ಹರಿಹರದಲ್ಲಿ ಮೂವರಿಗೆ ಸೋಂಕು

Team Udayavani, Jul 1, 2020, 9:16 AM IST

ಹರಿಹರದಲ್ಲಿ ಮೂವರಿಗೆ ಸೋಂಕು

ಹರಿಹರ: ಇಲ್ಲಿನ ಗಾಂಧಿ ನಗರದ 34 ವರ್ಷದ ವ್ಯಕ್ತಿ ಸೇರಿ ಮೂವರಿಗೆ ಕೋವಿಡ್ ಸೋಂಕು ತಗುಲಿರುವುದು ಮಂಗಳವಾರ ವರದಿಯಾಗಿದೆ.

ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿಗಳ ವಾಹನ ಚಾಲಕನೆಂದು ಹೇಳಲಾಗಿರುವ ಈ ವ್ಯಕ್ತಿ, ಗಾಂಧಿನಗರದ ಎರಡನೇ ಕ್ರಾಸ್‌ ನಿವಾಸಿ. ಉಸಿರಾಟ ಸಮಸ್ಯೆ ಎಂದು ಜೂ. 26 ರಂದು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ತೆರಳಿದಾಗ ಕೋವಿಡ್‌ ಪರೀಕ್ಷೆ ಮಾಡಿಸಲಾಗಿದ್ದು, ಖಾಸಗಿ ಪ್ರಯೋಗಾಲಯದ ವರದಿ ನೆಗೆಟಿವ್‌ ಬಂದಿತ್ತು. ಆದರೆ ಉಸಿರಾಟ ಸಮಸ್ಯೆ ನಿವಾರಣೆಯಾಗದ ಕಾರಣ ಜು. 28ರಂದು ಮತ್ತೆ ಆಸ್ಪತ್ರೆಗೆ ದಾಖಲಾದಾಗ ಮತ್ತೂಮ್ಮೆ ಗಂಟಲು ದ್ರಾವಣ ಪರೀಕ್ಷೆಗೆ ಕಳಿಸಿದ್ದು, ಪರೀಕ್ಷಾ ವರದಿ ಪಾಸಿಟಿವ್‌ ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೌರಾಯುಕ್ತೆ ಎಸ್‌. ಲಕ್ಷ್ಮೀ, ನಗರಸಭೆ ಸಿಬ್ಬಂದಿ ಹಾಗೂ ಪೊಲೀಸ್‌ ಸಿಬ್ಬಂದಿಗಳಿಂದ ಗಾಂಧಿ  ನಗರದ 2 ಮತ್ತು 3ನೇ ಕ್ರಾಸ್‌ನ ಪ್ರದೇಶಕ್ಕೆ ಬ್ಯಾರಿಕೇಡ್‌ ಹಾಕಿಸಿದರು. ಈ ಕಂಟೇನ್ಮೆಂಟ್‌ ಝೋನ್‌ನಲ್ಲಿ 47 ಮನೆಯ 215 ನಿವಾಸಿಗಳಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೋಂಕಿತ ಕುಟುಂಬದ 8 ಸದಸ್ಯರನ್ನು ಕ್ವಾರಂಟೈನ್‌ ಕೇಂದ್ರಕ್ಕೆ ಕಳುಹಿಸಿದ್ದು, ಉಳಿದ ಸಂಪರ್ಕಿತರ ಪತ್ತೆ ನಡೆಸಲಾಗುತ್ತಿದೆ. ನಗರದ ಜಯಶ್ರೀ ಟಾಕೀಸ್‌ ಹಿಂಭಾಗದ ಚಿನ್ನಪ್ಪ ಕಾಂಪೌಂಡ್‌ ನಿವಾಸಿಯೊಬ್ಬರು ಹಾಗೂ ವಿದ್ಯಾನಗರ ಸಿ ಬ್ಲಾಕ್‌ನ ನಿವಾಸಿಯೊಬ್ಬರಲ್ಲೂ ಕೋವಿಡ್‌ ಸೋಂಕು ದೃಢಪಟ್ಟಿದೆ.

ಚಿನ್ನಪ್ಪ ಕಾಂಪೌಂಡ್‌ನ‌ 40 ವರ್ಷದ ಟಿಬಿ ಕಾಯಿಲೆ ಇದ್ದ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್‌ ಬಂದಿದೆ. ವಿದ್ಯಾನಗರ ಸಿ ಬ್ಲಾಕ್‌ನ 33 ವರ್ಷದ ವ್ಯಕ್ತಿ ಕೆಮ್ಮು, ಶೀತ, ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದಾಗ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ರಾತ್ರಿ ವೇಳೆಗೆ ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಎರಡೂ ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳನ್ನಾಗಿಸಿದ್ದು, ಕುಟುಂಬಸ್ಥರನ್ನು ಕ್ವಾರಂಟೈನ್‌ಗೆ ಕಳಿಸುತ್ತಿದ್ದಾರೆ. ತಾಲೂಕಿನಲ್ಲಿ ಸೋಂಕು ತಗುಲಿದವರ ಸಂಖ್ಯೆ 22ಕ್ಕೆ ಏರಿದಂತಾಗಿದೆ. 12 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.  ತಾಲೂಕಿನ ಮೊದಲ ಪ್ರಕರಣ ಕಂಡು ಬಂದ ರಾಜನಹಳ್ಳಿ, ನಗರದ ಅಗಸರ ಬೀದಿ, ಎ.ಕೆ. ಕಾಲೋನಿ, ಇಂದಿರಾನಗರ, ಗಂಗಾನಗರ, ಈಗ ಗಾಂಧಿನಗರ ಸೇರಿ ಒಟ್ಟು 6 ಪ್ರದೇಶಗಳನ್ನು ಕಂಟೇನ್ಮೆಂಟ್‌ ಝೋನ್‌ ಗಳೆಂದು ಗುರುತಿಸಲಾಗಿದೆ.

ಟಾಪ್ ನ್ಯೂಸ್

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.