ಮಾಸಾಂತ್ಯಕ್ಕೆ ಖಾಸಗಿ ಬಸ್‌ ನಿಲ್ದಾಣ ಹೈಸ್ಕೂಲ್ ಮೈದಾನಕ್ಕೆ ಶಿಫ್ಟ್‌!

ಸುಮಾರು 3 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ತಾತ್ಕಾಲಿಕ ಬಸ್‌ ನಿಲ್ದಾಣ

Team Udayavani, May 20, 2019, 10:47 AM IST

20-May-7

ದಾವಣಗೆರೆ: ಹೈಸ್ಕೂಲ್ ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಖಾಸಗಿ ಬಸ್‌ ನಿಲ್ದಾಣ.

ದಾವಣಗೆರೆ: ನಗರದ ಖಾಸಗಿ ಬಸ್‌ ನಿಲ್ದಾಣ ಮಾಸಾಂತ್ಯಕ್ಕೆ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಬಸ್‌ ನಿಲ್ದಾಣಕ್ಕೆ ಸ್ಥಳಾಂತರವಾಗಲಿದೆ!.

ಕೇಂದ್ರ ಸರ್ಕಾರದ ಅತೀ ಮಹತ್ವಾಕಾಂಕ್ಷಿತ ಸ್ಮಾರ್ಟ್‌ಸಿಟಿ ಯೋಜನೆಯ ಪ್ರಥಮ ಹಂತದಲ್ಲೇ ಆಯ್ಕೆಯಾಗಿರುವ ದಾವಣಗೆರೆಯಲ್ಲಿ ಈಗಿರುವ ಖಾಸಗಿ ಬಸ್‌ ನಿಲ್ದಾಣ ಜಾಗದಲ್ಲೇ ಸ್ಮಾರ್ಟ್‌ ಸಿಟಿಗೆ ಅನುಗುಣವಾಗಿ 25 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ, ಸುಸಜ್ಜಿತವಾದ ಖಾಸಗಿ ಬಸ್‌ ನಿಲ್ದಾಣ ನಿರ್ಮಾಣವಾಗಲಿದೆ.

ಇನ್ನು ಕೆಲವೇ ದಿನಗಳಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಖಾಸಗಿ ಬಸ್‌ ನಿಲ್ದಾಣ ಕಾಮಗಾರಿ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಈಗಿನ ಖಾಸಗಿ ಬಸ್‌ ನಿಲ್ದಾಣವನ್ನು ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಖಾಸಗಿ ಬಸ್‌ ನಿಲ್ದಾಣಕ್ಕೆ ಸ್ಥಳಾಂತರಿಸಲಾಗುವುದು.

ದಾವಣಗೆರೆಯ ಖಾಸಗಿ ಬಸ್‌ ನಿಲ್ದಾಣ ಅತೀ ಪ್ರಮುಖ ಬಸ್‌ ನಿಲ್ದಾಣ. ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕ ಮಗಳೂರು, ಹಾಸನ ಜಿಲ್ಲೆಯ ಇತರೆಡೆಗೆ ಸಂಪರ್ಕ ಕಲ್ಪಿಸುವ ಈ ನಿಲ್ದಾಣಕ್ಕೆ ಪ್ರತಿ ನಿತ್ಯ ನೂರಾರು ಬಸ್‌ ಬಂದು ಹೋಗುತ್ತವೆ.

ನಗರದ ಖಾಸಗಿ ಬಸ್‌ ನಿಲ್ದಾಣದ ಆಧುನೀಕರಣದ ಪ್ರಸ್ತಾಪಕ್ಕೆ ಇತಿಹಾಸವೇ ಇದೆ. ನಗರಸಭೆ ಆಡಳಿತಾವಧಿಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ನಂತರವೂ ಖಾಸಗಿ ಬಸ್‌ ನಿಲ್ದಾಣ ಅಭಿವೃದ್ಧಿ ವಿಚಾರ ಕುರಿತು ಅನೇಕ ಸಾಮಾನ್ಯ ಸಭೆಗಳಲ್ಲಿ ಚರ್ಚೆ ನಡೆದಿತ್ತಾದರೂ ಕಾಲ ಕೂಡಿ ಬಂದಿರಲಿಲ್ಲ. ಈಗ ಸ್ಮಾರ್ಟ್‌ಸಿಟಿ ಯೋಜನೆಯಡಿ ಕಾಲಕೂಡಿ ಬಂದಿದೆ.

