ಕ್ಷಮೆ ಕೇಳುವ ಯಾವುದೇ ತಪ್ಪು ಮಾಡಿಲ್ಲ

Team Udayavani, Apr 30, 2019, 12:33 PM IST

gul-5

ದಾವಣಗೆರೆ: ನೇರ್ಲಿಗೆ ಘಟನೆಗೆ ಸಂಬಂಧಿಸಿದಂತೆ ಕ್ಷಮೆ ಕೇಳುವಂತಹ ಯಾವುದೇ ತಪ್ಪು ಮಾಡಿಯೇ ಇಲ್ಲ. ಹಾಗಾಗಿ ಕ್ಷಮೆ ಕೇಳುವುದಿಲ್ಲ ಎಂದು ಜಿಪಂ ಮಾಜಿ ಅಧ್ಯಕ್ಷ ಡಾ| ವೈ. ರಾಮಪ್ಪ ಹೇಳಿದ್ದಾರೆ.

ಡಾ| ವೈ. ರಾಮಪ್ಪ 30 ವರ್ಷದ ಸಾರ್ವಜನಿಕ ಬದುಕಿನಲ್ಲಿ ಜಾತಿಯ ವಿಷ ಬೀಜ ಬಿತ್ತುವ, ಸಾಮರಸ್ಯ ಹಾಳು ಮಾಡುವಂತಹ ಕೆಲಸ ಮಾಡಿಯೇ ಇಲ್ಲ. ನೇರ್ಲಿಗೆ ಘಟನೆಗೆ ಸಂಬಂಧಿಸಿದಂತೆ ನನ್ನಿಂದ ಯಾವುದೇ ರೀತಿಯ ತಪ್ಪು ಆಗಿಲ್ಲ, ಹಾಗಾಗಿ ಆ ವಿಚಾರವಾಗಿ ಕ್ಷಮೆ ಕೊರುವ ಪ್ರಶ್ನೆಯೇ ಇಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಮಪ್ಪ ವಿದ್ಯಾವಂತರು, ಡಬ್ಬಲ್ ಡಿಗ್ರಿ ಪಡೆದವರು. ಚುನಾವಣೆ ಎಂದರೆ ಸಣ್ಣ ಪುಟ್ಟ ಘಟನೆ ಸಹಜ. ಅದನ್ನು ಮುಂದುವರೆಸದೆ ಪೂಜ್ಯರ ಬಳಿ ಕ್ಷಮೆ ಕೋರುವ ಮೂಲಕ ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌ ಹೇಳಿದ್ದಾರೆ. ನಾನು ಕ್ಷಮೆ ಕೋರುವ ತಪ್ಪು ಮಾಡಿಯೇ ಇಲ್ಲ. ಕ್ಷಮೆ ಕೋರುವುದಿಲ್ಲ ಎಂದು ಪ್ರತಿಪಾದಿಸಿದರು.

ನಾನು ಎಲ್ಲಾ ಸ್ವಾಮೀಜಿಯವರು, ಪೂಜ್ಯರ ಬಳಿ ಹೋಗುತ್ತೇನೆ. ಕಾಲಿಗೆ ಬಿದ್ದು ನನ್ನ ಸಮಸ್ಯೆ ಬಗ್ಗೆ ಮಾತನಾಡುತ್ತೇನೆ. ಅದು ಸಹಜ. ಆದರೆ, ಈ ವಿಚಾರವಾಗಿ ನಾನು ಪ್ರಸ್ತಾಪ ಮಾಡುವುದೇ ಇಲ್ಲ. ಸ್ವಾಮೀಜಿಯವರೇ, ಏನಪ್ಪ ರಾಮಪ್ಪ ಎಂದು ಕೇಳಿದರೆ, ಈ ರೀತಿ ಆಗಿದೆ ಎಂದು ಹೇಳುತ್ತೇನೆ. ಆದರೆ, ಕ್ಷಮೆ ಕೋರುವುದಿಲ್ಲ ಎಂದು ಹೇಳಿದರು.

