ಗುರುವಾರ ಮಳೆಗೆ ಗದ್ದೆಗಳು ಜಲಾವೃತ
Team Udayavani, Sep 22, 2018, 12:56 PM IST
ಹೊನ್ನಾಳಿ: ಗುರುವಾರ ಮಧ್ಯಾಹ್ನ ಒಂದೂವರೆ ಗಂಟೆ ಕಾಲ ಮತ್ತು ರಾತ್ರಿ ನಾಲ್ಕೈದು ತಾಸು ಸುರಿದ ಉತ್ತರ ಮಳೆಯ
ಆರ್ಭಟಕ್ಕೆ ಪಟ್ಟಣಕ್ಕೆ ಸಮೀಪದಲ್ಲಿನ ನೂರಾರು ಹೆಕ್ಟೇರ್‌ಗಳಷ್ಟು ಭತ್ತದ ಗದ್ದೆಗಳು ಜಲಾವೃತವಾಗಿವೆ.
ಇಲ್ಲಿನ ಹಿರೇಕಲ್ಮಠದ ಸುತ್ತಮುತ್ತಲಿನ ಪ್ರದೇಶ ಮತ್ತು ಸುಂಕದಕಟ್ಟೆ ಮಾರ್ಗದಲ್ಲಿನ ಭತ್ತದ ಗದ್ದೆಗಳು ಮಳೆಯಿಂದ
ಜಲಾವೃತವಾಗಿ ಬೆಳೆ ಹಾನಿಯ ಭೀತಿ ಎದುರಾಗಿದೆ. ಈ ಪ್ರದೇಶದ ಜಮೀನುಗಳಿಗೆ ತೆರಳುವ ರಸ್ತೆಗಳಲ್ಲಿಯೂ ನೀರು
ಹರಿಯುತ್ತಿದ್ದು, ಶುಕ್ರವಾರ ಬೆಳಗ್ಗೆಯೂ ನೀರಿನ ಹರಿವು ನಿಂತಿರಲಿಲ್ಲ. ಪರಿಣಾಮವಾಗಿ ಈ ಮಾರ್ಗದಲ್ಲಿ ಸಂಚರಿಸುವರು ಪ್ರಯಾಸಪಡಬೇಕಾಯಿತು. ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ತಕ್ಷಣ ಸಮೀಕ್ಷೆ ನಡೆಸಿ ಮಳೆಯಿಂದ ಹಾನಿಗೊಳಗಾಗಿರುವ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು ಎಂದು ನೊಂದ ರೈತರು ಒತ್ತಾಯಿಸಿದ್ದಾರೆ.
ಮಳೆ ವಿವರ: ಹೊನ್ನಾಳಿ-10.4 ಮಿ.ಮೀ., ಸೌಳಂಗ-1ಮಿ.ಮೀ., ಬೆಳಗುತ್ತಿ-5.8 ಮಿ.ಮೀ., ಹರಳಹಳ್ಳಿ-33 ಮಿ.ಮೀ., ಗೋವಿನಕೋವಿ- 48.6ಮಿ.ಮೀ., ಕುಂದೂರು- 17.2 ಮಿ.ಮೀ., ಸಾಸ್ವೆಹಳ್ಳಿ- 21.4 ಮಿ.ಮೀ. ಮಳೆ ದಾಖಲಾಗಿದೆ.
ಗುಡುಗು ಮಳೆಗೆ ಕುಸಿದ ಮನೆ
ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಹೋಬಳಿಯ ಹಿರೇಮೆಗಳಗೆರೆ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಗುರುವಾರ ರಾತ್ರಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಮಳೆಯಿಂದ ಹಿರೇಮಗಳಗೆರೆ ಗ್ರಾಮದ ಸಣ್ಣ ಹನುಮಂತಪ್ಪ ಎಂಬುವವರ ಮನೆ ಕುಸಿದು ಬಿದ್ದಿದೆ.
ಏಕಾಏಕಿ ಸುರಿದ ಮಳೆಯಿಂದ ಜಾಗೃತರಾದ ಕುಟುಂಬದ ಸದಸ್ಯರು ಮನೆಯಿಂದ ಹೊರ ಬರುತ್ತಿದ್ದಂತೆ ಚಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಮನೆಯಲ್ಲಿದ್ದ ದಿನ ಬಳಕೆಯ ವಸ್ತುಗಳು ಹಾನಿಗೊಂಡಿದೆ. ಅರಸೀಕೆರೆ ಹೋಬಳಿಯ ಕಮತ್ತಹಳ್ಳಿ, ನಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಮಹಾ ಸಾಧಕಿ ಮಾನಸಿ ಜೋಶಿ; ಕಾಲು ಕಳೆದುಕೊಂಡರೂ ಆತ್ಮವಿಶ್ವಾಸ ಅಡ್ಡಿಯಾಗಲಿಲ್ಲ
ಅಂಬಾನಿ ನಿವಾಸದ ಬಳಿ ಜಿಲೆಟಿನ್ ತುಂಬಿದ ಕಾರು ನಿಲ್ಲಿಸಿದ್ದು ನಾವೇ ಎಂದ ಜೈಶ್-ಉಲ್-ಹಿಂದ್
ಬ್ರಾಹ್ಮಣರಿಂದ ಅರ್ಚಕ ವೃತ್ತಿ ಕಿತ್ತುಕೊಳ್ಳುವ ಪ್ರಯತ್ನ ಸರ್ಕಾರ ಮಾಡುತ್ತಿದೆ :ಪೇಜಾವರ ಶ್ರೀ
ಬಿಗ್ ಬಾಸ್ ಮನೆಗೆ ನಟಿ ಶುಭಾ ಪೂಂಜಾ ಜತೆ ಎಂಟ್ರಿ ಕೊಟ್ರು ಕನ್ನಡದ ನಟ…ಯಾರವರು ?
ಧನ್ವಂತರಿ ದೇವರ ಹಾಡು ‘ಭಜರಂಗಿ 2’ ಸಿನಿಮಾದಲ್ಲಿ ವಿಶೇಷ : ನಾಗೇಂದ್ರ ಪ್ರಸಾದ್