ಏನೇನು ವಿಶೇಷ…?: ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಾಣಗೊಳ್ಳಲಿರುವ ಖಾಸಗಿ ಬಸ್‌ ನಿಲ್ದಾಣ ಜಿ+2 ಮಾದರಿಯಲ್ಲಿ ಇರಲಿದೆ. ಬಸ್‌ ತಂಗುವ ಸ್ಥಳದಿಂದ ಹಿಡಿದು ಪ್ರತಿಯೊಂದು ಹಂತದಲ್ಲಿ ಅಕ್ಷರಶಃ ಸ್ಮಾರ್ಟ್‌ ಆಗಲಿದೆ. ಉದ್ದೇಶಿತ ನೂತನ ಖಾಸಗಿ ಬಸ್‌ ನಿಲ್ದಾಣದ ಸೆಲ್ಲಾರ್‌ನಲ್ಲಿ ಏಕ ಕಾಲಕ್ಕೆ 80 ರಿಂದ 100ರ ವರೆಗೆ ಬೈಕ್‌, ಕಾರು ಪಾರ್ಕಿಂಗ್‌ ವ್ಯವಸ್ಥೆ ಇರಲಿದೆ.

ಗ್ರೌಂಡ್‌ ಫ್ಲೋರ್‌ನಲ್ಲಿ 11-12 ಬಸ್‌ ನಿಲ್ಲಿಸಲು ಅಗತ್ಯ ಸ್ಥಳಾವಕಾಶ ಇರಲಿದೆ. ಮೊದಲ ಮಹಡಿಯಲ್ಲಿ ಸಾರ್ವಜನಿಕ ಶೌಚಾಲಯ, ವಾಣಿಜ್ಯ ಸಂಕೀರ್ಣ ತಲೆ ಎತ್ತಲಿವೆ. ಎರಡನೇ ಮಹಡಿಯಲ್ಲಿ ಶಾಪಿಂಗ್‌ ಮಾಲ್ಗಳು ಇರಲಿವೆ.

ಖಾಸಗಿ ಬಸ್‌ ನಿಲ್ದಾಣದ ಚಾವಣಿಯಲ್ಲಿ ಸೌರ ವಿದ್ಯುತ್‌ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್‌ ಉತ್ಪಾದನೆ ಮಾಡಲಾಗುವುದು. ಪ್ರಯಾಣಿಕರಿಗೆ ಸುಸಜ್ಜಿತ ಆಸನ, ವಯಸ್ಸಾದವರು, ಇತರರಿಗೆ ಅನುಕೂಲ ಆಗುವಂತೆ ವಾಕಿಂಗ್‌ ಪಾಥ್‌ ಸೌಲಭ್ಯ ಒದಗಿಸಲಾಗುವುದು. ಒಟ್ಟಾರೆಯಾಗಿ ಇನ್ನು ಮುಂದೆ ದಾವಣಗೆರೆಯಲ್ಲಿ ಖಾಸಗಿ ಬಸ್‌ ನಿಲ್ದಾಣ ಸ್ಮಾರ್ಟ್‌ ಆಗಿರಲಿದೆ.

ತಾತ್ಕಾಲಿಕ ಬಸ್‌ ನಿಲ್ದಾಣ: ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ 2.9 ಕೋಟಿ ವೆಚ್ಚದಲ್ಲಿ ತಾತ್ಕಾಲಿಕ ಬಸ್‌ ನಿಲ್ದಾಣ ನಿರ್ಮಾಣದ ಕಾರ್ಯ ಅಂತಿಮ ಹಂತದಲ್ಲಿದೆ.