ನಾನು ಸಣ್ಣ ಘಟನೆಯನ್ನು ದೊಡ್ಡ ಘಟನೆಯನ್ನಾಗಿ ಮಾಡಿಲ್ಲ. ಈ ಎಲ್ಲಾ ಘಟನೆಗೆ ಯಾರು ಮೂಲ ಕಾರಣರೋ ಅವರನ್ನೇ ಕರೆದು, ಯಶವಂತರಾವ್‌ ಜಾಧವ್‌ ಬುದ್ಧಿ ಹೇಳಬಹುದಿತ್ತು. ಈ ಘಟನೆ ಬೆಳೆಯಲಿಕ್ಕೆ ನಾನು ಕಾರಣ ಅಲ್ಲ. ಯಾರೂ ಜಾತಿ ನಿಂದನೆ ಪ್ರಕರಣದಲ್ಲಿ ಇದ್ದಾರೋ ಅವರಲ್ಲಿ ಕೆಲವರು ಕಾರಣ. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಎಲ್ಲರನ್ನೂ ಬಂಧಿಸಬೇಕು ಮತ್ತು ಇನ್ನೂ ಕೆಲವರನ್ನು ಸೇರಿಸಲು ಅವಕಾಶ ನೀಡಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿಯವರಲ್ಲಿ ಕೋರುತ್ತೇನೆ. ಬಂಧನ ವಿಳಂಬವಾದಲ್ಲಿ ಮತ್ತೂಮ್ಮೆ ಮನವಿ ಮಾಡುತ್ತೇನೆ. ಪೊಲೀಸ್‌ ಇಲಾಖೆ ಬಗ್ಗೆ ಬಹಳ ಗೌರವ ಇದೆ ಎಂದರು.

ನೇರ್ಲಿಗೆ ಘಟನೆಗೆ ಸಂಬಂಧಿಸಿದಂತೆ ನನ್ನ ವಿರುದ್ಧ ಮಾಜಿ ಶಾಸಕ ಎಂ. ಬಸವರಾಜನಾಯ್ಕ, ಅಣಬೇರು ಶಿವಮೂರ್ತಿ, ಎ.ಆರ್‌. ಉಜ್ಜನಪ್ಪ, ದೇವರಮನೆ ಶಿವಕುಮಾರ್‌ ಮಾತನಾಡಿದ್ದಾರೆ. ನಾನು ಉದ್ಧಟತನ ಮಾಡಿಲ್ಲ. ಜಾತಿ ನಿಂದನೆ ಪ್ರಕರಣವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಮೂರ್ಖನಂತೆ ನನ್ನ ಕಾಲೇಜು ಕಟ್ಟಡಕ್ಕೆ ಕಲ್ಲು ಹೊಡೆಸಿ, ಸೆಲ್ಫಿ ತೆಗೆದುಕೊಂಡಿಲ್ಲ ಎಂದರು. ಯಾರ್ಯಾರು ಏನೇನು ಮಾತನಾಡಿದ್ದಾರೆ ಎಂಬುದರ ಬಗ್ಗೆ ಅವರೇ ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಂತಹವರಿಂದ ಬುದ್ಧಿವಾದ, ನಾಗರಿಕತೆ ಬಗ್ಗೆ ಹೇಳಿಸಿಕೊಳ್ಳುವ ನಾನಲ್ಲ. ವೀರಶೈವ-ಲಿಂಗಾಯತ ಪದವನ್ನೇ ಬಳಕೆ ಮಾಡಿಲ್ಲ. ಮಾಡುವುದೂ ಇಲ್ಲ. ಆದರೂ, ನಾನು ಯಾಕೆ ಕ್ಷಮೆ ಕೋರಬೇಕು ಎಂದು ಪ್ರಶ್ನಿಸಿದರು.

ಜಿಲ್ಲಾ ಭೋವಿ ಸಮಾಜದ ಮಾಜಿ ಅಧ್ಯಕ್ಷ ಹೇಮರಾಜ್‌, ಹೂವಿನಮಡು ಚನ್ನಬಸವಯ್ಯ, ಎಚ್. ತಿಮ್ಮಣ್ಣ, ಪ್ರಭಾಕರಯ್ಯ, ಸುಧಾಕರ್‌, ನಾಗರಾಜ್‌, ಶ್ರೀನಿವಾಸ್‌, ಪಿ. ಶ್ರೀನಿವಾಸ್‌, ಚಿರಡೋಣಿ ಮಂಜಪ್ಪ ಇತರರು ಇದ್ದರು.

ಟಾಪ್ ನ್ಯೂಸ್

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.