ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ: ಶಾಸಕ ರಾಮಚಂದ್ರ

Team Udayavani, May 22, 2022, 3:05 PM IST

9politics

ಜಗಳೂರು: ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. 25 ವರ್ಷಗಳ ಹಿಂದೆಯೇ ಬಂದಿದ್ದು, ಇದೇ ಕ್ಷೇತ್ರದ ಮಗನಾಗಿದ್ದೇನೆ ಎಂದು ಶಾಸಕ ಎಸ್‌.ವಿ. ರಾಮಚಂದ್ರ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದವನಲ್ಲ ಎಂದು ಮಾಜಿ ಶಾಸಕರು ಸಭೆ-ಸಮಾರಂಭಗಳಲ್ಲಿ ಪದೇ ಪದೇ ಹೇಳುತ್ತಾರೆ. ಆದರೆ ಈ ಕ್ಷೇತ್ರದ ಮಗನವಾಗಿದ್ದು ಅರಸಿಕೆರೆ ಹೋಬಳಿ ವ್ಯಾಪ್ತಿಯಲ್ಲಿ ಮನೆ ಮತ್ತು ಜಮೀನು ಇದೆ. 1998ರಲ್ಲಿ ಕ್ಷೇತ್ರಕ್ಕೆ ಕಬಡ್ಡಿ ಕ್ರೀಡೆ ಪರಿಚಯಿಸಿ ರಾಜಕಾರಣದಲ್ಲಿ ತೊಡಗಿದ್ದೇನೆ. ಜನರು ನನ್ನನ್ನು ಮೆಚ್ಚಿ ಮೂರು ಬಾರಿ ಆಶೀರ್ವಾದ ಮಾಡಿದ್ದಾರೆ ಎಂದರು.

ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ ತಾಲೂಕಿನ 57 ಕೆರೆ ತುಂಬಿಸುವ ಯೋಜನೆ ಸಾಕಾರಗೊಂಡಿದೆ. ಅಲ್ಲದೆ ವರುಣನ ಕೃಪೆಯಿಂದ ತುಪ್ಪದಹಳ್ಳಿ ಕೆರೆ ಕೋಡಿ ಬಿದ್ದಿದ್ದು, ಕೆರೆ ಪ್ರದೇಶಕ್ಕೆ ಮೇ 24ರಂದು ಸಿರಿಗೆರೆ ಶ್ರೀಗಳು ಭೇಟಿ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ರಾಜಕೀಯ ಮುತ್ಸದ್ಧಿಗಳು, ರೈತರು ತುಪ್ಪದಹಳ್ಳಿ ಕೆರೆ ವೀಕ್ಷಣೆ ಮಾಡಲಿದ್ದಾರೆ ಎಂದ ಶಾಸಕರು, ತಾಲೂಕಿನಲ್ಲಿ ರಸಗೊಬ್ಬರ, ಬಿತ್ತನೆ ಬೀಜ ದಾಸ್ತಾನು ಸಾಕಷ್ಟಿದೆ. ದರ ಹೆಚ್ಚಳ ಸೇರಿದಂತೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಹೇಳಿದರು.

ತಾಲೂಕಿನಲ್ಲಿ 12 ಮನೆಗಳು ಮಳೆಯಿಂದ ಹಾನಿಗೊಳಗಾಗಿದ್ದು ತಹಶೀಲ್ದಾರ್‌ ಮೂಲಕ ಪರಿಶೀಲನೆ ನಡೆಸಿ ಭಾಗಶಃ ಹಾನಿಗೊಳಗಾದವರಿಗೆ 50 ಸಾವಿರದಿಂದ 3 ಲಕ್ಷದವರೆಗೂ ಸರ್ಕಾರದಿಂದ ಪರಿಹಾರ ಒದಗಿಸಲಾಗುವುದು. ಚಿಕ್ಕ ಅರಕೆರೆಯಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು ಕುಟುಂಬಕ್ಕೆ ಸಾಂತ್ವನ ಹೇಳಿ 5 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಎಸ್‌ಎಸ್‌ ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಜಗಳೂರು ತಾಲೂಕು ಸತತ ಮೂರನೇ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಶೈಕ್ಷಣಿಕ ಪ್ರಗತಿ ಸಾಧಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಿ.ವಿ. ನಾಗಪ್ಪ, ಮಂಡಲ ಅಧ್ಯಕ್ಷ ಎಚ್‌.ಸಿ. ಮಹೇಶ್‌, ಪಪಂ ಅಧ್ಯಕ್ಷ ಸಿದ್ದಪ್ಪ, ಮಾಜಿ ಅಧ್ಯಕ್ಷ ಆರ್‌. ತಿಪ್ಪೇಸ್ವಾಮಿ, ಉಪಾಧ್ಯಕ್ಷೆ ಮಂಜಮ್ಮ, ಸದಸ್ಯರಾದ ನವೀನ್‌, ದೇವರಾಜ್‌, ಪಾಪಲಿಂಗಪ್ಪ, ಮುಖಂಡರಾದ ನಾಗರಾಜ್‌, ಗೌರಿಪುರ ಶಿವಣ್ಣ, ಬಿಸ್ತುವಳ್ಳಿ ಬಾಬು, ಹನುಮಂತಪ್ಪ, ಇಂದ್ರೇಶ್‌, ವಕೀಲ ಹನುಮಂತಪ್ಪ, ಪೂಜಾರ ಸಿದ್ದಪ್ಪ, ಓಬಳೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.