ಗಮನ ಸೆಳೆದ ಮಹಿಳೆಯರ ಮತದಾನ ಜಾಗೃತಿ ಜಾಥಾ

Team Udayavani, Apr 29, 2018, 4:04 PM IST

29-April-23.jpg

ಬಳ್ಳಾರಿ: ನೈತಿಕ ಮತದಾನದ ಮಹತ್ವ ತಿಳಿಸುವ ಮತ್ತು ಕಡ್ಡಾಯ ಮತದಾನಕ್ಕೆ ಉತ್ತೇಜಿಸುವ ಹಾಗೂ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸುವ ಸಲುವಾಗಿ ವೃತ್ತಿನಿರತ ಮಹಿಳೆಯರಿಂದ ನಗರದಲ್ಲಿ ಶನಿವಾರ ಸಂಜೆ ಮತದಾನದ ಜಾಗೃತಿ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಸ್ವೀಪ್‌ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಜಾಥಾಕ್ಕೆ ನಗರದ ಮುನಿಸಿಪಲ್‌ ಕಾಲೇಜು ಮೈದಾನದಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾ ಧಿಕಾರಿ ರಾಮ್‌ ಪ್ರಸಾತ್‌ ಮನೋಹರ್‌ ಚಾಲನೆ ನೀಡಿದರು.

ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ, ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗೇಶ ಬಿಲ್ವಾ, ಜಿಲ್ಲಾ ಸ್ವೀಪ್‌ ಐಕಾನ್‌ ಆಗಿರುವ ದಿವ್ಯಾಂಗಿನಿ ಲಕ್ಷ್ಮೀದೇವಿ ಸೇರಿದಂತೆ 2 ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡು ನೈತಿಕ ಮತದಾನದ ಕುರಿತು ಅರಿವು ಮೂಡಿಸಿದರು.

ಮುನ್ಸಿಪಲ್‌ ಕಾಲೇಜು ಮೈದಾನದಿಂದ ಆರಂಭವಾದ ಜಾಥಾವು ಇಂದಿರಾಗಾಂಧಿ ವೃತ್ತ, ಗಡಗಿ ಚೆನ್ನಪ್ಪ ವೃತ್ತ, ಮೀನಾಕ್ಷಿ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್‌ಪೇಟೆ ಪೊಲೀಸ್‌ಠಾಣೆ, ತೇರು ಬೀದಿ, ಜೈನ್‌ ಮಾರ್ಕೆಟ್‌, ಎಚ್‌.ಆರ್‌. ಗವಿಯಪ್ಪ ವೃತ್ತದವರೆಗೆ ತೆರಳಿತು.

ಈ ಜಾಥಾದಲ್ಲಿ ಮಹಿಳೆಯರ ಡೊಳ್ಳು ಕುಣಿತ, ಮಹಿಳೆಯರಿಂದ ಅವೆಂಜರ್‌ 220ಸಿಸಿ ಬೈಕ್‌ ರೈಡಿಂಗ್‌, ಮಹಿಳೆಯರೇ ಸ್ವತಃ ಎತ್ತಿನಗಾಡಿ ಚಲಾಯಿಸಿರುವುದು ಗಮನ ಸೆಳೆಯಿತು. ಮಹಿಳಾ ಪೊಲೀಸ್‌ ಪೇದೆಗಳು, ಮಹಿಳಾ ವಕೀಲರು, ಮಹಿಳಾ ಶುಶ್ರೂಷಕಿಯರು, ಮಹಿಳಾ ವೈದ್ಯರು, ಗೃಹರಕ್ಷಕ ದಳದ ಮಹಿಳೆಯರು, ಎನ್‌ಸಿಸಿ ಮಹಿಳಾ ಕೆಡೆಟ್‌ಗಳು, ಮಹಿಳಾ ಕ್ರೀಡಾಪಟುಗಳು, ಆಶಾ ಕಾರ್ಯಕರ್ತೆಯರು, ಮಹಿಳಾ ಪೌರಕಾರ್ಮಿಕರು ಸಮವಸ್ತ್ರ ಧರಿಸಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಝಾನ್ಸಿ ರಾಣಿ ಲಕ್ಷ್ಮಿಭಾಯಿ, ಓನಕೆ ಒಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಮೀರಾಕುಮಾರಿ ಸೇರಿದಂತೆ ರಾಷ್ಟ್ರಮಟ್ಟದ ಮಹಿಳಾ ಸಾಧಕರ ವೇಷಭೂಷಣ ಧರಿಸಿ ಜಾಥಾದಲ್ಲಿ ಭಾಗವಹಿಸಿದ್ದರು. ಇವರೊಂದಿಗೆ ಲಂಬಾಣಿ, ಮಾರ್ವಾಡಿ, ಕೊಡಗು, ಮುಸ್ಲಿಂ, ಕ್ರಿಶ್ಚಿಯನ್‌, ಪಂಜಾಬಿ, ಇಳಕಲ್‌ ಸೀರೆ, ಮಹಾರಾಷ್ಟ್ರ ವಸ್ತ್ರಧಾರಣೆ ಸೇರಿದಂತೆ ವಿವಿಧ ರೀತಿಯ ಸಾಂಪ್ರಾದಾಯಿಕ ಉಡುಪುಗಳನ್ನು ಧರಿಸಿ ಜಾಥಾದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಜಿಲ್ಲಾ ಚುನಾವಣಾ ಕಾರಿ ಡಾ| ವಿ.ರಾಮ್‌ ಪ್ರಸಾತ್‌ ಮನೋಹರ್‌ ಮತ್ತು ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಮಾತನಾಡಿ, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು. ತಾವು ನೈತಿಕವಾಗಿ ತಮ್ಮ ಹಕ್ಕು ಚಲಾಯಿಸುವುದರ ಜತೆಗೆ ಸುತ್ತಮುತ್ತಲಿನವರಿಗೂ ಮತಚಲಾಯಿಸುವಂತೆ ಸಲಹೆ ನೀಡಬೇಕು ಎಂದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.