Udayavni Special

ಹಂಪಿಯಲ್ಲಿ ತುಂಗಭದ್ರಾ ಆರತಿ ವೈಭವ


Team Udayavani, Feb 27, 2019, 11:55 AM IST

27-february-17.jpg

ಹೊಸಪೇಟೆ: ಪವಿತ್ರ ತುಂಗಭದ್ರಾ ನದಿಯ ದಡದ ಎಲ್ಲಿ ನೋಡಿದರಲ್ಲಿ ದೀಪಗಳ ಸಾಲು ಸಾಲು.. ಬೆಳಕಿನ ವೈಭವ. ನದಿಯಲ್ಲಿ ತೇಲುತ್ತ ಸಾಗಿದ ಸಾವಿರಾರು ದೀಪಗಳು. ನದಿಯಲ್ಲಿನ ಬಂಡೆಗಳ ಮೇಲೂ ಉರಿದ ಹಣತೆ…ನದಿಗೆ ಬಾಗಿನ ಸಮರ್ಪಣೆ.

ಇದು ಹಂಪಿ ಉತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ಐತಿಹಾಸಿಕ ಹಂಪಿಯ ತುಂಗಭದ್ರಾ ನದಿ ಕಂಡದಲ್ಲಿ ಕಂಡ ದೃಶ್ಯ. ಹಂಪಿ ಉತ್ಸವ ನಿಮಿತ್ತ ಐತಿಹಾಸಿಕ ಹಂಪಿ ವಿರೂಪಾಕ್ಷೇಶ್ವರ ದೇವಾಲಯದ ಸಮೀಪದಲ್ಲಿರುವ ತುಂಗಭದ್ರಾ ನದಿ ತೀರದಲ್ಲಿ ಮಂಗಳವಾರ ‘ತುಂಗಭದ್ರಾ ಆರತಿ’ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ನದಿದಡದಲ್ಲೇ ಸುಂದರ ಮಂಟಪ ನಿರ್ಮಿಸಿ ತಾಯಿ ಭುವನೇಶ್ವರಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.

ತುಂಗಭದ್ರಾ ಆರತಿ ಮಹೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ ಚಾಲನೆ ನೀಡಿದರು. ಗಂಗಾ ಪೂಜೆ ನೆರವೇರಿಸಿ ನಂತರ ತುಂಗಭದ್ರೆಗೆ ಬಾಗಿನ ಅರ್ಪಿಸುವ ಮೂಲಕ ಹಂಪಿ ಉತ್ಸವಕ್ಕೆ ಚಾಲನೆ ನೀಡಿದರು. ಶ್ರೀ ವಿದ್ಯಾರಣ್ಯ ಭಾರತೀ ಸ್ವಾಮೀಜಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಾನಾ ಬಗೆಯ ಆರತಿಯನ್ನು ಬೆಳಗಿ ಬಳಿಕ ಬಾಗಿನ ಅರ್ಪಿಸಿದರು. ಭುವನೇಶ್ವರಿ ದೇವಿ ಹಾಗೂ ತುಂಗಭಧ್ರೆಗೆ ಕುಂಭ ಆರತಿ, ಅಲಿಗೆ ಆರತಿ, ಧೂಪದ ಆರತಿ ಸೇರಿದಂತೆ ವಿವಿಧ ಬಗೆಯ ಆರತಿಯನ್ನು ಬೆಳಗಲಾಯಿತು. ತುಂಗಭದ್ರೆಗೆ ಪೂಜೆ ಸಲ್ಲಿಸಿದ ಬಳಿಕ ಹತ್ತು ಸಾವಿರ ದೀಪಗಳನ್ನು ಹಚ್ಚಿ ನದಿಯಲ್ಲಿ ಬಿಡಲಾಯಿತು. ನದಿದಡ ಕಲ್ಲು-ಬಂಡೆಗಳ ಮೇಲೆ ಒಂದು ಸಾವಿರ ಮಣ್ಣಿನ ಹಣತೆಗಳನ್ನು ಬೆಳಗಿಸಲಾಯಿತು. ದೇವಸ್ಥಾನದ ಪ್ರಧಾನ ಆರ್ಚಕರಾದ ಪಿ. ಶ್ರೀನಾಥ್‌ ಶರ್ಮಾ, ಜೆ.ಎಸ್‌. ಶ್ರೀನಿನಾಥ ಶರ್ಮಾ, ಮುರಳಿಧರ ಶಾಸ್ತ್ರಿ , ಶಿವಪಾಣಿ, ಮಂಜುನಾಥ ಭಟ್‌ ಹಾಗೂ ರವಿಪಾಟೀಲ್‌ ಅವರ ತಂಡ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಆರಂಭದಲ್ಲಿ ಗಾಯಕಿ ಡಿ. ಶೈಲಜಾ ದೇವರಮನೆ ಮತ್ತು ತಂಡದ ಸದಸ್ಯರು, ಭಕ್ತಿ ಗೀತೆಗಳನ್ನು ಹಾಡಿ ರಂಜಿಸಿದರು. ವಿವಿಧ ಭಜನಾ ತಂಡಗಳು ಸೇರಿದಂತೆ ಸಹಸ್ರಾರು ಜನ ಸಾಕ್ಷಿಯಾದರು. ಬಾಣ-ಬಿರುಸು ಪ್ರದರ್ಶನ ನಡೆಯಿತು. ವಿಜಯನಗರ ರಾಜ ವಂಶಸ್ಥ ಕೃಷ್ಣದೇವರಾಯ, ಸಂಸದ ಉಗ್ರಪ್ಪ, ರಾಜ್ಯಸಭಾ ಸದಸ್ಯ ನಾರ್ಸೀ ಹುಸೇನ್‌, ತಾಪಂ ಸದಸ್ಯ ಪಾಲಪ್ಪ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ. ಶಿವಯೋಗಿ, ಜಿಲ್ಲಾಧಿಕಾರಿ ರಾಮಪ್ರಸಾತ್‌, ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌, ತಹಶೀಲ್ದಾರ್‌ ಎಚ್‌.ವಿಶ್ವನಾಥ, ಎಎಸ್ಪಿ ಲಾವಣ್ಯ, ಹಂಪಿ ಡಿವೈಎಸ್ಪಿ ಸಿನಿ ಮರಿಯಂ ಜಾರ್ಜ್‌, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಎಸ್‌.ಪಿ.ಬಿ. ಮಹೇಶ್‌ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಆತ್ಮಶಕ್ತಿಯಿಂದ ಕಾಯಿಲೆ ಶೀಘ್ರ ಗುಣಮುಖ

31ರಿಂದ ರಾಜ್ಯ ಮಟ್ಟದ ವೇಟ್‌ ಲಿಫ್ಟಿಂಗ್‌ ಸ್ಪರ್ಧೆ

31ರಿಂದ ರಾಜ್ಯ ಮಟ್ಟದ ವೇಟ್‌ ಲಿಫ್ಟಿಂಗ್‌ ಸ್ಪರ್ಧೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

fdkllkjhgfds

ಮುಂದಿನ ಚುನಾವಣೆಗೆ ಬೊಮ್ಮಾಯಿ ನೇತೃತ್ವ

davanagere news

ಬಿಎಸ್‌ವೈ ಪ್ರಚಾರಕ್ಕೆ ಬರ್ತಾರೆ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.