ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಗ್ರಾಮ ಲೆಕ್ಕಿಗ ದೂರು
Team Udayavani, Nov 15, 2022, 10:00 PM IST
ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಡಿ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯಾಮತಿ ತಾಲೂಕಿನ ಕುಂಕುವ ವೃತ್ತದ ಗ್ರಾಮಲೆಕ್ಕಿಗ ಎಸ್.ಪ್ರಶಾಂತ್‌ಕುಮಾರ್ ಎಂಬುವವರು, ಶಾಸಕ ರೇಣುಕಾಚಾರ್ಯ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವ ಜತೆಗೆ ತಮ್ಮನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕೋರಿ ದೂರು ಸಲ್ಲಿಸಿದ್ದಾರೆ.
ರೇಣುಕಾಚಾರ್ಯ ವಿರುದ್ಧ ಐಪಿಸಿ ಕಲಂ 186 ಅಡಿಯಲ್ಲಿ ದೂರು ದಾಖಲಾಗಿದೆ. ಈಚೆಗೆ ನ್ಯಾಮತಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದ ಮನೆಗಳಿಗೆ ಹಾನಿಯಾಗಿತ್ತು. ಕುಂಕುವ ವೃತ್ತ ವ್ಯಾಪ್ತಿಯ ಕೂಗೆನಹಳ್ಳಿ ಗ್ರಾಮದ ಕೆಲವರಿಗೆ ಪರಿಹಾರ ಬರುವಂತೆ ವರದಿ, ಶ್ರೇಣಿ ಬದಲಾಯಿಸುವಂತೆ ತಮ್ಮ ಮೇಲೆ ಒತ್ತಡ ಹಾಕಿದ್ದಲ್ಲದೆ ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಪ್ರಶಾಂತ್‌ಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ
ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !
ವೇತನ ಹೆಚ್ಚಳ ಬೇಡಿಕೆ; ಮಾರ್ಚ್ 24ರ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ
MUST WATCH
ಹೊಸ ಸೇರ್ಪಡೆ
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ಎ. 2 ರಂದು ಸಿತಾರ್-ಬಾನ್ಸುರಿ ಜುಗಲ್ ಬಂದಿ “ಬಸಂತ್ ಉತ್ಸವ್’
ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