ಬಸ್‌ ನಿಂತುಕೊಳ್ಳಲು ಸುಸಜ್ಜಿತ ಜಾಗದ ಜತೆಗೆ 10×10 ಅಡಿ ಸುತ್ತಳೆಯ 99 ಮಳಿಗೆಗಳು, ಪ್ರಯಾಣಿಕರ ಆನುಕೂಲಕ್ಕಾಗಿ ಶೌಚಾಲಯ, ನೆರಳು, ತಂಗುದಾಣ, ಒಳಗೊಂಡಂತೆ ಅಗತ್ಯ ಸೌಲಭ್ಯ ಒದಗಿಸಲಾಗುತ್ತಿದೆ. ತಾತ್ಕಾಲಿಕ ಬಸ್‌ ನಿಲ್ದಾಣದಲ್ಲಿ ಮಳಿಗೆಗಳ ನಿರ್ಮಾಣ ಮುಗಿದು, ಬಸ್‌ ನಿಲ್ಲುವ ಜಾಗದಲ್ಲಿ ಪೇವರ್ ಅಳವಡಿಸಲಾಗುತ್ತಿದೆ. ಎಲ್ಲಾ ಕೆಲಸ ಮುಗಿಸಿದ ನಂತರ ಸಂಬಂಧಿತರಿಗೆ ಹಸ್ತಾಂತರಿಸಲಾಗುವುದು. ಆ ನಂತರವೇ ತಾತ್ಕಾಲಿಕ ಖಾಸಗಿ ಬಸ್‌ ನಿಲ್ದಾಣ ಕಾರ್ಯಾರಂಭ ಪ್ರಾರಂಭ.

ಬಡಾವಣಾ ಪೊಲೀಸ್‌ ಠಾಣಾ ರಸ್ತೆಯ ಮೂಲಕ ಬಸ್‌ ನಿಲ್ದಾಣ ಪ್ರವೇಶಿಸುವ ಬಸ್‌ಗಳು ಎ.ವಿ. ಕಮಲಮ್ಮ ಮಹಿಳಾ ಕಾಲೇಜು ರಸ್ತೆಯ ಮೂಲಕ ವಿವಿಧ ಕಡೆಗೆ ತೆರಳಲಿವೆ.

ಒಟ್ಟಾರೆಯಾಗಿ ದಾವಣಗೆರೆಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಒಂದೊಂದೇ ಕೆಲಸ ಜನರ ಕಣ್ಣಿಗೆ ಕಾಣುವಂತಾಗುತ್ತಿದೆ.

ಮಾದರಿ ಬಸ್‌ ನಿಲ್ದಾಣ
ಖಾಸಗಿ ಬಸ್‌ ನಿಲ್ದಾಣ ಕಾಮಗಾರಿ ಟೆಂಡರ್‌ ಪ್ರಕ್ರಿಯೆ ಮುಗಿದಿದೆ. ಈಗಿರುವ ಖಾಸಗಿ ಬಸ್‌ ನಿಲ್ದಾಣ ಹೈಸ್ಕೂಲ್ ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಬಸ್‌ ನಿಲ್ದಾಣಕ್ಕೆ ಸ್ಥಳಾಂತರವಾಗುತ್ತಿದ್ದಂತೆಯೇ ಕಾಮಗಾರಿ ಪ್ರಾರಂಭವಾಗಲಿದೆ. ಇರುವಂತಹ ಕಡಿಮೆ ಜಾಗದಲ್ಲೇ ಅತ್ಯಾಧುನಿಕ, ಮಾದರಿ ಬಸ್‌ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎನ್ನುತ್ತಾರೆ ಸ್ಮಾರ್ಟ್‌ಸಿಟಿ ಯೋಜನೆ ಕಾರ್ಯಪಾಲಕ ಅಭಿಯಂತರ ಗುರುಪಾದಯ್ಯ.

ರಾ.ರವಿಬಾಬು

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.