚಲಾವಣೆ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಸ್ನಾತಕೋತ್ತರ ವಿದ್ಯಾಭ್ಯಾಸದೊಂದಿಗೆ ವಾಣಿಜ್ಯ ಕ್ಷೇತ್ರದಲ್ಲಿ ಪರ್ಯಾಯ ಶಿಕ್ಷಣ ಪಡೆದರೆ ಹೆಚ್ಚಿನ ಉದ್ಯೋಗವಕಾಶ ದೊರೆಯಲಿದೆ ಎಂದು ಸಲಹೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ| ಪಿ. ಕಣ್ಣನ್‌ ಮಾತನಾಡಿ, ದೇಶದ ಆರ್ಥಿಕತೆಯ ಒಟ್ಟು ಲಾಭದಲ್ಲಿ ಶೇ. 45 ಭಾಗ ಗುಡಿ ಕೈಗಾರಿಕೆಗಳಿಂದಲೇ ಲಭ್ಯವಾಗುತ್ತಿದೆ. ಜನರ ಮೂಲಭೂತ ಅವಶ್ಯಕತೆ ಪೂರೈಸುವಲ್ಲಿ ವಾಣಿಜ್ಯ ವಹಿವಾಟಿನ ಬಗ್ಗೆ ಗಮನ ಹರಿಸಬೇಕಿದೆ ಎಂದರು. ಒಂದು ದೇಶದ ಅಭಿವೃದ್ಧಿಯಲ್ಲಿ ಕೈಗಾರಿಕೆಗಳ ಅವಶ್ಯಕತೆ ಹೆಚ್ಚಾಗಿದ್ದು, ಅದು ಲಾಭದ ದೃಷ್ಟಿಯಿಂದ ಕೇಂದ್ರ ಬಿಂದುವಾಗಿದೆ. ಈ ದೆಸೆಯಲ್ಲಿ ವಿದ್ಯಾರ್ಥಿಗಳು ವಾಣಿಜ್ಯಶಾಸ್ತ್ರದ ಬಗ್ಗೆ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಸರ್ಕಾರ ಕೋಟ್ಯಾಂತರ ರೂ. ವಿನಿಯೋಗಿಸುತ್ತಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗಪಡಿಸಿಕೊಳ್ಳಬೇಕು. ಅರ್ಹತೆಗೆ ತಕ್ಕಂತೆ ಉದ್ಯೋಗ ಸೃಷ್ಟಿಯಾದರೆ ಭಾರತದ ನಿರುದ್ಯೋಗ ಸಮಸ್ಯೆ ನಿರ್ಮೂಲನೆಯಾಗಿ ದೇಶದ ಸುಸ್ಥಿರತೆ ಬಗ್ಗೆ ನಿರಾತಂಕವಾಗಿರಬಹುದು ಎಂದು ಹೇಳಿದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ| ಪಿ. ಲಕ್ಷ್ಮಣ್‌, ಪ್ರಾಧ್ಯಾಪಕರಾದ ಪ್ರೊ| ಎಚ್.ಎಸ್‌. ಅನಿತಾ, ಪ್ರೊ| ಸೀರಪ್ಪ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.